ಕಾಬೂಲ್: ಬಾಲಕಿಯರು ಮತ್ತು ಬಾಲಕರಿಗೆ ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳನ್ನು 2022ರ ಮಾರ್ಚ್‍ನಿಂದ ಮತ್ತೆ ತೆರೆಯಲಾಗುತ್ತದೆ ಎಂದು ತಾಲಿಬಾನ್ ತಿಳಿಸಿದೆ.
ಮಾಹಿತಿ ಮತ್ತು ಸಂಸ್ಕೃತಿಯ ಉಪಮಂತ್ರಿ ಮತ್ತು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‍ನ ವಕ್ತಾರ ಜಬೀವುಲ್ಲಾ ಮುಜಾಹಿದ್ ಈ ಕುರಿತಂತೆ ಮಾತನಾಡಿ, ತಾಲಿಬಾನ್ ಶಿಕ್ಷಣದ ವಿರುದ್ಧವಲ್ಲ. ಆದರೆ ಹುಡುಗರು ಮತ್ತು ಹುಡುಗಿಯರಿಗೆ ಶಾಲೆಗಳಲ್ಲಿ ಪ್ರತ್ಯೇಕವಾಗಿ ತರಗತಿ ನಡೆಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಿಗರೇಟ್‌ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ- ಪತಿ, ಆತನ ಸ್ನೇಹಿತರು ಅರೆಸ್ಟ್
ಎರಡು ತಿಂಗಳಲ್ಲಿ ಉನ್ನತ ಶಾಲೆಗಳು ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು ಪುನಃ ತೆರೆಯಲು ಶಿಕ್ಷಣ ಸಚಿವಾಲಯ ಮತ್ತು ಉನ್ನತ ಶಿಕ್ಷಣ ಸಚಿವಾಲಯವು ಶ್ರಮಿಸುತ್ತಿದೆ. ಅನೇಕ ಪ್ರದೇಶಗಳಲ್ಲಿ ಪ್ರೌಢ ಶಾಲೆಗಳನ್ನು ಪುನಃ ತೆರೆಯಲಾಗಿದೆ ಮತ್ತು ಕೆಲವು ಭಾಗಗಳಲ್ಲಿ ಆರ್ಥಿಕ ಸಮಸ್ಯೆಗಳಿಂದ ಇನ್ನೂ ಶಾಲೆಯನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಲ್ಯ ಮುಖಕ್ಕೆ ಕಟ್‌ಕೊಂಡಿನ್ರೀ ಮತ್ ಮಾಸ್ಕ್ ಯಾಕ್ ಹಾಕಬೇಕು: ವ್ಯಕ್ತಿಯ ಕಿರಿಕ್
ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕವಾಗಿ ತರಗತಿಗಳನ್ನು ನಡೆಸಲಾಗುತ್ತದೆ ಮತ್ತು ಅಫ್ಘಾನಿಸ್ತಾನದ ಸುತ್ತಲೂ ಹೆಣ್ಣುಮಕ್ಕಳಿಗೆ ಹೆಚ್ಚಿನ ಹಾಸ್ಟೆಲ್‍ಗಳನ್ನು ನಿರ್ಮಿಸುವ ಕೆಲಸಗಳು ನಡೆಯುತ್ತಿದೆ. ಅಫ್ಘಾನಿಸ್ತಾನದಾದ್ಯಂತ 150 ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದ್ದು, 40 ಖಾಸಗಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಸಾರ್ವಜನಿಕ ಶಾಲೆಗಳಲ್ಲಿ ಹುಡುಗಿಯರಿಗೆ ಆರನೇ ತರಗತಿಯವರೆಗೂ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ.
ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನದ ಹಲವೆಡೆ ಹೆಣ್ಣು ಮಕ್ಕಳಿಗೆ 7ನೇ ತರಗತಿಯ ನಂತರ ಶಾಲೆಗೆ ಹೋಗಲು ಅನುಮತಿ ನೀಡಲಾಗಿಲ್ಲ. ಅಲ್ಲದೇ ದೇಶದಲ್ಲಿ ಬಾಲಕಿಯರ ಶಾಲೆಗಳನ್ನು ಮುಚ್ಚುತ್ತಿರುವುದಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.