ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವ: ಸಚಿವ ಅಂಗಾರ

Public TV
3 Min Read
S. Angara Mangalore 2

ಮಂಗಳೂರು: ಕೋವಿಡ್ ಸಂಗ್ರಾಮದಲ್ಲಿ ಮಾಸ್ಕ್ ಧಾರಣೆಗೆ ಹೆಚ್ಚಿನ ಮಹತ್ವವಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಾಸ್ಕ್ ವಿತರಿಸಿ ಸಂದೇಶವನ್ನು ಕೊಟ್ಟರು.

‘ಮಾಸ್ಕ್ ಧರಿಸಿ, ಸರಿಯಾಗಿ ಧರಿಸಿ’ ಎಂಬ ಅಭಿಯಾನವನ್ನು ಜಿಲ್ಲಾಡಳಿತ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ವತಿಯಿಂದ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂಗಾರ ಅವರು ಚಾಲನೆ ನೀಡಿದರು. ನಂತರ ಮಾಸ್ಕ್ ಅನ್ನು ಜನರಿಗೆ ವಿತರಿಸಿ ಸಂದೇಶವನ್ನು ಸಾರಿದರು. ಇದನ್ನೂ ಓದಿ:  ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

S. Angara Mangalore 1

ಈ ವೇಳೆ ಮಾತನಾಡಿದ ಅವರು, ಕೋವಿಡ್ ವಿರುದ್ಧದ ಸಂಗ್ರಾಮದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಅದು ಕೂಡ ಸರಿಯಾಗಿ ಧರಿಸಬೇಕು. ಆ ಮೂಲಕ ಜಿಲ್ಲೆಯ ಎಲ್ಲರೂ ಕೋವಿಡ್ ಹರಡದಂತೆ ಸಹಕರಿಸಬೇಕು. ಈ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯ ಮಾಧ್ಯಮಗಳು ಪ್ರತಿಯೊಬ್ಬರಲ್ಲಿಯೂ ಹೊಣೆಗಾರಿಕೆಯನ್ನು ಮೂಡಿಸುತ್ತಿವೆ. ಇದರಿಂದ ಯಶಸ್ವಿಯಾಗಿ ಹಾಗೂ ಸುಲಭವಾಗಿ ನಾಗರೀಕರಲ್ಲಿ ಅರಿವು ಮೂಡಿಸಬಹುದಾಗಿದೆ. ಸಾರ್ವಜನಿಕರ ಜೀವ ರಕ್ಷಣೆ ಹಾಗೂ ಅವರ ಆರೋಗ್ಯದ ಹಿತದ ಮುನ್ನೆಚ್ಚರಿಕಾ ಕ್ರಮಗಳಿಗಾಗಿ ವಾರಾಂತ್ಯ ಕಫ್ರ್ಯೂ ವಿಧಿಸಲಾಗಿದೆ. ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಜನರ ಸಹಕಾರ ಅಗತ್ಯವಿದೆ ಎಂದು ವಿನಂತಿಸಿಕೊಂಡರು.

ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಅವರು ಮಾತನಾಡಿ, ಜನರಲ್ಲಿ ಈಗಾಗಲೇ ಸೋಂಕು ಹರಡದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿದೆ. ಕೆಲವರು ಗುಂಪುಗಳಲ್ಲಿ ಸೇರುವುದು, ಸಾಮಾಜಿಕ ಅಂತರ ವಹಿಸದೇ ಇರುವುದರ ಬಗ್ಗೆ ಜಿಲ್ಲಾಡಳಿತದಿಂದ ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರೆಡ್ ಕ್ರಾಸ್ ಕೈ ಜೋಡಿಸಿರುವುದು ಸ್ವಾಗತಾರ್ಹ ಎಂದು ಹೇಳಿದರು.

S. Angara Mangalore

ಕೋವಿಡ್ ಸೋಂಕು ಹರಡದಂತೆ ಮಾಸ್ಕ್ ಅನ್ನು ಮೂಗು ಮುಚ್ಚುವ ಹಾಗೆ ಸರಿಯಾಗಿ ಧರಿಸಬೇಕು. ಬಾಯಿಯ ಕೆಳಗೆ ಅಥವಾ ಗಂಟಲಿಗೆ ಹಾಕಿಕೊಳ್ಳಬಾರದು. ಪರಸ್ಪರ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಸ್ಯಾನಿಟೈಸರ್ ಬಳಕೆ ಅತ್ಯುತ್ತಮ ಮಾರ್ಗಗಳಾಗಿವೆ. ಬಸ್ಸುಗಳಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಕೆ ಕೊಟ್ಟರು.

ಸರ್ಕಾರ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಏಕೆಂದರೆ ತಜ್ಞರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಈ ಮಾರ್ಗಸೂಚಿಗಳನ್ನು ಸಿದ್ಧಪಡಿಸಿರುತ್ತಾರೆ. ಅದನ್ನು ಸರ್ಕಾರದಿಂದ ಅನುಷ್ಠಾನ ಗೊಳಿಸಲಾಗುತ್ತದೆ. ಓಮಿಕ್ರಾನ್ ತಡೆಗಟ್ಟಲು ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ವ್ಯಾಕ್ಸಿನೇಷನ್ ಪಡೆಯಬೇಕು ಎಂದರು.

FotoJet 8 18

ಲಾಕ್ ಡೌನ್ ನಿಂದ ಪಾರಾಗಲು ವ್ಯಾಪಾರಸ್ಥರು ಕಡ್ಡಾಯವಾಗಿ ವ್ಯಾಕ್ಸಿನ್ ಪಡೆಯಬೇಕು. ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆದು. ಕ್ವಾರಂಟೈನ್ ಗೆ ಒಳಗಾಗಬೇಕು. ಜಿಲ್ಲೆಯಲ್ಲಿ ಕೋವಿಡ್ ನ ಹೆಚ್ಚು ಪ್ರಕರಣಗಳು ವರದಿಯಾದಲ್ಲಿ ನಾಗರೀಕರು ಭಯಪಡುವ ಅಗತ್ಯವಿಲ್ಲ. ಏಕೆಂದರೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮದುವೆ, ಜಾತ್ರೆ ಸೇರಿದಂತೆ ಜನ ಜನಸಂದಣಿ ಸೇರುವ ಸ್ಥಳಗಳಿಗೆ ಹೋಗಬಾರದು. ಮಾಸ್ಕ್ ನ ಹೊರಪದರವನ್ನು ಪದೇಪದೇ ಮುಟ್ಟಬಾರದು. ಮಾಸ್ಕ್ ಧರಿಸುವ ಮೂಲಕ ಕೋವಿಡ್ ಅನ್ನು ಗೆಲ್ಲಬೇಕು ಎಂದು ಹೇಳಿದರು.  ಇದನ್ನೂ ಓದಿ: 1000ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಹಿರಿಯ ಪತ್ರಕರ್ತರಾದ ಮಹಮ್ಮದ್ ಆರೀಫ್, ಪುಷ್ಪರಾಜ್, ಭಾಸ್ಕರ್ ರೈ, ಸುಖ್‍ಪಾಲ್ ಪೊಳಲಿ, ರೆಡ್ ಕ್ರಾಸ್ ನ ಅಧ್ಯಕ್ಷ ಶಾಂತರಾಮ ಶೆಟ್ಟಿ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ, ಕಾರ್ಯದರ್ಶಿ ಡಿ.ಕೆ.ಕುಸುಮಾಧರ, ಜಿಲ್ಲಾ ರೆಡ್ ಕ್ರಾಸ್ ನ ಮಾಜಿ ಕಾರ್ಯದರ್ಶಿ ಪ್ರಭಾಕರ್ ಶರ್ಮಾ, ಕಾರ್ಯಕಾರಿ ಸಮಿತಿಯ ಸದಸ್ಯರಾದ ರವೀಂದ್ರ, ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *