Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ನಾಡಿನ ಐತಿಹಾಸಿಕ ಸ್ಥಳಗಳ ಮಹತ್ವ ಸಾರುವ ಗ್ರಂಥ ಸರಣಿ ಪ್ರಕಟಣೆಗೆ ಯೋಜನೆ: ಬೊಮ್ಮಾಯಿ

Public TV
Last updated: January 2, 2022 10:01 pm
Public TV
Share
3 Min Read
BASAVARJ BOMMAI PROGRAM DWD 1
SHARE

ಧಾರವಾಡ: ಚಾರಿತ್ರಿವಾಗಿ, ಸಾಂಸ್ಕೃತಿಕವಾಗಿ ಮಹತ್ವ ಪಡೆದಿರುವ ಧಾರವಾಡ ಸೇರಿದಂತೆ ನಾಡಿನ ಪ್ರಮುಖ ಸ್ಥಳಗಳ ಕುರಿತು ಗ್ರಂಥಗಳ ಸರಣಿ ಪ್ರಕಟಿಸುವ ಯೋಜನೆಯನ್ನು ರೂಪಿಸಿ ಮುಂಬರುವ ಆಯವ್ಯಯದಲ್ಲಿ ಹಣ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

BASAVARJ BOMMAI DWD PROGRAM

ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಪಾಟೀಲ್ ಪುಟ್ಟಪ್ಪ ಸಭಾಂಗಣದಲ್ಲಿ ಇಂದು ಚನ್ನವೀರಗೌಡ ಅಣ್ಣಾ ಪಾಟೀಲ್ ಸಂಸ್ಮರಣಾ ದತ್ತಿ ಹಾಗೂ ಟ್ರಸ್ಟ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇತಿಹಾಸವನ್ನು ಅರಿಯದವರು ಇತಿಹಾಸ ಸೃಷ್ಟಿಸಲಾರರು. ಸರ್ಕಾರದ ವತಿಯಿಂದಲೇ ಧಾರವಾಡ ಸೇರಿದಂತೆ ನಾಡಿನ ಐತಿಹಾಸಿಕ ಸ್ಥಳಗಳ ಗ್ರಂಥಗಳನ್ನು ಪ್ರಕಟಿಸುವ ಕಾರ್ಯಕ್ರಮವನ್ನು ಆಯವ್ಯಯದಲ್ಲಿ ಹಾಕಿಕೊಳ್ಳಲಾಗುವುದು. ಧಾರವಾಡದ ಚರಿತ್ರೆ ದಾಖಲಿಸುವ ಕಾರ್ಯದ ಜವಾಬ್ದಾರಿಯನ್ನು ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ವಹಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಕನ್ನಡದ ಹಲವು ಸಂಸ್ಥೆಗಳ ಸ್ಥಾಪನೆ, ಕರ್ನಾಟಕ ರಾಜ್ಯ ರಚನೆಗೆ ಕಾರಣವಾದ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮಹತ್ವದ ಸ್ಥಾನವಿದೆ. ವಿಶಿಷ್ಠ ಅಂತರ್ಗತ ಶಕ್ತಿ ಇದೆ. ಸಂಘಕ್ಕೆ ಅಗತ್ಯವಿರುವ ಅನುದಾನ, ನಿವೇಶನ ಮತ್ತಿತರ ಬೇಡಿಕೆಗಳಿಗೆ ಸರ್ಕಾರ ಸಕಾರಾತ್ಮವಾಗಿ ಬೆಂಬಲಿಸಲಿದೆ ಎಂದರು. ಇದನ್ನೂ ಓದಿ: ‘ಫಿಟ್ ಇಂಡಿಯಾ’ ಬಗ್ಗೆ ಅರಿವು ಮೂಡಿಸಲು ಜಿಮ್‌ನಲ್ಲಿ ವರ್ಕೌಟ್ ಮಾಡಿದ ಮೋದಿ

BASAVARJ BOMMAI PROGRAM

ನಾಡೋಜ ಪಾಟೀಲ್ ಪುಟ್ಟಪ್ಪನವರು ಸುಮಾರು 52 ವರ್ಷಗಳ ಕಾಲ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಹೋರಾಟ ಮಾಡಿದ್ದಾರೆ ಅವರ ಸಾಧನೆಯನ್ನು ಗೌರವಿಸಲು ಸರ್ಕಾರ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಸ್ಮಾರಕ ನಿರ್ಮಿಸಲಿದೆ. ಹಿರಿಯರನ್ನು ಸ್ಮರಿಸುವುದು ಸ್ಫೂರ್ತಿದಾಯಕವಾಗಿರುತ್ತದೆ. ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ್ ಅವರು ಧಾರವಾಡಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಲಿಂಗಾಯತ ಟೌನ್ ಹಾಲ್, ವೀರಶೈವ ಮಹಾಸಭೆ, ಕೆಸಿಸಿ ಬ್ಯಾಂಕ್ ಸ್ಥಾಪನೆ ,ಎನ್‍ಹೆಚ್ 4 ನಿರ್ಮಾಣ ಸೇರಿದಂತೆ ಹಲವು ಮಹತ್ವದ ಚಾರಿತ್ರಿಕ ಕಾರ್ಯಗಳನ್ನು ಅವರು ನಿರ್ವಹಿಸಿದ್ದಾರೆ. ಇತಿಹಾಸವನ್ನು ತಿರುಚುವ ಪ್ರವೃತ್ತಿ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದು ಸರಿಯಲ್ಲ. ಸತ್ಯವನ್ನು ವಸ್ತುನಿಷ್ಠವಾಗಿ ದಾಖಲಿಸಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಕ್ರಮ: ಬೊಮ್ಮಾಯಿ

ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ನೀಡಲಿದೆ. ಚೆನ್ನೈ, ಮುಂಬೈ ಕೈಗಾರಿಕಾ ಕಾರಿಡಾರಿನಲ್ಲಿ ಧಾರವಾಡ ಪ್ರಮುಖ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಹೊಂದುತ್ತಿದೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿಗೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ 849 ಕೋಟಿ ರೂ. ನೀಡಲು ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

BASAVARJ BOMMAI PROGRAM DWD

ಧಾರವಾಡದ ಮನೆ ಮಗನಾದ ನಾನು ತವರಿಗೆ ಹೂವು ತರುತ್ತೇನೆ ಹೊರತು ಹುಲ್ಲನ್ನಲ್ಲ ಎಂದು ಮಾರ್ಮಿಕವಾಗಿ ಹೇಳಿದ ಮುಖ್ಯಮಂತ್ರಿಯವರು. ಇಲ್ಲಿನ ಜನರ ಪ್ರೀತಿ, ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳುವೆ ಎಂದರು.

ಗ್ರಂಥ ಬಿಡುಗಡೆ ಮಾಡಿದ ಕೈಮಗ್ಗ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ, ಸರಳವಾಗಿ ಎಲ್ಲರೊಂದಿಗೆ ಬೆರೆಯುವ ಮುಖ್ಯಮಂತ್ರಿ ಬಬಸವರಾಜ ಬೊಮ್ಮಾಯಿ ಅವರು ನಾಡಿಗೆ ಮಾದರಿಯಾಗುವ ನಡೆ ಅನುಸರಿಸುತ್ತಿದ್ದಾರೆ. ಅವರ ತೀರ್ಮಾನಗಳು ಜನಮಾನಸದಲ್ಲಿ ಉಳಿಯುವ ರೀತಿಯಲ್ಲಿವೆ. ಧಾರವಾಡ ಬೈಪಾಸ್‍ನಿಂದ ಗಬ್ಬೂರ ರಸ್ತೆ ಅಗಲೀಕರಣಕ್ಕೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ರಾಜ್ಯದಲ್ಲಿ 1,187 ಬೆಂಗ್ಳೂರಲ್ಲಿ 923 ಕೇಸ್ – ಸಕ್ರಿಯ ಪ್ರಕರಣ 10,292ಕ್ಕೆ ಏರಿಕೆ

ದತ್ತಿದಾನಿಗಳ ಪರವಾಗಿ ಮಹಾನಗರಪಾಲಿಕೆ ಮಾಜಿ ಸದಸ್ಯ ಸಿ.ಎಸ್.ಪಾಟೀಲ್ ಮಾತನಾಡಿ, ಬ್ರಿಟಿಷ್ ಸರ್ಕಾರದಲ್ಲಿ ಇಂಜಿನಿಯರ್ ಆಗಿದ್ದ ಚನ್ನವೀರಗೌಡ ಅಣ್ಣಾ ಪಾಟೀಲ್ ಅವರ ಸಾಧನೆ ಹಿರಿಯದಾಗಿದ್ದರೂ ಇನ್ನೂ ಸಾಕಷ್ಟು ಬೆಳಕಿಗೆ ಬರಬೇಕಾಗಿದೆ ಎಂದರು.

ಗ್ರಂಥ ಪರಿಚಯಿಸಿದ ಶಶಿಧರ ತೋಡಕರ್ ಅವರು, ಧಾರವಾಡದ ಚಾರಿತ್ರಿಕ ವ್ಯಕ್ತಿ ಚನ್ನವೀರಗೌಡ ಅಣ್ಣಾ ಪಾಟೀಲ್ ಸರ್ಕಾರಿ ಇಂಜಿನಿಯರ್ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಮಹತ್ವದ ಕಾರ್ಯಗಳನ್ನು ಮಾಡಿದ್ದಾರೆ. ಪಿಬಿ ರಸ್ತೆ ನಿರ್ಮಾಣ, ಕೆಸಿಸಿ ಬ್ಯಾಂಕ್, ಎಲ್‍ಇಎ ಸ್ಥಾಪನೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಕೃಷಿ ವಿವಿ ಸ್ಥಾಪನೆಗೆ ಜಮೀನು ನೀಡಿದ ಕೊಡುಗೆಯೂ ಅಮೂಲ್ಯ ಎಂದು ನುಡಿದರು.

ದೇವರಹುಬ್ಬಳ್ಳಿ ಸಿದ್ಧಾರೂಢಮಠದ ಶಿವಸಿದ್ಧಶಿವಯೋಗಿಗಳು ಸಾನಿಧ್ಯ ವಹಿಸಿದ್ದರು. ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ್ ಬೆಲ್ಲದ, ಮಾಜಿ ಸಚಿವ ಶಶಿಕಾಂತ್ ನಾಯ್ಕ, ಮಾಜಿ ಶಾಸಕ ಎ.ಬಿ.ದೇಸಾಯಿ, ಗ್ರಂಥಕರ್ತೃ ಮಲ್ಲಿಕಾರ್ಜುನ ಪಾಟೀಲ್, ಶಶಿಧರ ತೋಡಕರ್, ರೇಖಾ ಶೆಟ್ಟರ್, ಬಿ.ವೈ.ಬಂಡಿವಡ್ಡರ, ಚಂದ್ರಗೌಡ ಎಸ್.ಪಾಟೀಲ್, ಡಾ.ಅರವಿಂದ ಯಾಳಗಿ, ರಾಜು ಪಾಟೀಲ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು, ಕಾರ್ಯಾಧ್ಯಕ್ಷ ಬಸವಪ್ರಭು ಹೊಸಕೇರಿ ಪ್ರಾಸ್ತಾವಿಕ ಮಾತನಾಡಿದರು. ಕೋಶಾಧ್ಯಕ್ಷ ಶಿವಾನಂದ ಭಾವಿಕಟ್ಟಿ ಆಶಯ ನುಡಿಗಳನ್ನಾಡಿದರು. ಸಹ ಕಾರ್ಯದರ್ಶಿ ಶಂಕರ ಕುಂಬಿ ಕಾರ್ಯಕ್ರಮ ನಿರೂಪಿಸಿದರು.

TAGGED:Basavaraj BommaibjpDharwadaಧಾರವಾಡಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
13 minutes ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
42 minutes ago
AI ಚಿತ್ರ
Latest

ಉಡುಪಿಯಲ್ಲಿ ಭಾರೀ ಮಳೆ – ಬೈಂದೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Public TV
By Public TV
1 hour ago
human bridge punjab
Latest

ರಸ್ತೆ ಕುಸಿದು ಉಕ್ಕಿ ಹರಿದ ನೀರು – ಮಾನವ ಸೇತುವೆ ನಿರ್ಮಿಸಿ 35 ಶಾಲಾ ಮಕ್ಕಳನ್ನು ರಸ್ತೆ ದಾಟಿಸಿದ ಗ್ರಾಮಸ್ಥರು

Public TV
By Public TV
1 hour ago
Amit Shah 1
Latest

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ 6 ತಿಂಗಳು ವಿಸ್ತರಣೆ – ಸದನದಲ್ಲಿ ಅನುಮೋದನೆ

Public TV
By Public TV
1 hour ago
Digital Arrest 2
Crime

Digital Arrest | ಸಿಬಿಐ ಅಧಿಕಾರಿ ಸೋಗಿನಲ್ಲಿ ಕರೆ – ಬ್ಯಾಂಕ್‌ ಅಧಿಕಾರಿಗೆ 56 ಲಕ್ಷಕ್ಕೂ ಅಧಿಕ ಹಣ ವಂಚನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?