ಸಕಲ ಸೌಲಭ್ಯಗಳಿರುವ ನವಬೆಂಗಳೂರು ನಿರ್ಮಾಣಕ್ಕೆ ನೀಲನಕ್ಷೆ: ಸಿಎಂ

Public TV
2 Min Read
CM basavaraj bomma yedirurappa vijeyndra ashok

ಬೆಂಗಳೂರು: ಸಕಲ ಸೌಲಭ್ಯಗಳಿರುವ ನವಬೆಂಗಳೂರನ್ನು ನಿರ್ಮಿಸಲು ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಈ ಮೂಲಕ ವಿಶೇಷ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಅದ್ವಿತೀಯ ಗ್ರೂಪ್ ನ ಐ.ಟಿ ಪಾರ್ಕ್ ಯೋಜನೆಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಬೃಹತ್ ಆಗಿ ಬೆಳೆಯುತ್ತಿರುವ ಬೆಂಗಳೂರನ್ನು ಯೋಜನಾಬದ್ಧವಾಗಿ ಹಾಗೂ ಸಮಗ್ರವಾಗಿ ಅಭಿವೃದ್ಧಿಗೊಳಿಸಬೇಕಿದೆ. ಎಲ್ಲ ವರ್ಗದ ಜನರಿಗೆ ಸೌಲಭ್ಯಗಳನ್ನು ತಲುಪಿಸುವ ವಿಶೇಷ ಯೋಜನೆಗಳನ್ನು ಒಟ್ಟಾಗಿ ರೂಪಿಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:  ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು, ಲಾಕ್‍ಡೌನ್ ಆಗಲು ಬಿಡ್ಬೇಡಿ – ಮಂತ್ರಾಲಯ ಶ್ರೀ ಮನವಿ

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾಲದಲ್ಲಿ ರೂಪಿಸಲಾದ ಬೆಂಗಳೂರು ವಿಷನ್ 2022 ಯೋಜನೆಯಡಿ 4-5 ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅವುಗಳಿಗೆ ವೇಗವನ್ನು ನೀಡಲು ಈಗಾಗಲೇ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

bommai bengaluru 2

ಜಿ.ಎಂ.ಸಿದ್ದೇಶ್ವರ ಅವರ ಎರಡು ಮತ್ತು ಮೂರನೇ ಪೀಳಿಗೆ ಯಶಸ್ವಿಯಾಗಿ ವ್ಯಾಪಾರದಲ್ಲಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಕೊಡುಗೆ ನೀಡಿದ್ದಾರೆ. ಇದು ಉತ್ತರ ಕರ್ನಾಟಕಕ್ಕೆ ಹೆಸರುವಾಸಿಯಾದ ಸಂಸ್ಥೆಯಾಗಿದೆ. ಬೆಂಗಳೂರಿನಲ್ಲಿ ಆಸ್ಪತ್ರೆ ನಿರ್ಮಿಸಿ, ಆರೋಗ್ಯ ಸೇವೆಗಳನ್ನು ಉತ್ತಮ ರೀತಿಯಲ್ಲಿ ನೀಡುತ್ತಿದ್ದಾರೆ. ಎಲ್ಲ ರಂಗದಲ್ಲಿಯೂ ಯಶಸ್ವಿಯಾಗಿ ಕಠಿಣ ಪರಿಶ್ರಮದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಪ್ರಶಂಸಿದರು.

ಇದೀಗ ಐ.ಟಿ ಹಬ್ ನಿರ್ಮಿಸಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಲಿದ್ದಾರೆ. ರಾಜ್ಯದಲ್ಲಿ ಐಟಿಯಿಂದ ಬೆಂಗಳೂರು ಪ್ರಸಿದ್ಧವಾಗಿದೆ. ನಾಲ್ಕು ದಿಕ್ಕಿನಲ್ಲಿಯೂ ಮಾಹಿತಿ ತಂತ್ರಜ್ಞಾನ ಉದ್ಯಮ ವಿಸ್ತರಣೆಯಾಗಿದೆ. ಐ.ಟಿ ಉದ್ಯಮಕ್ಕೆ ಹಿಂದಿನ ಸರ್ಕಾರಗಳೂ ಸೇರಿದಂತೆ ನಮ್ಮ ಸರ್ಕಾರವೂ ಮಹತ್ವ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅತಿ ಹೆಚ್ಚು ಉದ್ಯೋಗ ಲಭಿಸುತ್ತಿರುವುದು ಐ.ಟಿ ವಲಯದಲ್ಲಿ. ವಿದ್ಯಾವಂತರಿಗೆ ದೊಡ್ಡ ಪ್ರಮಾಣದಲ್ಲಿ ಅವಕಾಶಗಳು ದೊರಕುತ್ತಿದೆ ಎಂದರು.

bengaluru city arial dh 1553098309

ದುಡಿಯುವ ವರ್ಗದವರ ಕೈಯಲ್ಲಿ ದೇಶದ ಆರ್ಥಿಕತೆ!
ಜನರ ಕೈಯಲ್ಲಿ ಉದ್ಯೋಗ ಇದ್ದಾಗ ಮಾತ್ರ ದೇಶ ಅಭಿವೃದ್ಧಿಯಾಗಿ, ಆರ್ಥಿಕತೆ ಬೆಳೆಯುತ್ತದೆ. ಆ ನಿಟ್ಟಿನಲ್ಲಿ ಐ.ಟಿ ಸೇವೆಗಳು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಅತಿ ಹೆಚ್ಚು ರಫ್ತು ಆಗುತ್ತಿರುವುದು ಐ.ಟಿ ವಲಯದಲ್ಲಿ. ದೇಶದ ಒಟ್ಟು ರಫ್ತಿನ ಪ್ರಮಾಣದಲ್ಲಿ ಶೇ.40 ರಷ್ಟು ರಫ್ತು ಬೆಂಗಳೂರಿನಿಂದ ಆಗುತ್ತಿದೆ. ಹೀಗಾಗಿ ಬೆಂಗಳೂರು ದೇಶದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು.

ಕೋವಿಡ್ ಮುಗಿದು ಆರ್ಥಿಕ ಬೆಳವಣಿಗೆಯಾಗುತ್ತಿರುವ ಸಂದರ್ಭದಲ್ಲಿ ಐ.ಟಿ ಹಬ್ ನಿರ್ಮಾಣವಾಗುತ್ತಿರುವುದು ಬೆಂಗಳೂರಿನ ಬೆಳವಣಿಗೆಯ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸಿದಂತಾಗಿದೆ ಎಂದರು. ಇದನ್ನೂ ಓದಿ: ಕೋವಿಡ್ ಹಿನ್ನೆಲೆ ಬಿಡುಗಡೆ ದಿನಾಂಕವನ್ನ ಮುಂದಕ್ಕೆ ಹಾಕಿದ ಬಹುನಿರೀಕ್ಷಿತ ಚಿತ್ರಗಳು

ಸಮಾರಂಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಬಿ.ಎ.ಬಸವರಾಜ, ಆರ್.ಅಶೋಕ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ, ಮೊದಲಾದವರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *