Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು

Bengaluru City

ದೆಹಲಿಯಲ್ಲಿ ಸಂಚರಿಸಲಿದೆ ಕರ್ನಾಟಕದ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು

Public TV
Last updated: January 22, 2022 6:22 pm
Public TV
Share
4 Min Read
tableau
SHARE

ಬೆಂಗಳೂರು: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧ ಚಿತ್ರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ. ಈ ಬಾರಿ ಆಯ್ಕೆಯಾದ 12 ರಾಜ್ಯಗಳ ಸ್ತಬ್ಧ ಚಿತ್ರಗಳಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಏಕೈಕ ಸ್ತಬ್ಧ ಚಿತ್ರ ನಮ್ಮ ಕರ್ನಾಟಕದ್ದಾಗಿದೆ. ಅಲ್ಲದೆ, ರಾಜ್ಯದ ಸ್ತಬ್ಧ ಚಿತ್ರ ಸತತವಾಗಿ ಹದಿಮೂರನೇ ಬಾರಿಗೆ ಆಯ್ಕೆಯಾಗುತ್ತಿದೆ ಎಂಬುದು ದಾಖಲಾರ್ಹ ಸಂಗತಿ.

ಕೌಶಲ್ಯದಿಂದ ತಯಾರಿಸಿದ ಮಡಿಕೆ, ಸೂಕ್ಷ್ಮವಾಗಿ ಕೆತ್ತನೆ ಮಾಡಿದ ಶ್ರೀಗಂಧದ ಚಿಕಣಿ (ಮಿನಿಯೇಚರ್ಸ್ ಅಥವಾ ಕಿರು ಮಾದರಿ ವಸ್ತುಗಳು), ಕೈಮಗ್ಗದ ಸೀರೆಗಳು, ಕೈಯಿಂದಲೇ ವಿಶಿಷ್ಟ ಕಲಾಕೃತಿಗಳೂ ಒಳಗೊಂಡಂತೆ 16 ಕರಕುಶಲ ವಸ್ತುಗಳು ಭೌಗೋಳಿಕ ಸೂಚಿ ಸಂಕೇತದ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕವನ್ನು ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂದೇ ಕರೆಯುತ್ತಾರೆ. ಚೆನ್ನಪಟ್ಟಣ ಮತ್ತು ಕಿನ್ನಾಳ ಮರದ ಕೆತ್ತನೆ ವಸ್ತುಗಳು (ಇನ್‍ಲೇ ಕಾವಿರ್ಂಗ್ಸ್), ಕಂಚಿನ ಪ್ರತಿಮೆಗಳು, ಮೆರುಗೆಣ್ಣೆಯ ಹಾಗೂ ಬಿದರಿಯ ಕಲಾಕೃತಿಗಳು ಕರ್ನಾಟಕದ ಪ್ರಮುಖ ಕಲೆಗಳಾಗಿವೆ.

tableau 1

ಟಿರ್ರಾಕೋಟ ಅತ್ಯಂತ ಹಳೆಯ ಕಲೆಯಾಗಿದೆ. ವಿಜಯನಗರದ ಅರಸರು ಪೋಷಿಸುತ್ತಿದ್ದ ಕಿನ್ನಾಳದ ಮೆರುಗೆಣ್ಣೆಯ ಕಲಾಕೃತಿಗಳು, ಕರ್ನಾಟಕದ ಜೊತೆಗೆ ಅವಿನಾಭಾವ ಸಂಬಂಧ ಹೊಂದಿರುವ ಮತ್ತು ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಶ್ರೀಗಂಧದ ಕಲಾಕೃತಿಗಳು ಹಾಗೂ ದಂತದ ಕೆತ್ತನೆಯ ಕಲೆ ರಾಜ್ಯಕ್ಕೇ ವಿಶಿಷ್ಟ ಎನಿಸಿದೆ. ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮವು ಇ-ವಾಣಿಜ್ಯ ನಿಗಮೀಕೃತ ಸಂಸ್ಥೆಯ ಸಹಯೋಗದೊಂದಿಗೆ 55,000 ಕಲಾಕಾರರಿಗೆ ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

ಸ್ವಾತಂತ್ರ್ಯ ಹೋರಾಟಗಾರರು, ಅಭಿನೇತ್ರಿ, ಸಮಾಜ ಸೇವಕರು, ಕಲಾ ಉತ್ತೇಜಕರೂ ಎಲ್ಲವೂ ಆಗಿದ್ದ ಕರ್ನಾಟಕದವರೇ ಆದ ಕಮಲಾದೇವಿ ಚಟ್ಟೋಪಾಧ್ಯಾಯ ಅವರು ನಶಿಸಿ ಹೋಗುತ್ತಿದ್ದ ಪಾರಂಪಾರಿಕ ಕರಕುಶಲ ವಸ್ತುಗಳ ತಯಾರಿಕಾ ಕಲೆಯನ್ನು ಉಳಿಸಲು ಪ್ರಮುಖ ಪಾತ್ರ ವಹಿಸಿದ್ದರು ಎಂಬುದು ಗಮನಾರ್ಹ.

tableau

ಸ್ತಬ್ಧ ಚಿತ್ರದಲ್ಲಿ ಏನಿದೆ?:
ಕರ್ನಾಟಕದ ಸ್ತಬ್ದಚಿತ್ರದ ಮುಂಭಾಗದಲ್ಲಿ ಮೈಸೂರಿನ ಬೀಟೆ ಮರ ಹಾಗೂ ದಂತದ ಕಸೂತಿ ಕೆತ್ತನೆಯ ಬೃಹದಾಕಾರದ ಆನೆಯ ಕಲಾಕೃತಿ ಹಾಗೂ ಈ ಕಲಾಕೃತಿಯ ಕೆಳಗಿನ ಭಾಗದಲ್ಲಿ ಯಕ್ಷಗಾನ ಬೊಂಬೆಯಾಟದ ಚಿತ್ರಣವಿದೆ. ಜೊತೆಗೆ, ಗಂಜೀಫಾ ಕಲಾಕೃತಿಗಳಿವೆ. ಇದನ್ನೂ ಓದಿ: ಈ ಬಾರಿಯ ಗಣರಾಜ್ಯೋತ್ಸವಕ್ಕೆ ವಿದೇಶಿ ಅತಿಥಿಗಳಿಗೆ ಆಹ್ವಾನ ಇಲ್ಲ

ಸ್ತಬ್ಧ ಚಿತ್ರದ ಮಧ್ಯದಲ್ಲಿ ಕಣ್ಮನ ಸೆಳೆಯುವ ಬಿದರಿ ಕಲೆಯಲ್ಲಿ ರೂಪಿಸಿರುವ ದೊಡ್ಡ ಪ್ರಮಾಣದ ಹೂಜಿ. ಹೂಜಿಯ ಇಕ್ಕೆಲೆಗಳಲ್ಲಿ ಕರಾವಳಿಯ ವೈಶಿಷ್ಟ್ಯವನ್ನು ಬಿಂಬಿಸುವ ಭೂತಾರಾಧನೆಯ ಮುಖವಾಡವನ್ನು ಹೊತ್ತ ಲೋಹದ ಕಲಾಕೃತಿಗಳಿವೆ. ಹೂಜಿಯ ಹಿಂಬದಿಯಲ್ಲಿ ಬಿದರಿ ಕಲೆ ಬಳಸಿ ಸಿದ್ಧಪಡಿಸಿರುವ ನವಿಲುಗಳಿವೆ. ಅಲ್ಲದೆ, ಮಧ್ಯ ಭಾಗದ ಹಿಂಬಂದಿಯಲ್ಲಿ ಕಿನ್ನಾಳದ ವೈಶಿಷ್ಟ್ಯಪೂರ್ಣ ಕಲೆಯಲ್ಲಿ ಮೇಳೈಸಿದ ಬೃಹತ್ ಗಾತ್ರದ ಆಂಜನೇಯ ಸ್ವಾಮಿಯ ಮೂರ್ತಿ ಸ್ತಬ್ಧ ಚಿತ್ರದ ಕೇಂದ್ರ ಬಿಂದುವಿನಂತೆ ಕಂಗೊಳಿಸುತ್ತಿದೆ. ಆಂಜನೇಯ ಸ್ವಾಮಿಯ ಮೂರ್ತಿಯ ಅಕ್ಕ-ಪಕ್ಕದಲ್ಲಿ ಚೆನ್ನಪಟ್ಟಣದ ಬೊಂಬೆಗಳು, ಮೆರುಗೆಣ್ಣೆಯ ಆಟಿಕೆಗಳು, ನವಲಗುಂದ ಧರಿ (ಜಮಖಾನೆ), ಶ್ರೀಗಂಧ ಮರದ ಕೆತ್ತನೆಯ ಹಾಗೂ ಮಣ್ಣಿನ ಕಲಾಕೃತಿಗಳಿವೆ. ಇದನ್ನೂ ಓದಿ: ಈ ಬಾರಿ ಗಣರಾಜ್ಯೋತ್ಸವ ಹೇಗಿರುತ್ತೆ – ಇಲ್ಲಿದೆ ವಿವರ

republic day 3

ತದನಂತರ, ಸ್ತಬ್ಧ ಚಿತ್ರದ ಕೊನೆಯಲ್ಲಿ ಪಾರಂಪರಿಕ ಕರಕುಶಲ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಿದ ಕಲಾಲೋಕದ ಮಹಾಮಾತೆ, ಸ್ವಾತಂತ್ರ್ಯ ಹೋರಾಟಗಾರ್ತಿ ಹಾಗೂ ಕನ್ನಡತಿ ಕಮಲಾದೇವಿ ಚಟ್ಟೋಪಾದ್ಯಾಯ ಅವರು ಗಂಧದ ಪೆಟ್ಟಿಗೆ, ನವಿಲಿನಾಕಾರದ ದೀಪದ ಕಲಶಗಳು, ಸಂಡೂರಿನ ಬಾಳೆ ನಾರಿನ ಚೀಲಗಳು ಹೀಗೆ ವಿವಿಧ ಕರಕುಶಲ ವಸ್ತುಗಳನ್ನು ಬಾಗಿನ ರೂಪದಲ್ಲಿ ನೀಡುತ್ತಿರುವ ದೃಶ್ಯಾವಳಿಯ ದೊಡ್ಡ ಪ್ರತಿಮೆ ಇದೆ. ಅದೇ ಭಾಗದಲ್ಲಿ ಕರ್ನಾಟಕದ ಕೈಮಗ್ಗದ ಹಿರಿಮೆಯ ಇಳಕಲ್ ಕಸೂತಿ ಸೀರೆಗಳು, ಮೊಳಕಾಲ್ಮೂರು ಸೀರೆಗಳು ಹಾಗೂ ಮೈಸೂರು ರೇಷ್ಮೆ ಸೀರೆಗಳು, ಕಿನ್ನಾಳ ಕಲೆಯಲ್ಲಿ ತಯಾರಿಸಿದ ಬಾಲೆಯರ ಕಲಾಕೃತಿಗಳು, ಪಶ್ಚಿಮ ಘಟ್ಟಗಳಲ್ಲಿ ಲಭ್ಯವಿರುವ ಬೆತ್ತ, ಬಿದಿರು, ಕಾಡುಬಳ್ಳಿಗಳು ಹಾಗೂ ತಾಟಿನಿಂಗು ಮರದ ಎಲೆಯಿಂದ ತಯಾರಿಸಿದ ಬಗೆ ಬಗೆಯ ಬುಟ್ಟಿಗಳೂ ಕೂಡಾ ಸ್ತಬ್ಧ ಚಿತ್ರಕ್ಕೆ ವಿಶೇಷ ಮೆರುಗ ನೀಡಿದೆ.

ನಿರ್ಮಿಸಿದವರು ಯಾರು?: ಈ ಬಾರಿಯ ಸ್ತಬ್ಧ ಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ.

republic day parade

ಸುವರ್ಣ ವರ್ಷ: ರಾಷ್ಟ್ರದ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಸುಸಂದರ್ಭದಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ವಿಶಾಲ ಮೈಸೂರು ರಾಜ್ಯ (ಕರ್ನಾಟಕ ರಾಜ್ಯವು) ಪಾಲ್ಗೊಳ್ಳಲು 1972 ರಲ್ಲಿ ಮೊದಲು ಪ್ರಾರಂಭಿಸಿತ್ತು.

ಅಂದಿನ ಮುಖ್ಯಮಂತ್ರಿ ಡಿ ದೇವರಾಜ ಅರಸ್ ಅವರು ಈ ಜವಾಬ್ದಾರಿಯನ್ನು ಅಂದಿನ ವಾರ್ತಾ ಮತ್ತು ಪ್ರಚಾರ ಇಲಾಖೆಗೆ ವಹಿಸಿದ್ದರು. ಅಂದಿನಿಂದ ಇಂದಿನವರೆಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೇ ರಾಜ್ಯ ಸರ್ಕಾರದ ಪರವಾಗಿ ಸ್ತಬ್ದಚಿತ್ರ ನಿರ್ಮಾಣ ಹಾಗೂ ಪ್ರದರ್ಶನದ ಕಾರ್ಯವನ್ನು ನಿರ್ವಹಿಸುತ್ತಲಿದೆ. ಇದೀಗ ಭಾರತ ಸ್ವಾತಂತ್ರ್ಯದ ಅಮೃತ ವರ್ಷ ಮಹೋತ್ಸವ ವರ್ಷದಲ್ಲಿ ನವದೆಹಲಿಯಲ್ಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಭ್ರಮದಲ್ಲಿ ಕರ್ನಾಟಕದ ಪಾಲ್ಗೊಳ್ಳುವಿಕೆ 50ನೇ ವರ್ಷ ವರ್ಷದ್ದಾಗಿದೆ.

RAJPATH 1

ಅಂತೆಯೇ, ರಾಜ್ಯದ ಪರವಾಗಿ ಸ್ತಬ್ಧ ಚಿತ್ರ ನಿರ್ಮಾಣ ಮತ್ತು ಪ್ರದರ್ಶನ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾಯಕ ಕೂಡಾ ಸುವರ್ಣ ವರ್ಷ ಪೂರೈಸುತ್ತಿದೆ ಎಂಬುದು ಹರ್ಷದಾಯಕ ಸಂಗತಿಯಾಗಿದೆ.

TAGGED:karnatakanewdelhiRajpathatableauಕರಕುಶಲ ವಸ್ತುಕರ್ನಾಟಕನವದೆಹಲಿರಾಜ್‍ಪಥ್ಸ್ತಬ್ಧಚಿತ್ರ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
21 minutes ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
32 minutes ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
46 minutes ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
2 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
3 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?