ಬಿಜೆಪಿ ನಾಯಕ ಮನೋಜ್ ತಿವಾರಿಗೆ ಕೊರೊನಾ ಪಾಸಿಟಿವ್

Public TV
2 Min Read
Manoj Tiwari

ನವದೆಹಲಿ: ಬಿಜೆಪಿ ಲೋಕಸಭಾ ಸಂಸದ ಮನೋಜ್ ತಿವಾರಿ ಅವರು ತಮಗೆ ಕೋವಿಡ್-19 ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

CORONA 2

ಈ ಕುರಿತಂತೆ ಮನೋಜ್ ತಿವಾರಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದು, ಇದೀಗ ಕ್ವಾರಂಟೈನ್‍ನಲ್ಲಿ ಇರುವುದಾಗಿ ತಿಳಿಸಿದ್ದಾರೆ. ನನಗೆ ಕೆಲವು ದಿನಗಳಿಂದ ಅನಾರೋಗ್ಯ ಸಮಸ್ಯೆ ಕಾಡುತ್ತಿತ್ತು. ಕೊಂಚ ಜ್ವರ ಮತ್ತು ಶೀತದಿಂದ ಇದ್ದಿದ್ದರಿಂದ ನಿನ್ನೆ ಉತ್ತರಖಂಡದ ರುದ್ರಪುರದ ಪ್ರಚಾರಕ್ಕೆ ಹೋಗಲಿಲ್ಲ. ಆದರೆ ಇಂದು ಕೊರೊನಾ ಪಾಸಿಟಿವ್ ಬಂದಿದ್ದು, ಮುನ್ನಚ್ಚರಿಕೆಯಿಂದ ಕ್ವಾರಂಟೈನ್‍ನಲ್ಲಿದ್ದೇನೆ. ದಯವಿಟ್ಟು ನಿಮ್ಮ ಮತ್ತು ನಿಮ್ಮ ಕುಟುಂಬದವರ ಬಗ್ಗೆ ಕಾಳಜಿ ವಹಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಭಾನುವಾರದಿಂದ ಮನೋಜ್ ತಿವಾರಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಉತ್ತರಖಂಡ ರುದ್ರಪುರದ ಪಕ್ಷದ ಪ್ರಚಾರಕ್ಕೆ ಹೋಗಲಿಲ್ಲ. ಇದೀಗ ಕೋವಿಡ್ ರಿಪೋರ್ಟ್ ಪಡೆದುಕೊಂಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

arvind kejriwal

ಮತ್ತೊಂದೆಡೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೂ ಇಂದು ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅರವಿಂದ್ ಕೇಜ್ರಿವಾಲ್ ಅವರು, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಅದರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಸೋಂಕಿನ ಗುಣಲಕ್ಷಣಗಳು ಕಡಿಮೆಯಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ. ಕಳೆದ ಕೆಲವು ದಿನಗಳಲ್ಲಿ ನನ್ನನ್ನು ಯಾರ್ಯಾರು ಭೇಟಿ ಮಾಡಿದ್ದಿರೋ ಅವರೆಲ್ಲರೂ ದಯವಿಟ್ಟು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ. ಜೊತೆಗೆ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿದ್ದರು.

ದೆಹಲಿ ವಿಪತ್ತು ನಿರ್ವಹಣಾ ಸಮಿತಿಯು ಮಂಗಳವಾರ ಸಭೆ ನಡೆಸಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಿದೆ. ಸೋಮವಾರ ದೆಹಲಿಯಲ್ಲಿ ಪಾಸಿಟಿವ್ ದರವು ಶೇ.6.46ರಷ್ಟು ದಾಖಲಾಗಿದೆ. ನೆಗೆಟಿವ್ ದರವು ಎರಡು ದಿನಗಳಿಗಿಂತ ಶೇ.5ರಷ್ಟು ಹೆಚ್ಚಾಗಿದೆ. ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದರೆ ಸರ್ಕಾರ ರೆಡ್ ಅಲರ್ಟ್ ಘೋಷಿಸಿ, ಕಠಿಣ ನಿರ್ಬಂಧಗಳನ್ನು ವಿಧಿಸಬಹುದಾಗಿದೆ. ಇದನ್ನೂ ಓದಿ: ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ

Share This Article
Leave a Comment

Leave a Reply

Your email address will not be published. Required fields are marked *