ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಅಬಕಾರಿ ಸಚಿವ ಕೆ.ಗೋಪಾಲಯ್ಯ ಭರವಸೆ ನೀಡಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದಲ್ಲಿ ಶ್ರೀ ಜಯಮಾರುತಿ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ 32ನೇ ವರ್ಷದ ಹನುಮ ಜಯಂತಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾನು ಬದ್ಧನಾಗಿದ್ದು, ಆಡಳಿತ ಮಂಡಳಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕೋವಿಡ್ ಮೂರನೇ ಅಲೆ ಈಗಾಗಲೇ ಪ್ರಾರಂಭವಾಗಿರುವ ಸೂಚನೆಗಳು ಸಿಗುತ್ತಿವೆ. ಈ ಹಿನ್ನೆಲೆಯಲ್ಲಿ ಯಾರೂ ಕೂಡ ಮೈ ಮರೆಯಬಾರದು. ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವಂತೆ ಸಚಿವರು ಮನವಿ ಮಾಡಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮರಾಠಿಗರ ಮೇಲೆ ದಾಳಿ ನಡೆಯುತ್ತಿದೆ – ಸುಳ್ಳು ಆರೋಪ ಹೊರಿಸಿದ ಉದ್ಧವ್ ಠಾಕ್ರೆ
ನಂದಿನಿ ಬಡಾವಣೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ 2022ರ ಕ್ಯಾಲೆಂಡರನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮೇಯರ್ ಎಸ್. ಹರೀಶ್, ಜಯಸಿಂಹ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಲೋಕೇಶ್ ದೇವಸ್ಥಾನ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ