ತುಮಕೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಇನ್ನೂ ಹೆಚ್ಚಾಗುತ್ತಿದೆ. ಜನರು ಸೋಂಕು ತಗುಲದ ಹಾಗೆ ಎಚ್ಚರಿಕೆಯನ್ನು ವಹಿಸಬೇಕು. ಸದ್ಯ ಕೋವಿಡ್ ರೂಪಾಂತರಿ ಓಮಿಕ್ರಾನ್ ಹೆಚ್ಚಳವಾಗುತ್ತಿದೆ. ಜನರು ತಮಗೆ ತಾವೇ ಸ್ವಯಂ ನಿರ್ಬಂಧ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರತಿಯೊಬ್ಬರೂ ಕೋವಿಡ್ ನಿಯಮ ಪಾಲನೆ ಮಾಡಬೇಕು. ಜೊತೆಗೆ ಮೊದಲ ಡೋಸ್ ಲಸಿಕೆ ಪಡೆದ ಎಲ್ಲರೂ ಎರಡನೇ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಕೇವಲ ಒಂದು ಡೋಸ್ ಮಾತ್ರ ಪಡೆದು ಸುಮ್ಮನಾಗಬಾರದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ನೋಡು ಗುರು ಟಿಕೆಟ್ ಕೊಡ್ತೀನಿ, ಗೆದ್ದು ಬಂದು ಮಿನಿಸ್ಟರ್ ಆಗು ಎಂದಿದ್ದರು ಡಿಕೆಶಿ: ಆಂಜನಮೂರ್ತಿ
ಕೋವಿಡ್ ರೂಪಾಂತರಿ ಎರಡನೇ ಅಲೆಗಿಂತ ಮೂರನೇ ಅಲೆ ವೇಗವಾಗಿ ಹರಡುತ್ತಿದೆ. ಇದು ಅಪಾಯಕಾರಿ ಅಲ್ಲದಿದ್ದರೂ ವೇಗವಾಗಿ ಹರಡಿ ಜನರ ಆರೋಗ್ಯ ಹದಗೆಡಿಸುತ್ತಿದೆ. ಹಾಗಾಗಿ ಜನರು ಅತ್ಯಂತ ಜಾಗೃತೆಯಿಂದ ಇರಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಈ ಪೂಜಾರಿಯ ಪಾದ ಸ್ಪರ್ಶ ಮಾಡಿದರೆ ಇಷ್ಟಾರ್ಥ ಸಿದ್ಧಿ – ಅರಸೀಕೆರೆಯಲ್ಲಿ ವಿಶಿಷ್ಟ ಆಚರಣೆ