ಬೆಳಗಾವಿ: ಗೋವಾ ವಿಧಾನಸಭೆಯಲ್ಲಿ ಚುನಾವಣೆಯಲ್ಲಿ ಪಕ್ಷಾಂತರ ತಡೆಯಲು ಕಾಂಗ್ರೆಸ್ ಪಕ್ಷದ 35 ಅಭ್ಯರ್ಥಿಗಳಿಂದ ಆಣೆ ಪ್ರಮಾಣದ ಪಾಲಿಟಿಕ್ಸ್ ಶುರುವಾಗಿದೆ.
ಫೆಬ್ರವರಿ 14ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್, ಗೋವಾ ನಾಯಕ ದಿಗಂಬರ ಕಾಮತ್ ಸಮ್ಮುಖದಲ್ಲಿ 35 ಕಾಂಗ್ರೆಸ್ ಅಭ್ಯರ್ಥಿಗಳ ಸಭೆ ನಡೆಸಿದರು. ಸಭೆ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳು ಬಸ್‍ನಲ್ಲಿ ಮಂದಿರ, ಮಸೀದಿ, ಚರ್ಚ್‍ಗೆ ತೆರಳಿದರು.
ಈ ವೇಳೆ ದಿಗಂಬರ ಕಾಮತ್ ಮಾತನಾಡಿ, ಪಣಜಿಯ ಮಹಾಲಕ್ಷ್ಮೀ ಮಂದಿರದಲ್ಲಿ ಪೂಜೆ ಸಲ್ಲಿಸಿ ಅಭ್ಯರ್ಥಿಗಳು ಆಣೆ ಪ್ರಮಾಣ ಮಾಡಿದ್ದಾರೆ. ಕಳೆದ ಬಾರಿ ವಿಧಾನಸಭೆಯಲ್ಲಿ ಆದ ತಪ್ಪು ಮರುಕಳಿಸದಿರಲೆಂದು ಎಚ್ಚರಿಕೆ ಹೆಜ್ಜೆ ಇಟ್ಟಿದ್ದೇವೆ ಎಂದರು. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ
2017ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ 17 ಸ್ಥಾನ ಗೆದ್ದು ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಐದು ವರ್ಷಗಳ ಅವಧಿಯಲ್ಲಿ ಗೋವಾದ 17 ಕಾಂಗ್ರೆಸ್ ಶಾಸಕರ ಪೈಕಿ 15 ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಹೀಗಾಗಿ ಮತ್ತೆ ಆ ತಪ್ಪು ಪುನರಾವರ್ತನೆ ಆಗದಿರಲಿ ಎಂದು ಅಭ್ಯರ್ಥಿಗಳಿಂದ ಆಣೆ ಪ್ರಮಾಣ ನಡೆಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಂಪುಟ ಪುನಾರಚನೆ ವರಿಷ್ಠರು ನಿರ್ಧರಿಸುತ್ತಾರೆ: ಬೊಮ್ಮಾಯಿ