ಕ್ಷಮೆ ಕೋರಿ ಎಲ್ಲರಿಗೂ ಧನ್ಯವಾದ ತಿಳಿಸಿದ ಶುಭಾ ಪೂಂಜಾ

Public TV
2 Min Read
SHUBHA POONJA

ಬೆಂಗಳೂರು: ನಟಿ ಶುಭಾ ಪೂಂಜಾ ಅವರು ಈಗಾಗಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇದೀಗ ಅವರು ತಮ್ಮ ಗೆಳೆಯ- ಗೆಳತಿಯರು ಹಾಗೂ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ಅಲ್ಲದೆ ಮದುವೆಗೆ ವಿಶ್ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

 

ಈ ಸಂಬಂಧ ಇನ್‍ಸ್ಟಾಗ್ರಾಂನಲ್ಲಿ ತಮ್ಮ ಮದುವೆಯ ಫೋಟೋ ಶೇರ್ ಮಾಡಿಕೊಂಡು ನಟಿ ಬರೆದುಕೊಂಡಿದ್ದಾರೆ. ಶುಭ ಕೋರಿದ ಹಾಗೂ ಆಶೀರ್ವದಿಸಿದ ಎಲ್ಲರಿಗೂ ಧನ್ಯವಾದಗಳು. ಉಡುಪಿಯ ಶಿರ್ವದಲ್ಲಿರುವ ನನ್ನ ಅಜ್ಜಿ ಮನೆಯಲ್ಲಿಯೇ ಸರಳವಾಗಿ ಮದುವೆಯಾಗಬೇಕೆಂಬುದು ನನ್ನ ಕನಸಾಗಿತ್ತು. ಅದರಂತೆ ಅಜ್ಜಿ ಮನೆಯಲ್ಲಿಯೇ ಕೇವಲ ಬೆರಳೆಣಿಕೆಯಷ್ಟೇ ಮಂದಿಯ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇನೆ. ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕೆ ರಜೆ ಕೋರಿ ಪ್ರಾಂಶುಪಾಲರಿಗೆ ಪತ್ರ ಬರೆದ ಅಭಿಮಾನಿ

shubha poonja 1

ನಾನು ಆಡಿ ಬೆಳೆದ ಮನೆಯಲ್ಲಿ ನಡೆದ ಈ ಶುಭ ಕಾರ್ಯದಲ್ಲಿ ಕೇವಲ 30 ಮಂದಿಗಷ್ಟೇ ಆಹ್ವಾನ ನೀಡಲಾಗಿತ್ತು. ಮದುವೆಗೆ ನಿಮಗೆ ಆಹ್ವಾನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ನಿಮ್ಮೆಲ್ಲರ ಜೊತೆ ಕ್ಷಮೆ ಕೇಳುತ್ತೇನೆ. ಅಲ್ಲದೆ ಕೆಲವು ಅತ್ಯಂತ ಕ್ಲೋಸ್ ಇರುವವರಿಗೂ ಆಮಂತ್ರಣ ನೀಡಲು ಆಗಿಲ್ಲ. ಆದರೆ ನಿಮ್ಮೆಲ್ಲರ ಪ್ರೀತಿಗೆ ತುಂಬಾನೇ ಧನ್ಯವಾದಗಳು. ಹಾಗೆಯೇ ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ.

ಶುಭಾ ಪೂಂಜಾ ಅವರು ತಮ್ಮ ಬಹುಕಾಲದ ಗೆಳೆಯ ಸುಮಂತ್ ಮಹಾಬಲ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿಚಾರವನ್ನು ನಿನ್ನೆ ಸ್ವತಃ ನಟಿಯೇ ತಮ್ಮ ಇನ್ ಸ್ಟಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಬರೆದುಕೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *