ಬೆಂಗಳೂರು: ಚಂದನವನದ ಯುವರತ್ನ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 2 ತಿಂಗಳು ಕಳೆದಿದ್ದು, ಇಂದು ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಅಪ್ಪು ಅಗಲಿ ಇಂದಿಗೆ 2 ತಿಂಗಳು ಕಳೆದ ಹಿನ್ನೆಲೆ, ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿಯನ್ನು ಹೂಗಳಿಂದ ಸಿಂಗರಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಪುನೀತ್ ಪತ್ನಿ ಅಶ್ವಿನಿ, ಮಕ್ಕಳು, ಯುವರಾಜ್ ರಾಘವೇಂದ್ರ ರಾಜ್‍ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದ ಸದಸ್ಯರು ಭಾಗಿಯಾಗಿದ್ದರು. ಇದನ್ನೂ ಓದಿ: ಆನೇಕಲ್‍ನಲ್ಲಿ ಮತ್ತೊಂದು ಓಮಿಕ್ರಾನ್ ಪ್ರಕರಣ ದೃಢ – ರಾಜ್ಯದಲ್ಲಿ 39ಕ್ಕೇರಿದ ಸಂಖ್ಯೆ
ಅಶ್ವಿನಿ ಮತ್ತು ಮಕ್ಕಳು ಸಮಾಧಿಗೆ ಪೂಜೆ ಸಲ್ಲಿಸಿದ್ದು, ಅಪ್ಪು ಸಮಾಧಿಯನ್ನು ನೋಡುತ್ತ ಭಾವುಕರಾಗಿದ್ದಾರೆ.
ಅಪ್ಪು ಅಗಲಿ 2 ತಿಂಗಳಾದರೂ ಅಭಿಮಾನಿಗಳ ದಂಡು ಮಾತ್ರ ಸಮಾಧಿ ಬಳಿ ಕಡಿಮೆಯಾಗಿಲ್ಲ. ಅಪ್ಪು ನಿಧನರಾಗಿ 2 ತಿಂಗಳ ಕಾರ್ಯವಿರುವುದರಿಂದ ಸಾವಿರಾರು ಅಭಿಮಾನಿಗಳು ಅವರ ಸಮಾಧಿ ಬಳಿ ದರ್ಶನಕ್ಕೆ ಆಗಮಿಸಿದ್ದರು. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ