ಪಣಜಿ: ರಾಜಕಾರಣದಲ್ಲಿ ಹೊಗೆ ಆಡೋದಕ್ಕೆ, ಸುದ್ದಿ ಬರೋದಕ್ಕೆ ಕಾರಣ ಇರಬೇಕು ಅಂತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.
ಗೋವಾದ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಆಗಾಗ ಸುದ್ದಿ ಬರುತ್ತವೆ. ಕೆಲವು ಬಾರಿ ಬೆಂಕಿ ಇಲ್ಲದೇ ಹೊಗೆ ಆಡುತ್ತದೆ. ಈ ಬಗ್ಗೆ ನನಗೇನು ಮಾಹಿತಿ ಇಲ್ಲ. ಈಗ ನಾವು ಗೋವಾದಲ್ಲಿ ಮತ್ತೆ ಸರ್ಕಾರ ಬರಬೇಕು ಎನ್ನುವ ಪ್ರಯತ್ನದಲ್ಲಿ ತೊಡಗಿದ್ದೇವೆ ಎಂದು ಹೇಳಿದರು.
ನೀವು ಸಿಎಂ ಕೇಳಿದರೆ ಸಂಪುಟ ವಿಸ್ತರಣೆ ಬಗ್ಗೆ ಉತ್ತರ ಕೊಡಬಲ್ಲರು. ಸಂಪುಟ ವಿಸ್ತರಣೆ, ಪುನಾರಚನೆ ಅದು ಮುಖ್ಯಮಂತ್ರಿಗೆ ಸಂಬಂಧಿಸಿದ ಅಧಿಕಾರವಾಗಿದೆ. ಯಾರನ್ನು ಮಂತ್ರಿ ಮಾಡಬೇಕು, ಯಾರನ್ನು ಕೈ ಬಿಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ವರಿಷ್ಠರ ಜೊತೆ ಸಮಾಲೋಚಿಸಿ ನಿರ್ಣಯ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್
ನಮಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ, ಪುನಾರಚನೆ ಬಗ್ಗೆ ಗಮನ ಇಲ್ಲ. ನಾವು ಸದ್ಯಕ್ಕೆ ಗೋವಾ ಚುನಾವಣೆಯಲ್ಲಿ ಮಗ್ನರಾಗಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಗೂ ಗೊತ್ತು. ನಮಗಂತೂ ಅದರ ಬಗ್ಗೆ ಮಾಹಿತಿ ಇಲ್ಲ ಎಂದರು. ಇದನ್ನೂ ಓದಿ: ಪಂಜಾಬ್‍ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ