ಬೆಳಗಾವಿ: ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ. ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ರಮೇಶ್ ಕುಮಾರ್ ಅವರಿಗೆ ಮಾಧ್ಯಮಗಳ ಮೇಲೆ ಇನ್ನೂ ಕೋಪ ತಣ್ಣಗಾದಂತಿಲ್ಲ. ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ರಮೇಶ್ ಕುಮಾರ್ ನಕಾರ ಮಾಡಿದ್ದಾರೆ. ಮಾಧ್ಯಮಗಳ ಮುಂದೆ ಬಂದು ಕೈ ಮುಗಿದು ಜೀವಂತ ಇರೋರನ್ನು ಮಾತಾಡಿಸಿ, ನಾನು ಜೀವಂತ ಇಲ್ಲ, ನಾಲ್ಕು ದಿನಗಳ ಹಿಂದೆಯೇ ನಾನು ಸತ್ತು ಹೋಗಿದ್ದೇನೆ ಎಂದು ಹೇಳುತ್ತಾ ಹೊರಟಿದ್ದಾರೆ.
ಅತ್ಯಾಚಾರದ ಕುರಿತು ರಮೇಶ್ ಕುಮಾರ್ ಅವರು ಬೆಳಗಾವಿ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿ ಎಡವಟ್ಟು ಮಾಡಿಕೊಂಡಿದ್ದರು. ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರೇ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅವರು ಹೆಣ್ಣಿನ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎನ್ನುವ ಟೀಕೆಗಳು ವ್ಯಕ್ತವಾಗಿದ್ದವು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಟೀಕೆ
ಇತ್ತ ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಾಸಕರು, ಸಚಿವರು ಒತ್ತಾಯಿಸಿದ್ದರು. ನಂತರ ರಮೇಶ್ ಕುಮಾರ್ ಟ್ವೀಟ್ ಮಾಡಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದರು. ಅಲ್ಲದೆ ಸದನಸದಲ್ಲಿಯೂ ಎಲ್ಲರ ಮುಂದೆಯೂ ಕ್ಷಮೆ ಕೇಳಿದ್ದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್