ಬೆಂಗಳೂರು: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಖ್ಯಾತಿಯ ಸಮನ್ವಿ ಮನೆಗೆ ಇಂದು ಸಚಿವ ಎಸ್.ಟಿ ಸೋಮಶೇಖರ್ ಭೇಟಿ ನೀಡಿದ್ದಾರೆ.
ಗುಬ್ಬಲಾಳದಲ್ಲಿರುವ ಸಮನ್ವಿ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಸಮನ್ವಿ ತಂದೆ ರೂಪೇಶ್ ಹಾಗೂ ತಾಯಿ ಅಮೃತ ನಾಯ್ಡು ಅವರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ಸಮನ್ವಿ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಕೆಶಿ
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೆಪುರ ವಾರ್ಡ್ ನಂಬರ್ 198ರ ವಾಜರಹಳ್ಳಿ ಯಲ್ಲಿ ಇತ್ತೀಚೆಗಷ್ಟೇ ಅಪಘಾತದಲ್ಲಿ ನಿಧನ ಹೊಂದಿದ ಪುಟಾಣಿ ಸಮನ್ವಿ ಅವರ ತಂದೆ ರೂಪೇಶ್ ಹಾಗೂ ತಾಯಿ ಅಮೃತ ನಾಯ್ಡು ಅವರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಲಾಯಿತು. pic.twitter.com/OpZgFAKSL6
— S T Somashekar Gowda (@STSomashekarMLA) January 19, 2022
ಸಮನ್ವಿ ಬಾಲ ಕಲಾವಿದೆಯಾಗಿ ಜನರ ಮನಗೆದ್ದಿದ್ದಳು. ರಿಯಾಲಿಟಿ ಶೋ ಮೂಲಕ ಮನೆಮಾತಾಗಿದ್ದ ಸಮನ್ವಿ ಚಿಕ್ಕ ವಯಸ್ಸಿನಲ್ಲೇ ಅಪಾರ ಅಭಿಮಾನಿಗಳನ್ನು ಹೊಂದಿದ್ದಳು. ಆಕೆಯ ಸಾವು ನಿಜಕ್ಕೂ ದುರದೃಷ್ಟಕರ. ಅವರ ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭೇಟಿ ಬಳಿಕ ಎಸ್‍ಟಿಎಸ್ ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಣೀರು ತರಿಸುವಂತಿದೆ ಸಮನ್ವಿ ತಾಯಿ ಅಮೃತಾ ನಾಯ್ಡು ಮನವಿ
ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೂಡ ಸಮನ್ವಿ ಮನೆಗೆ ಭೇಟಿ ನೀಡಿ ಆಕೆಯ ಪೋಷಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಕಳೆದ ಗುರುವಾರ ಅಮೃತಾ ನಾಯ್ಡು ಅವರು ರಾಜಾಜಿನಗರದಲ್ಲಿರುವ ತಮ್ಮ ತವರುನ ಮನೆಗೆ ಸ್ಕೂಟಿಯಲ್ಲಿ ಹೊರಟಿದ್ದರು. ಮೆಟ್ರೋ ಸ್ಟೇಷನ್ ವರೆಗೆ ಗಾಡಿಯಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಮನ್ವಿ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ 4 ತಿಂಗಳ ಗರ್ಭಿಣಿ ಅಮೃತಾ ಅವರು ಭಾರೀ ಅವಘಡದಿಂದ ಬಚಾವ್ ಆಗಿದ್ದರು. ಇದನ್ನೂ ಓದಿ: ಮುದ್ದಿನ ಮಗಳು ಸಮನ್ವಿಯ ಲಾಸ್ಟ್ ಕಿಸ್ ಹಂಚಿಕೊಂಡ ನಟಿ ಅಮೃತಾ