ತಿರುವನಂತಪುರಂ: ಮನೆಯಲ್ಲಿ ಮಹಿಳೆಯ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೇರಳದ ಉತ್ತರ ಪರವೂರ್‌ನಲ್ಲಿ ನಡೆದಿದೆ.
ವಿಸ್ಮಯಾ (25) ಮೃತ ದುರ್ದೈವಿ. ಮನೆಯಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಸಿಕೊಂಡಿದೆ. ಇದನ್ನು ಗಮನಿಸಿದ ನೆರೆಹೊರೆಯವರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಆದರೆ ಈಕೆಯ ಸಹೋದರಿ ಮನೆಯಿಂದ ಹೊರಗೆ ಬರುತ್ತಿರುವುದನ್ನೂ ಜನ ಗಮಿಸಿದ್ದು, ಅನುಮಾನ ವ್ಯಕ್ತಪಡಿಸಿದ್ದಾರೆ. ಆಕೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ ಎಂದು ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ರಿಕ್ಷಾ ಕೊಡಿಸೆಂದು ತಾಯಿ ಜೊತೆ ಜಗಳವಾಡ್ತಿದ್ದವ ಸಹೋದರನಿಂದ್ಲೇ ಕೊಲೆಯಾದ!
ಘಟನೆಯ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶವವನ್ನು ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮಹಿಳೆಯ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಯ ನಂತರ ಕಿರಿಯ ಸಹೋದರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಕೆಗಾಗಿ ಹುಡುಕಾಟ ನಡೆಸುತ್ತಿದ್ದೇವೆ. ನಾಪತ್ತೆಯಾಗಿರುವ ಆಕೆಯ ಸಹೋದರಿಯನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪರವೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಶಿರಾದಲ್ಲಿ ಜೆಡಿಎಸ್ ಮುಳುಗಿತು ಅನ್ನುತ್ತಿದ್ದವರಿಗೆ ಜನ ಉತ್ತರ ನೀಡಿದ್ದಾರೆ: ಹೆಚ್‍ಡಿಕೆ