ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ: ಮುನೇನಕೊಪ್ಪ

Public TV
2 Min Read
shankar patil munenakoppa 1 1

ಹುಬ್ಬಳ್ಳಿ: ಹಿರಿಯ ನಾಯಕರು ಹೇಳಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಆಗಲ್ಲ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸಲು ಯಾವ ಮುಖಂಡರು ಪ್ರಯತ್ನ ಪಟ್ಟಿಲ್ಲ. ಉತ್ತರ ಕರ್ನಾಟಕ ಭಾಗಕ್ಕೆ ಸಿಕ್ಕ ಸಿಎಂ ಪಟ್ಟ ಉಳಿಸಿಕೊಳ್ಳುತ್ತೇವೆ ಎಂದರು.

basavaraj bommai

ಮತಾಂತರ ಮಸೂದೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮನಸ್ಸಿನಲ್ಲಿ ಮತಾಂತರ ಕಾಯ್ದೆ ಬರಬೇಕು ಎಂಬ ಬಯಕೆ ಇದೆ. ಈ ವಿಚಾರ ಮೊನ್ನೆ ನಡೆದ ಕಲಾಪದಲ್ಲಿ ಸಾಬೀತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

Siddaramaiah 4

ಮಹಿಳೆಯರ ರಕ್ಷಣೆ ವಿಚಾರವಾಗಿ ಮಾತನಾಡಿ, ಗಾರ್ಮೆಂಟ್ ಕ್ಷೇತ್ರದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ಅಗತ್ಯ ಕ್ರಮ ವಹಿಸಲಾಗಿದೆ. ಎಲ್ಲಾ ಗಾರ್ಮೆಂಟ್ ಮಾಲೀಕರ ಜೊತೆ ಮಾತನಾಡಿದ್ದೇವೆ ಎಂದು ಭರವಸೆ ನೀಡಿದ ಅವರು, ಟೆಕ್ಸ್ಟೈಲ್ಸ್ನಲ್ಲಿ ನೇಕಾರರ ಮಕ್ಕಳಿಗೆ ವಿದ್ಯಾನಿಧಿ ನೀಡಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮೆಸ್ಕಾಂ ಇಲಾಖೆಯ ಅವ್ಯವಹಾರ ಬಯಲುಗೊಳಿಸಿ ಅಧಿಕಾರಿಗಳಿಗೆ ಈಶ್ವರಪ್ಪ ಕ್ಲಾಸ್

ಮಹಿಕೋ ಕಂಪೆನಿ ವಿತರಿಸಿದ ಹತ್ತಿ ಬೀಜ ಕಳಪೆ ಎಂಬ ದೂರು ರೈತರಿಂದ ಬಂದಿದೆ. ಕೃಷಿ ಇಲಾಖೆಗೆ ಅಗತ್ಯ ಕ್ರಮ ವಹಿಸಲು ಸೂಚಿಸಲಾಗುವುದು ಎಂದರು.

Shankar Patil MLA Navalgund

ರಾಜ್ಯ ಕಾರ್ಯಕಾರಿಣಿ ಸಭೆಯ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜನೆ ಆಗಿರುವುದು ಸಂತಸದ ವಿಚಾರವಾಗಿದೆ. ಕಾರ್ಯಕಾರಿಣಿ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಚುನಾವಣೆಯ ಸೋಲು, ಗೆಲವುಗಳ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲಾಗುವುದು. ಜೊತೆಗೆ ಗೆಲ್ಲಲು ಕಾರಣವಾದ ಅಂಶಗಳೇನು ಹಾಗೂ ಜನ ಕೈ ಬಿಡಲು ಕಾರಣವೇನು ಎಂಬ ವಿಚಾರಗಳ ಕುರಿತು ಚರ್ಚೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: 29 ವರ್ಷದ ಬಳಿಕ ಪಾಕಿಸ್ತಾನದ ಜೈಲಿನಿಂದ ತಾಯಿನಾಡಿಗೆ ಕಾಲಿಟ್ಟ ಕುಲದೀಪ್ ಸಿಂಗ್

shankar patil munenakoppa 1

ಬೆಳಗಾವಿಯಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲು ಹಾಗೂ ಹಾನಗಲ್ ಉಪಚುನಾವಣೆ ಸೋಲಿನ ಬಗ್ಗೆ ಈಗಾಗಲೇ ಆತ್ಮಾವಲೋಕನ ಆಗಿದೆ ಎಂದ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

BJP LOGO

ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಕಾರ್ಯಕಾರಿಣಿ ಸಭೆ ಲೋಗೋವನ್ನು ಬಿಡುಗಡೆ ಮಾಡಲಾಯಿತು. ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ದತ್ತಮೂರ್ತಿ ಕುಲಕರ್ಣಿ ಇತರರಿದ್ದರು. ಇದನ್ನೂ ಓದಿ:  ತನ್ನ ಬರ್ತ್‌ಡೇ ಪಾರ್ಟಿ ಸಿದ್ಧತೆಗೆ ಫಾರ್ಮ್‌ಹೌಸ್‌ಗೆ ಹೋಗಿದ್ದ ಸಲ್ಲುಗೆ ಹಾವು ಕಡಿತ!

Share This Article
Leave a Comment

Leave a Reply

Your email address will not be published. Required fields are marked *