– ಚಹಾ ಕೊಟ್ಟು ಪ್ರಜ್ಞೆ ತಪ್ಪಿಸಿದ್ಳು
ಲಕ್ನೋ: ಮದುವೆ ಮನೆಯ ಸಂಭ್ರಮದಲ್ಲಿ ಇದ್ದ ಮನೆ ಮಂದಿಗೆ ವಧು ಶಾಕ್ ನೀಡಿದ ಘಟನೆಯೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಚಹಾದಲ್ಲಿ ಪ್ರಜ್ಞೆತಪ್ಪಿಸುವ ಮದ್ದು ಬೆರೆಸಿದ ವಧು, ಮನೆಯಲ್ಲಿರುವ ಚಿನ್ನಾಭರಣದೊಂದಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಾಳೆ.
ಡಿಸೆಂಬರ್ 18 ರಂದು ಮದುವೆ ನಿಗದಿಯಾಗಿತ್ತು. ಡಿಸೆಂಬರ್ 17 ರಂದು, ಮದುವೆಯ ಸಿದ್ಧತೆಯಲ್ಲಿ ನಿರತರಾಗಿದ್ದ ಕುಟುಂಬ ಸದಸ್ಯರೆಲ್ಲರಿಗೂ ಕುಡಿಯಲು ಚಹಾವನ್ನು ನೀಡಿದ್ದಾಳೆ. ಕುಟುಂಬಸ್ಥರೆಲ್ಲರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ ಯುವತಿ ಮನೆಯಲ್ಲಿದ್ದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ಮದುವೆಗೆ ಒಂದು ದಿನ ಬಾಕಿ ಇರುವಾಗ ಅವಳು ತನ್ನ ಪ್ರೇಮಿಯೊಂದಿಗೆ ಓಡಿಹೋಗಿದ್ದಾಳೆ. ಕುಟುಂಬಸ್ಥರು ಎಚ್ಚರಗೊಂಡು ನೋಡಿದ್ದಾಗ ವಧು ಕಾಣದೆ ಇರುವುದರಿಂದ ಆತಂಕಗೊಂಡು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ
ಕುಟುಂಬದ ಕೆಲವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 1.5 ಲಕ್ಷ ರೂಪಾಯಿ ಹಾಗೂ ಬೆಲೆಬಾಳುವ ಚಿನ್ನಾಭರಣಗಳೊಂದಿಗೆ ಯುವತಿ ಪರಾರಿಯಾಗಿದ್ದಾಳೆ ಎಂದು ವಧುವಿನ ಕುಟುಂಬಸ್ಥರು ಯುವತಿಯ ವಿರುದ್ಧ ವರ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ
ವಧುವಿನ ಪೋಷಕರು ಸಾಕಷ್ಟು ಪ್ರಯತ್ನದ ನಂತರ ತಮ್ಮ ಹಿರಿಯ ಮಗಳಿಗೆ ಸೂಕ್ತ ವರನನ್ನು ಕಂಡುಕೊಂಡಿದ್ದರು. ಮದುವೆಗೆ ಎಲ್ಲ ಸಿದ್ಧತೆಗಳು ನಡೆದಿದ್ದವು, ಅತಿಥಿಗಳು ಬಂದಿದ್ದರು ಆದರೆ ಕೊನೆ ಕ್ಷಣದಲ್ಲಿ ಮಗಳು ಮಾಡಿದ ಮೋಸದಿಂದ ಮದುವೆ ನಿಂತಿತು. ಮೊದಲ ಮಗಳು ಮೋಸ ಮಾಡಿ ಹೋಗಿರುವ ವಿಚಾರವಾಗಿ ನೊಂದಿರುವ ಕುಟುಂಬದವರು ತಮ್ಮ ಕಿರಿಯ ಮಗಳನ್ನು ವರನಿಗೆ ಮದುವೆ ಮಾಡುವ ಪ್ರಸ್ತಾಪ ಇಟ್ಟಿದ್ದಾರೆ. ಆಗ ಎರಡೂ ಕಡೆಯ ಹಿರಿಯರ ಚರ್ಚೆಯ ನಂತರ ವರನು ವಧುವಿನ ತಂಗಿಯನ್ನು ಮದುವೆಯಾಗಲು ಒಪ್ಪಿದ್ದಾನೆ. ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ