Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

Karnataka

ಮೇಕೆದಾಟು ವಿಚಾರವಾಗಿ ʼಸುಳ್ಳಿನಯಾತ್ರೆʼ ಹೊರಟವರ ಜಾತಕ ಬೆತ್ತಲಾಗ್ತಿದೆ: ಹೆಚ್‌ಡಿಕೆ

Public TV
Last updated: January 3, 2022 11:54 am
Public TV
Share
3 Min Read
KUMARASWAMY
SHARE

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಸತ್ಯಕ್ಕೆ ಸಮಾಧಿ ಕಟ್ಟಿ ʻಸುಳ್ಳಿನ ಯಾತ್ರೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ. ಇದನ್ನೂ ಓದಿ: ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು

siddaramaiah

ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ?..
ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ.

ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ. 12/12

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 3, 2022

2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು. ಇದನ್ನೂ ಓದಿ: ಶೀಘ್ರವೇ ಮೇಕೆದಾಟು ಸ್ಫೋಟಕ ದಾಖಲೆ ರಿಲೀಸ್ ಮಾಡ್ತೀನಿ ಕಾರಜೋಳ ತಿರುಗೇಟು

ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು.

d.k.shivakumar

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜ ಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

2013ರಲ್ಲಿ ಇದೇ 'ಸಿದ್ದಹಸ್ತರು' ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; "ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು" ಎಂದು ಹೇಳಿಸಿದ್ದರು. 10/12

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 3, 2022

ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ. ಇದನ್ನೂ ಓದಿ: ಹೈಜಾಕ್ ಮಾಡೋದಕ್ಕೆ ಮೇಕೆದಾಟು ಯೋಜನೆಯನ್ನು ಹೆಚ್‌ಡಿಕೆ ಮಾಡಿದ್ರಾ: ಸಿದ್ದರಾಮಯ್ಯ ತಿರುಗೇಟು

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?

mekedatu 1 1

ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ? 6/12

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 3, 2022

2017ರಲ್ಲೇ ಕಾಂಗ್ರೆಸ್ ಸರ್ಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ.

2017ರಲ್ಲೇ ಕಾಂಗ್ರೆಸ್ ಸರಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ. 4/12

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 3, 2022

ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ.

congress jds

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ. 2/12

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 3, 2022

ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಎಚ್‌ಡಿಕೆ ಹರಿಹಾಯ್ದಿದ್ದಾರೆ.

TAGGED:congressh d kumaraswamyjdsmekedatutweetಕಾಂಗ್ರೆಸ್ಜೆಡಿಎಸ್ಟ್ವೀಟ್ಮೇಕೆದಾಟು ಯೋಜನೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
23 minutes ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
25 minutes ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
31 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
2 hours ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
2 hours ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?