ನಿತ್ಯ ಸೋಂಕಿತರ ಸಂಖ್ಯೆ 20 ಸಾವಿರದ ಗಡಿ ದಾಟಿದ್ರೆ ಲಾಕ್‍ಡೌನ್ – ಮುಂಬೈ ಮೇಯರ್

Public TV
1 Min Read
MUMBAI MAYOR

ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಇಪ್ಪತ್ತು ಸಾವಿರದ ಗಡಿ ದಾಟಿದರೆ ಮುಂಬೈನಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಮೇಯರ್ ಕಿಶೋರಿ ಪೆಡ್ನೇಕರ್ ಹೇಳಿದ್ದಾರೆ.

CORONA VIRUS 3

ಮುಂಬೈನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದು ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಮುಂಬೈನಲ್ಲಿ ಸೋಮವಾರ 8000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಇದು 2021 ರ ಏಪ್ರಿಲ್ 18 ರ ಬಳಿಕ ಪತ್ತೆಯಾದ ಅತೀ ಹೆಚ್ಚು ಪ್ರಕರಣಗಳಾಗಿದೆ. ನಿತ್ಯ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಜೊತೆಗೆ ಓಮಿಕ್ರಾನ್ ಕೂಡಾ ಹೆಚ್ಚು ಕಂಡು ಬರುತ್ತಿದ್ದು ಮಹಾರಾಷ್ಟ್ರದಲ್ಲಿ ಈವರೆಗೂ 500 ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಈ ಸಂಖ್ಯೆಯಲ್ಲಿ ಬಹುತೇಕ ಪ್ರಕರಣಗಳು ಮುಂಬೈ ಮೂಲದ್ದಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ನೈಟ್ ಕರ್ಫ್ಯೂ ಜೊತೆಗೆ ಶಾಲಾ-ಕಾಲೇಜು ಬಂದ್

ಮುಂಬೈನಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಈಗಾಗಲೇ 1 ರಿಂದ 9 ಮತ್ತು 11 ನೇ ತರಗತಿಗಳ ಎಲ್ಲಾ ಮಾಧ್ಯಮಗಳ ಶಾಲೆಗಳನ್ನು ಜನವರಿ 31 ರವರೆಗೆ ಮುಚ್ಚಲು ಪಾಲಿಕೆ ನಿರ್ಧರಿಸಿದೆ. ಆನ್ ಲೈನ್ ತರಗತಿಗಳಿಗೆ ಆದ್ಯತೆ ನೀಡಲು ಸೂಚಿಸಿದೆ. ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

CORONA-VIRUS.

ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಅಪಾರ್ಟ್ ಮೆಂಟ್‍ಗಳಲ್ಲಿ 20% ಕ್ಕಿಂತ ಹೆಚ್ಚು ಸೋಂಕು ಪತ್ತೆಯಾದರೆ ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲು ನಿರ್ಧರಿಸಿದೆ. ಒಂದು ವರದಿಯ ಪ್ರಕಾರ, ಪ್ರಕರಣಗಳ ಹೆಚ್ಚಳದಿಂದಾಗಿ ನಗರದಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಪ್ರಮಾಣ ಕಳೆದ ನಾಲ್ಕು ದಿನಗಳಲ್ಲಿ 15% ಹೆಚ್ಚಾಗಿದೆ ಎಂದು ಅವರು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *