ಹ್ಯಾಕರ್ ಶ್ರೀಕಿ ಪೊಲೀಸರಿಗಿಂತ ಬಹಳ ಬುದ್ಧಿವಂತ: ಗೃಹ ಸಚಿವ

Public TV
1 Min Read
araga jnanendra hacker sriki

ಚಿಕ್ಕಬಳ್ಳಾಪುರ: ಬಿಟ್ ಕಾಯಿನ್ ಹಗರಣದಲ್ಲಿ ಆರೋಪಿತನಾಗಿದ್ದ ಹ್ಯಾಕರ್ ಶ್ರೀಕಿ ಪೊಲೀಸರಗಿಂತ ಬಹಳ ಬುದ್ಧಿವಂತ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಂತರ ಉತ್ತಮ ಕೆಲಸ ಮಾಡಿದ ಸಿಬ್ಬಂದಿಗೆ ಪ್ರಶಸ್ತಿ ಪ್ರದಾನ ಮಾಡುವ ವೇಳೆ ಮಾತನಾಡಿದ ಅವರು, ಶ್ರೀಕಿ ಅರೆಸ್ಟ್ ಆಗೋವರೆಗೂ ಅಂತ ತುಂಬಾ ಬುದ್ಧಿವಂತ ಎಂಬುದು ನಮಗೆ ಗೊತ್ತಿರಲಿಲ್ಲ. ಈ ವಿಚಾರ ಆತ ಆರೆಸ್ಟ್‌ ಆದ ನಂತರವೇ ತಿಳಿಯಿತು. ಆದರೆ ಬುದ್ಧಿವಂತಿಕೆಯಲ್ಲಿ ಆತನಿಗಿಂತ ನಮ್ಮ ಪೊಲೀಸರು ಮುಂದೆ ಇರಬೇಕು. ಅಂತಹ ತಂತ್ರಜ್ಞರು ಪೊಲೀಸ್ ಇಲಾಖೆಗೆ ಅಗತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೋಕರ್ ವೆಬ್‍ಸೈಟ್ ಹ್ಯಾಕ್ – ಕೋಟ್ಯಂತರ ಹಣ ಮಾಡಿದ್ದ ಕುಖ್ಯಾತ ಹ್ಯಾಕರ್ ಅರೆಸ್ಟ್

SRIKI

ಈ ವೇಳೆ ನಮ್ಮ ಇಲಾಖೆಯಲ್ಲಿ ಯಾರಾದರೂ ಅಂತಹವರು ಇದ್ದಾರಾ ಅಂತ ಕೇಂದ್ರ ವಲಯ ಐಜಿಪಿಯನ್ನು ಕೇಳಿದರು. ಅಂತಹವರು ಇಲಾಖೆಯಲ್ಲಿ ಇಲ್ಲ, ಹೊರಗೆ ಇದ್ದಾರೆ ಎಂದು ಐಜಿಪಿ ಉತ್ತರಿಸಿದರು. ನಂತರ ಮಾತನಾಡಿದ ಸಚಿವರು, ಪೊಲೀಸ್ ಇಲಾಖೆಯಲ್ಲಿ ಅಂತಹ ನಿಪುಣರ ಅವಶ್ಯಕತೆ ಇದೆ. ಅಂತಹವರನ್ನು ತಯಾರು ಮಾಡಬೇಕು ಎಂದು ತಿಳಿಸಿದ್ದಾರೆ.

ಶ್ರೀಕೃಷ್ಣ (ಶ್ರೀಕಿ) ಬೆಂಗಳೂರಿನ ನಿವಾಸಿಯಾಗಿದ್ದು, 2014 ರಿಂದ 2017ರವರೆಗೆ ಈತ ನೆದರ್‌ಲ್ಯಾಂಡ್‌ ಆಮ್‌ಸ್ಟರ್‌ಡ್ಯಾಮ್ ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಎಸ್‍ಸಿ ಪದವಿ ಪಡೆದ ಬಳಿಕ ವೆಬ್‍ಸೈಟ್ ಹ್ಯಾಕ್ ಮಾಡಲು ಆರಂಭಿಸಿದ್ದ. ಆರಂಭದಲ್ಲಿ ಸಣ್ಣ ಪಟ್ಟ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಅನುಭವ ಪಡೆದ ಬಳಿಕ ದೊಡ್ಡ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಇದನ್ನೇ ಉದ್ಯೋಗ ಮಾಡಿಕೊಂಡಿದ್ದ. ಇದನ್ನೂ ಓದಿ: ಹ್ಯಾಕಿಂಗ್‌ ಮಾಡಲು ಏಕಾಗ್ರತೆ ಬೇಕು, ಅದಕ್ಕಾಗಿ ಭಗವದ್ಗೀತೆ ಓದುತ್ತೇನೆ – ಹ್ಯಾಕರ್‌ ಶ್ರೀಕಿ

Bitcoin

ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿದ ಬಳಿಕ ಆತ ಬಿಟ್‍ಕಾಯಿನ್ ಬಳಸಿ ಹಣವನ್ನು ಪಡೆಯುತ್ತಿದ್ದ. ಈ ಎಲ್ಲ ಕೆಲಸಕ್ಕೆ ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ. ಡಾರ್ಕ್ ವೆಬ್ ಬಳಕೆ ಮಾಡುತ್ತಿದ್ದ ಕಾರಣ ಈತನ ಮಾಹಿತಿಗಳು ಸಿಗುತ್ತಿರಲಿಲ್ಲ. ಬಿಟ್ ಕಾಯಿನ್ ಮೂಲಕ ಡ್ರಗ್ಸ್ ತರಿಸಿಕೊಂಡು ಬೇಕಾದ ವ್ಯಕ್ತಿಗಳಿಗೆ ನೀಡುತ್ತಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *