ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

Public TV
1 Min Read
night curfew 1

ತಿರುವನಂತಪುರಂ: ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಕೇರಳದಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರೆಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಭೆ ನಡೆಸಿ ಈ ಕುರಿತಂತೆ ಕೇರಳ ಸರ್ಕಾರ ನೈಟ್ ಕರ್ಫ್ಯೂಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಅದರಂತೆ ಡಿಸೆಂಬರ್ 31ರಿಂದ ಬಾರ್‌ಗಳು, ಹೋಟೆಲ್‍ಗಳು, ಕ್ಲಬ್‍ಗಳು ಮತ್ತು ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳು ರಾತ್ರಿ 10 ಗಂಟೆಯ ಬಳಿಕ ಕಾರ್ಯನಿರ್ವಹಿಸುವಂತಿಲ್ಲ. ಇದನ್ನೂ ಓದಿ: ಸ್ಥಳೀಯಾಡಳಿತಗಳ ಚುನಾವಣೆ ಯಶಸ್ವಿ – ಡಿ.30ಕ್ಕೆ ಫಲಿತಾಂಶ

CORONA 2

ಸಮುದ್ರ, ಶಾಪಿಂಗ್ ಮಾಲ್, ಸಾರ್ವಜನಿಕ ಉದ್ಯಾನವನ ಸೇರಿದಂತೆ ಇತರ ಸ್ಥಳಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.  ಇದನ್ನೂ ಓದಿ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯ ಆತ್ಮಹತ್ಯೆ

Night Curfewದೆಹಲಿ, ಮಹಾರಾಷ್ಟ್ರ, ಕರ್ನಾಟಕ, ಗುಜರಾತ್ ಮತ್ತು ಉತ್ತರ ಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಓಮಿಕ್ರಾನ್ ಭೀತಿಯಿಂದ ಈಗಾಗಲೇ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ಕೇರಳದಲ್ಲಿ 57 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು 1,636 ಕೋವಿಡ್ ಸಕ್ರಿಯ ಪ್ರಕರಣಗಳು ಮತ್ತು 256 ಸಾವು ವರದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *