ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ

Public TV
1 Min Read
accident nelamangala

ನೆಲಮಂಗಲ: ದಟ್ಟವಾದ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಬೆಳಗ್ಗೆ ಸರಣಿ ಅಪಘಾತ ನಡೆದಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಟಿ.ಬೇಗೂರು ಬಳಿ ನಡೆದಿದೆ.

accident nelamangala 3

ದಟ್ಟವಾದ ಮಂಜು ಕವಿದಿದ್ದ ವೇಳೆ ಲಾರಿಯೊಂದು ಬ್ರೇಕ್ ಹಾಕಿದ್ದರಿಂದ ಹಿಂದುಗಡೆಯಿಂದ ಬರುತ್ತಿದ್ದ ಎರಡು ಬಸ್, ಎರಡು ಕಾರು, ಎರಡು ಲಾರಿ ಮತ್ತು ಒಂದು ಜೀಪ್ ಕೂಡ ಅಪಘಾತಕ್ಕೆ ಒಳಗಾಗಿವೆ. ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ದೂರ ಟ್ರಾಫಿಕ್ ಜಾಮ್ ಆಗಿ ಸಂಚಾರ ಅಸ್ತವ್ಯಸ್ತವಾಯಿತು. ಇದನ್ನೂ ಓದಿ:  ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

accident nelamangala 1

ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನೂ ಅಪಘಾತದಲ್ಲಿ 9 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಚಾಲಕನೊಬ್ಬ ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.

accident nelamangala 2

ಭೀಕರ ಅಪಘಾತದಿಂದಾಗಿ ಕ್ಯಾಂಟರ್ ನಲ್ಲಿದ್ದ ಈರುಳ್ಳಿ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:  ಗ್ಯಾಂಗ್ ವಾರ್ ದ್ವೇಷಕ್ಕೆ ಇಬ್ಬರು ಮಕ್ಕಳು ಸೇರಿ 8 ಮಂದಿ ಬಲಿ

Share This Article
Leave a Comment

Leave a Reply

Your email address will not be published. Required fields are marked *