ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ವಿಚಾರಿಸಿದ್ದಾರೆ.
ಇಂದು ಸಂಜೆ 4:30ರ ಸುಮಾರಿಗೆ ಸಿಎಂಗೆ ದೂರವಾಣಿ ಕರೆ ಮಾಡಿರುವ ಪ್ರಧಾನಿ, ಆರೋಗ್ಯ ಹೇಗಿದೆ ಎಂದು ವಿಚಾರಿಸಿದ್ದಾರೆ. ಅಲ್ಲದೆ ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ. ಸುಮಾರು ಐದು ನಿಮಿಷಗಳ ಕಾಲ ನಡೆದ ಮಾತುಕತೆ ನಡೆದಿದೆ.
ಇತ್ತ ಬೊಮ್ಮಾಯಿಯವರು ಕೂಡ ತಮಗೆ ಕೋವಿಡ್ ತಗಲಿರುವ ಬಗ್ಗೆ ವಿವರಣೆ ನೀಡಿದ್ದಾರೆ. ತಮ್ಮ ಜೊತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದಿದ್ದಾರೆ. ಈ ವೇಳೆ ಪ್ರಧಾನಿ, ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ಸಲಹೆಯಿತ್ತಿದ್ದಾರೆ.
ಇದೇ ವೇಳೆ ಸಿಎಂ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗಳಿಗೆ ಮಾಹಿತಿ ನಿಡಿದರು. ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜನವರಿ 13ರಂದು ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ
ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೀಗೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯ ಕುರಿತು ಪ್ರಧಾನಿಗಳೀಗೆ ಸಿಎಂ ವಿವರಣೆ ನೀಡಿದರು. ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಪುತ್ರನಿಗೂ ಕೋವಿಡ್