ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

Public TV
2 Min Read

ನವದೆಹಲಿ: ನಿನ್ನೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ ವೇಳೆ ಭದ್ರತಾ ಲೋಪದಿಂದ ಫೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಘಟನೆಗೆ ಪಂಜಾಬ್ ಪೊಲೀಸ್ ಇಲಾಖೆ ನೇರ ಕಾರಣ ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ.

NARENDRA MODI 1

ಮೋದಿ ಬರುತ್ತಿದ್ದಂತೆ ಪ್ರತಿಭಟನೆ ನಡೆಸುವ ಬಗ್ಗೆ ಪ್ರತಿಭಟನಾಕಾರರ ಬಗ್ಗೆ ಪಂಜಾಬ್ ಪೊಲೀಸರಿಗೆ ಮೊದಲೇ ಗುಪ್ತಚರ ಇಲಾಖೆಯಿಂದ ಮಾಹಿತಿ ಇತ್ತು. ಆದರೆ ಪೊಲೀಸ್ ಇಲಾಖೆ ಎಸ್‍ಪಿಜಿಯ ಬ್ಲೂ ಬುಕ್ ಮಾರ್ಗದರ್ಶನಗಳನ್ನು ಸರಿಯಾಗಿ ಅನುಸರಿಸದೇ ಪ್ರಧಾನಿ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಹುಡುಕದೆ ನಿರ್ಲಕ್ಷ್ಯವಹಿಸಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

NARENDRA MODI SECURITY

ಗುಪ್ತಚರ ಇಲಾಖೆ ನಿರಂತರವಾಗಿ ಪಂಜಾಬ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸರು ಪ್ರತಿಭಟನಕಾರರಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ಬಳಿಕ ಈ ರೀತಿ ಆಗಿದೆ. ಘಟನೆಯ ಬಳಿಕ ಪಂಜಾಬ್ ಪೊಲೀಸರ ಭದ್ರತಾ ವ್ಯವಸ್ಥೆಯ ಬಗ್ಗೆ ಸೂಕ್ತ ತನಿಖೆ ನಡೆಸಲು ಕೇಂದ್ರ ಮುಂದಾಗಿದೆ. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಛನ್ನಿ, ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣ ತೊಡಕಾಗಿದ್ದಕ್ಕೆ ವಿಷಾದಿಸುತ್ತೇನೆ.. ಆದರೆ ಇಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಧಾನಿ ರ‍್ಯಾಲಿಗೆ ಭದ್ರತೆ ಕೇಳಿದ್ದರು ಅದಕ್ಕೆ ಪೂರಕವಾದ ವ್ಯವಸ್ಥೆ ಮಾಡಲಾಗಿತ್ತು. ಪ್ರಧಾನಿ ಭೇಟಿ ಕಾರ್ಯಕ್ರಮದಲ್ಲಿ ರಸ್ತೆ ಮಾರ್ಗವಾಗಿ ಹುಸೇನಿವಾಲಾ ಹೋಗುವ ಬಗ್ಗೆ ಮೂಲ ಪಟ್ಟಿಯಲ್ಲಿ ಮಾಹಿತಿ ಇರಲಿಲ್ಲ. ಕೊನೆ ಕ್ಷಣದಲ್ಲಿ ಪ್ರಧಾನಿ ಈ ರಸ್ತೆ ಮಾರ್ಗವಾಗಿ ಹೊರಟರು ಈ ವೇಳೆ ಫೈಓವರ್ ಮೇಲೆ ಪ್ರತಿಭಟನಾಕಾರರು ಇದ್ದರು. ಬಳಿಕ ಬದಲಿ ಮಾರ್ಗವನ್ನು ಸೂಚಿಸಿದ್ದೇವು ಆದರೆ ಮೋದಿ ಸುರಕ್ಷಿತವಾಗಿ ಹಿಂದಿರುಗಿ ವಾಪಸ್ಸು ಹೋಗಲು ನಿರ್ಧರಿಸಿದರು ಎಂದಿದ್ದಾರೆ.

Charanjit Singh Channi

ಬಟಿಂಡಾದಲ್ಲಿ ನಿನ್ನೆ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‍ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಭದ್ರತಾ ಲೋಪ – ನೀಚತನದ ಪರಮಾವಧಿ ಅಂದ್ರು ಅನಂತ್ ಕುಮಾರ್ ಹೆಗ್ಡೆ

Share This Article
Leave a Comment

Leave a Reply

Your email address will not be published. Required fields are marked *