ಕಾಶ್ಮೀರದಲ್ಲಿ ಉಗ್ರರ ದಾಳಿ – ಪೊಲೀಸ್‌ ಅಧಿಕಾರಿ, ನಾಗರಿಕ ಹತ್ಯೆ

Public TV
1 Min Read
kashmir

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌, ಶ್ರೀನಗರದಲ್ಲಿ ಉಗ್ರರು ಪ್ರತ್ಯೇಕ ಎರಡು ಕಡೆ ಇಂದು ಸಂಜೆ ನಡೆಸಿದ ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಹಾಗೂ ಒಬ್ಬ ನಾಗರಿಕ ಹತ್ಯೆಯಾಗಿದ್ದಾರೆ.

FotoJet 5 8

ಅನಂತನಾಗ್‌ ಪಟ್ಟಣದ ಬಿಜ್ಬೆಹಾರ್‌ನಲ್ಲಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಅಧಿಕಾರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿತ್ತು. ದಾಳಿಯಲ್ಲಿ ಪೊಲೀಸ್‌ ಅಧಿಕಾರಿ ಗಂಭೀರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಿಲಯನ್ಸ್‌, ಪತಂಜಲಿ, ಟಾಟಾ, ಇನ್ಫೋಸಿಸ್‌ ಸೇರಿ 11 ಖಾಸಗಿ ಸಂಸ್ಥೆಗಳಿಗೆ ಸಿಐಎಸ್‌ಎಫ್‌ ಭದ್ರತೆ

ಮೃತ ಅಧಿಕಾರಿ ಮೊಹಮ್ಮದ್‌ ಅಶ್ರಫ್‌ ಎಂದು ಗುರುತಿಸಲಾಗಿದೆ. ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

kashmir 1

ಮತ್ತೊಂದೆಡೆ ಶ್ರೀನಗರದಲ್ಲಿ ನಡೆದ ದಾಳಿಯಲ್ಲಿ ನಾಗರಿಕನೊಬ್ಬ ಮೃತಪಟ್ಟಿದ್ದಾನೆ. ರೌಫ್‌ ಅಹಮದ್‌ ಎಂಬ ನಾಗರಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ನಾಗರಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Share This Article
Leave a Comment

Leave a Reply

Your email address will not be published. Required fields are marked *