Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ನಡೆದಿರುವ ಘಟನೆ ನಮ್ಮ ಕರ್ನಾಟಕ ಸಂಸ್ಕೃತಿ ಅಲ್ಲ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರದಲ್ಲಿ ನಡೆದಿರುವ ಘಟನೆ ನಮ್ಮ ಕರ್ನಾಟಕ ಸಂಸ್ಕೃತಿ ಅಲ್ಲ: ಬೊಮ್ಮಾಯಿ

Bengaluru City

ರಾಮನಗರದಲ್ಲಿ ನಡೆದಿರುವ ಘಟನೆ ನಮ್ಮ ಕರ್ನಾಟಕ ಸಂಸ್ಕೃತಿ ಅಲ್ಲ: ಬೊಮ್ಮಾಯಿ

Public TV
Last updated: January 4, 2022 12:44 pm
Public TV
Share
2 Min Read
Basavaraj Bommai 1
SHARE

ಬೆಳಗಾವಿ: ರಾಮನಗರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿ ನಿನ್ನೆ ನಡೆದಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾತನಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದಿರುವ ಘಟನೆ ಇದು ನಮ್ಮ ಕರ್ನಾಟಕ ಸಂಸ್ಕೃತಿ ಅಲ್ಲ. ನಮ್ಮ ಮಧ್ಯೆ ಏನೇ ಇದ್ದರೂ ಮಾತಿನಿಂದ ವಿಚಾರಗಳನ್ನು ಹೇಳಿಕೊಳ್ಳಬಹುದೇ ಹೊರತಾಗಿ, ಇಂತಹ ವರ್ತನೆ ಯಾರಿಗೂ ಶೋಭೆ ತರುವಂತದ್ದಲ್ಲ. ನಾನು ನಿನ್ನೆ ಈ ಮಾತನ್ನು ಅಲ್ಲಿಯೇ ಹೇಳಿದ್ದೇನೆ ಎಂದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

MP MINISTER

ನಡೆದಿದ್ದೇನು?: ಬಸವರಾಜ ಬೊಮ್ಮಾಯಿ ಅವರು ರಾಮನಗರ-ಮಾಗಡಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿ ನಡೆದಿತ್ತು. ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್‍ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ರಾಮನಗರ ಡಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಎಂಎಲ್‍ಸಿ ಎಸ್.ರವಿ ಬರುವ ಪಾಲ್ಗೊಳ್ಳುವ ಮುನ್ನವೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಳಿಸಿದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ತೆಗೆದಿದ್ದರು. ಇದನ್ನೂ ಓದಿ:  ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

RMG MP MINISTER

ಸ್ಥಳೀಯ ಪ್ರತಿನಿಧಿಗಳು ಬರುವ ಮೊದಲೇ ಪ್ರತಿಮೆ ಅನಾವರಣಗೊಳಿಸಿದ ಸಿಎಂ ನಡೆಯನ್ನು ಸಂಸದ ಡಿ.ಕೆ.ಸುರೇಶ್ ವಿರೋಧಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಿಎಂ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್ ಪರ ಜೈಕಾರ ಕೂಗುವ ಮೂಲಕ ಗದ್ದಲ ಸೃಷ್ಟಿಸಲಾಯಿತು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಿಎಂಗೆ ಧಿಕ್ಕಾರ ಕೂಗಿದ್ದರು. ಇದನ್ನೂ ಓದಿ:  ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ

RMG MP MINISTER 1

ಸಿಎಂ ವೇದಿಕೆಗೆ ಬರುತ್ತಿದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ, ಅಂಬೇಡ್ಕರ್ ಪ್ರತಿಮೆಗೆ ಸಂಸದ ಡಿ.ಕೆ.ಸುರೇಶ್ ಅವರಿಂದ ಪುಷ್ಪಾರ್ಚನೆ ಮಾಡಿಸಿಲ್ಲ ಎಂದು ಧಿಕ್ಕಾರ ಕೂಗಿದ್ದರು. ಇದು ಸರ್ಕಾರಿ ಕಾರ್ಯಕ್ರಮವಲ್ಲ RSS ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿದ್ದರು. ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಕಾರ್ಯಕರ್ತರ ಮನವೊಲಿಸಲು ಪೊಲೀಸರು ಮುಂದಾದರು. ಪೊಲೀಸರ ಮಾತಿಗೂ ಜಗ್ಗದೇ ದಲಿತ ಸಂಘಟನೆಗಳ ಮುಖಂಡರು ಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

TAGGED:Ashwath NarayanBasavaraj Bommaidk sureshkarnataka cultureಕಾಂಗ್ರೆಸ್ಡಿಕೆ ಸುರೇಶ್ಬಸವರಾಜ ಬೊಮ್ಮಾಯಿಬೆಳಗಾವಿರಾಮನಗರ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
36 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
40 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?