ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರಗ ಜ್ಞಾನೇಂದ್ರ

Public TV
1 Min Read
Araga Jnanendra 6

ಬೆಂಗಳೂರು: ಸಮಾಜ ವಿರೋಧಿ ಶಕ್ತಿಗಳೊಂದಿಗೆ ಗುರುತಿಸಿಕೊಂಡು ಅಪರಾಧಿ ಕೃತ್ಯಗಳಲ್ಲಿ ಭಾಗವಹಿಸುವ ಯಾವುದೇ ಪೊಲೀಸ್ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಚಾಮರಾಜನಗರ ವ್ಯಾಪ್ತಿಯಲ್ಲಿ 7.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಟ್ರಾಫಿಕ್ ಪೊಲೀಸ್ ಠಾಣೆಯ ಶಂಕುಸ್ಥಾಪನೆ ಕಾರ್ಯ ನೆರವೇರಿಸಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನಿವಾಸದ ಬಳಿ, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತವಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಜಾಲದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಂತಹ ಹೀನ ಕೃತ್ಯಗಳನ್ನು ಸಹಿಸಲಾಗುವುದಿಲ್ಲ. ಕೇವಲ ಬೆರಳಣಿಕೆಯಷ್ಟು ಮಂದಿ ಸಿಬ್ಬಂದಿಯಿಂದ, ಸುಮಾರು ಒಂದು ಲಕ್ಷಕ್ಕೂ ಮೀರಿ ಇರುವ ಇಲಾಖೆ ಸಿಬ್ಬಂದಿಗೆ ಕೆಟ್ಟ ಹೆಸರು ಬರುತ್ತದೆ ಎಂದು ಕಿಡಿಕಾರಿದರು.

araga jnanendra 5

ನ್ಯಾಯವನ್ನು ರಕ್ಷಿಸಲು ನೇಮಕವಾದ ಸಿಬ್ಬಂದಿಯೇ ಅಪರಾಧ ಕೃತ್ಯದಲ್ಲಿ ತೊಡಗಿರುವವರೊಂದಿಗೆ ಶಾಮೀಲಾಗುವುದು ಅಕ್ಷಮ್ಯ ಅಪರಾಧವಾಗಿದೆ. ಅಂಥವರನ್ನು ಕೇವಲ ಸೇವೆಯಿಂದ ಅಮಾನತು ಮಾಡಿದರೆ ಸಾಲದು, ಅಂಥವರು ಇಲಾಖೆಯಲ್ಲಿ ಇರಬಾರದು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಪಡೆದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಇದನ್ನೂ ಓದಿ:  ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

POLICE JEEP

ಕೆಲವು ಯುವ ಕಾಂಗ್ರೆಸ್ ನಾಯಕರು, ಕಳೆದ ರಾತ್ರಿ ಹೊಡೆದಾಡಿಕೊಂಡಿದ್ದಾರೆ ಎನ್ನಲಾದ ವಿಷಯಕ್ಕೆ ಸಂಬಂಧಿಸಿದಂತೆ, ಉತ್ತರಿಸಿದ ಸಚಿವರು, ನಗರದ ಪೊಲೀಸರು, ಈವರೆಗೆ ಯಾವುದೇ ದೂರನ್ನು ಯಾರಿಂದಲೂ ಪಡೆದುಕೊಂಡಿಲ್ಲ, ದೂರು ದಾಖಲಾದರೆ, ನಮ್ಮ ಪೊಲೀಸರು ವಿಚಾರಣೆ ನಡೆಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

Share This Article
Leave a Comment

Leave a Reply

Your email address will not be published. Required fields are marked *