ಜೈನ್ ಮೇಲಿನ ಐಟಿ ದಾಳಿ ಹಿಂದೆ ಬಿಜೆಪಿ ಕೈವಾಡ ಇದೆ: ಅಖಿಲೇಶ್ ಯಾದವ್

Public TV
1 Min Read
Akhilesh Yadav

ಲಕ್ನೋ: ಸುಗಂಧ ದ್ರವ್ಯದ ಉದ್ಯಮಿ ಪುಷ್ಪರಾಜ್ ಜೈನ್ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷವನ್ನು ಗುರಿಯಾಗಿ ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಆಢಳಿತ ಪಕ್ಷದ ವಿರುದ್ಧವಾಗಿ ಆರೋಪ ಮಾಡಿದ್ದಾರೆ.

ಪುಷ್ಪರಾಜ್ ಜೈನ್‍ಗೆ ಸಂಬಂಧಿಸಿದ ಒಟ್ಟು 50 ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಸುಗಂಧ ದ್ರವ್ಯದ ಉದ್ಯಮಿಯಾಗಿರುವ ಪುಷ್ಪರಾಜ್ ಜೈನ್ ಸಮಾಜವಾದಿ ಪಕ್ಷದ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈ ಕುರಿತಾಗಿ ಮಾತನಾಡಿ ಅಖಿಲೇಶ್ ಯಾದವ್ ಅವರು, ಬಿಜೆಪಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ

akhilesh yadav

ಈ ಮೊದಲು ಪಿಯೂಷ್ ಜೈನ್ ಮನೆ ಮೇಲೆ ಐಟಿ ದಾಳಿ ನಡೆಸಲು ಬಿಜೆಪಿ ಮುಂದಾಗಿತ್ತು. ಆದರೆ ಆ ವ್ಯಕ್ತಿ ಬಿಜೆಪಿಯವರೇ ಎಂದು ಗೊತ್ತಾದ ಬಳಿಕ ಬಿಜೆಪಿಗೆ ನಿರಾಸೆಯಾಯಿತು. ತಮ್ಮ ಪಕ್ಷದ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸುಗಂಧ ದ್ರವ್ಯ ವ್ಯಾಪಾರಿ ಪುಷ್ಪರಾಜ್ ಜೈನ್ ಅವರಿಗೆ ಸೇರಿದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿ ಮಾಡಿದ್ದಾರೆ. ಪಿಯೂಷ್ ಜೈನ್ ಬಂಧನಕ್ಕೆ ಕಾರಣವಾದ ಶಿಕಾರ್ ಪಾನ್ ಮಸಾಲಾ ಸಾಗಣೆಗೂ ಪ್ರಧಾನಿ ಮೋದಿಗೂ ಸಂಬಂಧವಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೇಡಿಕೆ

Akhilesh Yadav

ಕಾನ್ಪುರ ಮೂಲದ ಸುಗಂಧ ದ್ರವ್ಯದ ಉದ್ಯಮಿ ಪಿಯೂಷ್ ಜೈನ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 197 ಕೋಟಿ ರೂ.ಗೂ ಹೆಚ್ಚು ನಗದು, 20 ಕೆಜಿಗೂ ಹೆಚ್ಚು ಚಿನ್ನ ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಪುಷ್ಪರಾಜ್ ಜೈನ್ ಮತ್ತು ಪಿಯೂಷ್ ಜೈನ್ ನೆರೆಹೊರೆಯವರಾಗಿದ್ದು, ಒಂದೇ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *