Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

Belgaum

ಮತಾಂತರ ಬಿಲ್ ತರಲು ಕಾಂಗ್ರೆಸ್ ಸಜ್ಜಾಗಿತ್ತು – ಅಂದಿನ ಸಭೆ ಬಗ್ಗೆ ಸಿದ್ದರಾಮಯ್ಯ ಮಾತು

Public TV
Last updated: December 23, 2021 9:28 pm
Public TV
Share
4 Min Read
SIDDRAMAIHA 4
SHARE

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಬಿಲ್ ತರೋದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತೆ ಎಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ತರಲಿಲ್ಲ ಎಂದು ಬಿಜೆಪಿ ಆರೋಪದ ಬೆನ್ನಲ್ಲೇ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

BELAGAVI SESSION

ಪೋಸ್ಟ್‌ನಲ್ಲಿ ಏನಿದೆ?
ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ ಅಪರಾಧ ಎಂದು ನಮ್ಮ ಸಂವಿಧಾನದಲ್ಲೇ ಸ್ಪಷ್ಟವಾಗಿ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೊಸ ಮತಾಂತರ ನಿಷೇಧ ಕಾಯ್ದೆಯ ಅಗತ್ಯವೇನಿದೆ? ಇದೇ ಕಾರಣಕ್ಕೆ ನಾವು ಕಾಯ್ದೆಯನ್ನು ವಿರೋಧ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ. ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ. ಇದನ್ನೂ ಓದಿ: 2016ರಲ್ಲೇ ಮತಾಂತರ ಬಿಲ್ – ಕಾಂಗ್ರೆಸ್ ಡಬಲ್ ಸ್ಟ್ಯಾಂಡರ್ಡ್

ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ. ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಇದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ. ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ. ಮತಾಂತರ ನಿಷೇಧ ಕುರಿತ ಈ ಹಿಂದಿನ ಕರಡು ಪ್ರತಿಗೂ, ಈಗಿನ ಮಸೂದೆಗೂ ಇರುವ ಪ್ರಮುಖ ವ್ಯತ್ಯಾಸಗಳೆಂದರೆ. ಮೊದಲನೆಯದು ಹಿಂದಿನ ಕರಡು ಪ್ರತಿಯ ನಿಯಮ 3ರಲ್ಲಿ ವಿವಾಹ ಎಂಬ ಪದ ಬಳಕೆ ಇರಲಿಲ್ಲ. ಬಿಜೆಪಿಯವರು ತಮ್ಮ ಕಾಯ್ದೆಯಲ್ಲಿ ವಿವಾಹವನ್ನು ಹೊಸದಾಗಿ ಸೇರಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

ಭಾರತೀಯ ದಂಡ ಸಂಹಿತೆಯ ಪ್ರಕಾರ ಸಾಕ್ಷಾಧಾರಗಳ ಕೊರತೆ ಕಂಡುಬಂದರೆ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆದರೆ ಈ ಹೊಸ ಮಸೂದೆಯ ನಿಯಮ 12 ರ ಪ್ರಕಾರ ಸಾಕ್ಷಾಧಾರ ಕೊರತೆ ಇದ್ದರೂ ಅದು ದೂರುದಾರನಿಗೆ ಅನುಕೂಲ ಮಾಡಿಕೊಡಲಿದೆ. ಹೀಗಾಗಿ ಇದು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ. ಸಂವಿಧಾನದ 21 ಮತ್ತು 25ನೇ ವಿಧಿಯನ್ವಯ ಒಬ್ಬ ವ್ಯಕ್ತಿ ತನಗಿಷ್ಟವಾದ (ಯಾವುದೇ ಧರ್ಮಕ್ಕೆ ಸೇರಿದವರಾದರೂ ಸರಿ) ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಲು ಸಂಪೂರ್ಣ ಸ್ವಾತಂತ್ರ್ಯ ನೀಡಿರುವಾಗ, ಅದನ್ನು ಬೇಡ ಎನ್ನಲು ಸರ್ಕಾರಕ್ಕೇನು ಹಕ್ಕಿದೆ? ಇದೇ ಕಾರಣಕ್ಕೆ ಗುಜರಾತ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಗೆ ತಡೆಯಾಜ್ಞೆ ನೀಡಿರುವ ಗುಜರಾತ್ ಹೈಕೋರ್ಟ್, ಅಲ್ಲಿನ ಸರ್ಕಾರಕ್ಕೆ ಛೀಮಾರಿ ಹಾಕಿದೆ.  ಇದನ್ನೂ ಓದಿ: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು? 

ಗುಜರಾತ್, ಉತ್ತರ ಪ್ರದೇಶ ಸರ್ಕಾರಗಳ ಮತಾಂತರ ನಿಷೇಧ ಕಾಯ್ದೆಯಲ್ಲಿ ಬಳಕೆ ಮಾಡಿರುವ ಪದಗಳು, ವಾಕ್ಯಗಳೇ ಇಲ್ಲಿಯೂ ಯಥಾವತ್ತಾಗಿವೆ. ಈ ಎಲ್ಲಾ ಸರ್ಕಾರಗಳ ಕರಡು ತಯಾರಿಕೆಯ ಹಿಂದೆ ಯಾವುದೋ ಒಂದು ಕಾಣದ ಕೈ ಇದೆ ಎಂಬ ಅನುಮಾನ ನನಗಿದೆ. ಅದು ಯಾವುದು ಎಂದು ಬಿಜೆಪಿ ಸರ್ಕಾರ ಬಹಿರಂಗಪಡಿಸಬೇಕು. ದೇಶದಲ್ಲಿ ಶತಮಾನಗಳ ಹಿಂದಿನಿಂದಲೂ ಮತಾಂತರ ನಡೆದುಕೊಂಡು ಬಂದಿದೆ. ಬ್ರಾಹ್ಮಣ ಜಾತಿಯಲ್ಲಿ ಹುಟ್ಟಿದ ಪಂಪ, ರನ್ನರು ಜೈನ ಧರ್ಮಕ್ಕೆ ಮತಾಂತರ ಗೊಂಡರು. ಸಾಮ್ರಾಟ್ ಆಶೋಕ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಹೋಗಿಲ್ಲವೇ? ಇದಕ್ಕೆ ಕಾರಣವೇನು ಎಂಬುದು ಯಾರಿಗೂ ತಿಳಿಯದ ವಿಷಯವಲ್ಲ. ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಬ್ರಾಹ್ಮಣರಾಗಿ ಹುಟ್ಟಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿಲ್ಲವೇ? ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಲಕ್ಷಾಂತರ ಜನರ ಜೊತೆಗೆ ಬೌದ್ಧ ಧರ್ಮಕ್ಕೆ ಮತಾಂತರ ಆಗಿಲ್ಲವೇ? ಇವರ್ಯಾರು ಅಧಿಕಾರವೋ ಅಥವಾ ಇನ್ಯಾವುದೋ ಕಾರಣಕ್ಕೆ ಮತಾಂತರಗೊಂಡವರಲ್ಲ. ರಾಜ್ಯದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಕ್ರಿಶ್ಚಿಯನ್ ಮತ್ತು ಮುಸ್ಲಿಂಮರ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ.

2001 ಮತ್ತು 2011 ರ ಜನಗಣತಿಯನ್ನು ನೋಡಿದರೆ ಸತ್ಯ ಏನೆಂದು ಅರಿವಾಗುತ್ತದೆ. 2001 ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆಯಲ್ಲಿ 83.86% ಹಿಂದೂಗಳ ಪ್ರಮಾಣ ಇತ್ತು, ಅದು 2011 ಕ್ಕೆ ಶೇ. 84 ಕ್ಕೆ ಏರಿಕೆಯಾಗಿದೆ. ಮುಸ್ಲಿಮರ ಪ್ರಮಾಣ 12.23% ಇಂದ 12.92 ಕ್ಕೆ ಹೆಚ್ಚಾಗಿದೆ. ಕ್ರೈಸ್ತರ ಪ್ರಮಾಣ 1.91% ಇಂದ 1.87% ಗೆ ಇಳಿಕೆಯಾಗಿದೆ. ಇದು ನಮ್ಮ ರಾಜ್ಯದ ವಾಸ್ತವ ಸ್ಥಿತಿ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಸಂವಿಧಾನದ ಮೂಲ ನಿಯಮ. ಆದರೆ ರಾಜ್ಯ ಸರ್ಕಾರದ ಮತಾಂತರ ನಿಷೇಧ ಕಾಯ್ದೆಯಲ್ಲಿ ಮಹಿಳೆಯರು, ಅಪ್ರಾಪ್ತರು, ಬುದ್ಧಿಭ್ರಮಣೆಯಾದವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡಿದರೆ ಮಾತ್ರ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ. ಈ ಅಸಮಾನತೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಹಿಂದೂ ಧರ್ಮದ ಜಾತಿಯತೆ, ಅಸ್ಪೃಶ್ಯತೆ, ಅಸಮಾನತೆಗಳನ್ನು ಕಿತ್ತುಹಾಕಲು ಪ್ರಯತ್ನ ಮಾಡಿದ ಬಾಬಾ ಸಾಹೇಬರು, ಅದು ಸಾಧ್ಯವಾಗದಿದ್ದಾಗ “ಹಿಂದೂವಾಗಿ ಹುಟ್ಟಿದ್ದೇನೆ, ಹಿಂದೂವಾಗಿ ಸಾಯಲಾರೆ” ಎಂದು ಬೌದ್ಧ ಧರ್ಮಕ್ಕೆ ಮತಾಂತರ ಗೊಂಡರು. ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಇಚ್ಛೆಯಿಂದ ಮತಾಂತರಗೊಳ್ಳಲು ಕರೆನೀಡಿದ್ದು ನಿಜವಲ್ಲವೇ? ಬಲವಂತದಿಂದ, ಆಸೆ ಆಮಿಷ ಒಡ್ಡಿ, ಹೆದರಿಸಿ ಬೆದರಿಸಿ, ಮೋಸದ ಮೂಲಕ ಮತಾಂತರ ಮಾಡುವುದನ್ನು ನಾನು ವಿರೋಧಿಸುತ್ತೇನೆ. ಇದರ ಜೊತೆಗೆ ಜಾತೀಯತೆ, ಅಸ್ಪೃಶ್ಯತೆ ಅನುಸರಿಸುತ್ತಿರುವವರಿಗೂ ಕಠಿಣ ಶಿಕ್ಷೆಯಾಗಬೇಕು ಎಂಬುದು ನನ್ನ ಒತ್ತಾಯ.

ಮತಾಂತರವನ್ನು ದೂಷಿಸುವ ಬದಲು, ಮತಾಂತರವಾಗಲು ನಮ್ಮಲ್ಲಿರುವ ದೋಷಗಳೇನು ಎಂಬುದನ್ನು ಗುರುತಿಸಿ ಸರಿಪಡಿಸುವ ಕೆಲಸವನ್ನು ಮಾಡಬೇಕು ಎಂದು ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಇದು ನಾವು ಮಾಡಲೇಬೇಕಾದ ಕೆಲಸ. ರಾಜ್ಯ ಬಿಜೆಪಿ ಸರ್ಕಾರದ ಮತಾಂತರ ನಿಷೇಧ ಕಾಯ್ದೆ ಅಮಾನವೀಯ, ಸಂವಿಧಾನ ಬಾಹಿರ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯ ಮಾಡುತ್ತೇನೆ.

TAGGED:Anti-conversion BillbelagaviKarnataka Assemblysiddaramaiahಕಾಂಗ್ರಸ್ಬಿಜೆಪಿಮತಾಂತರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
5 minutes ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
47 minutes ago
Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
50 minutes ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
1 hour ago
Lightning
Districts

ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

Public TV
By Public TV
2 hours ago
auto gas
Bengaluru City

ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್‌ – ಲೀಟರ್‌ಗೆ 100 ರೂ. ಏರಿಸಿದ್ದಕ್ಕೆ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?