ಮಾಜಿ ವಿಶ್ವಸುಂದರಿ, ನಟಿ ಐಶ್ವರ್ಯಾ ರೈಗೆ ಇ.ಡಿ ಸಮನ್ಸ್

Public TV
2 Min Read
aishwarya rai 2

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್‍ಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ.

Aishwarya Rai 2

ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ. ಮುಂಬೈನಲ್ಲಿರುವ ಅವರ ಪ್ರತೀಕ್ಷಾ ನಿವಾಸಕ್ಕೆ ಸಮನ್ಸ್ ತಲುಪಿದ್ದು, 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ತಿಳಿಸಲಾಗಿದೆ.

Aishwarya Rai 9

2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಪನಾಮಾ ಪೇಪರ್ಸ್ ಪ್ರಕರಣದಲ್ಲಿ ವಿದೇಶದಲ್ಲಿ ಹಣವನ್ನು ಸಂಗ್ರಹಿಸಿದ ಹಲವಾರು ಸೆಲೆಬ್ರಿಟಿಗಳ ಹೆಸರು ಕೆಳಿಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ ತಡೆ ಕಾಯ್ದೆ 2002(ಪೆಎಂಎಲ್‍ಎ)ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತಮ್ಮ ಹೇಳಿಕೆಯನ್ನು ದಾಖಲಿಸುವಂತೆ ಐಶ್ವರ್ಯಾ ರೈ ಬಚ್ಚನ್‍ಗೆ ಸೂಚಿಸಲಾಗಿದೆ. ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕವನ್ನು ಅವರು ಕೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 40 ಸಾವಿರ ವರ್ಷಗಳಿಂದ ಭಾರತೀಯರ ಡಿಎನ್‌ಎ ಒಂದೇ ಆಗಿದೆ: ಆರ್‌ಎಸ್‌ಎಸ್‌ ಮುಖ್ಯಸ್ಥ

aishwarya rai

ಈ ಹಿಂದೆ ಕೂಡ ಐಶ್ವರ್ಯಾರನ್ನು ವಿಚಾರಣೆಗೆ ಕರೆಯಲಾಗಿತ್ತು. ಆದರೆ ಆಗ ಅವರು ಎರಡು ಬಾರಿ ವಿಚಾರಣೆ ದಿನಾಂಕ ಮುಂದೂಡಲು ಕೇಳಿಕೊಂಡಿದ್ದರು ಎನ್ನಲಾಗಿದೆ. ಇದನ್ನೂ ಓದಿ:  ಹಿಂದುತ್ವದಲ್ಲಿ ನಂಬಿಕೆ ಇದ್ದವರು ಭಾರತೀಯರ DNA ಒಂದೇ ಎಂದು ಭಾವಿಸುತ್ತಾರೆ: ರಾಹುಲ್

Aishwarya Rai

ಏನಿದು ಪನಾಮ ಪೇಪರ್ ಕೇಸ್?
ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

Share This Article
Leave a Comment

Leave a Reply

Your email address will not be published. Required fields are marked *