ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಬದಲಿಗೆ ಅಂಬೇಡ್ಕರ್‌, ಭಗತ್‌ ಸಿಂಗ್‌ರ ಫೋಟೋ ಅಳವಡಿಕೆ: ಕೇಜ್ರಿವಾಲ್‌

Public TV
1 Min Read
Punjab Chandigarh Arvind Kejriwal 1

ನವದೆಹಲಿ: ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಭಗತ್‌ ಸಿಂಗ್‌ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು. ಇನ್ಮುಂದೆ ರಾಜಕಾರಣಿಗಳ ಯಾವುದೇ ಫೋಟೋಗಳು ಇರಬಾರದು ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಿಳಿಸಿದ್ದಾರೆ.

ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಗಳಲ್ಲಿ ಅಂಬೇಡ್ಕರ್‌ ಹಾಗೂ ಭಗತ್‌ ಸಿಂಗ್‌ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು. ಯಾವುದೇ ಮುಖ್ಯಮಂತ್ರಿ ಅಥವಾ ರಾಜಕಾರಣಿಗಳ ಫೋಟೋಗಳನ್ನು ಹಾಕುವುದಿಲ್ಲ ಎಂದು ಕಾರ್ಯಕ್ರಮವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷಗಳು ಮಾಫಿಯಾವನ್ನು ರಕ್ಷಿಸುತ್ತಿದೆ: ಮಾಯಾವತಿ

ambedkar 1

ಬಾಬಾ ಸಾಹೇಬ್‌ ಅಂಬೇಡ್ಕರ್‌ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಏಕೆಂದರೆ ಅವರಿಬ್ಬರು ಒಂದೇ ಕನಸು, ಗುರಿಯನ್ನು ಹೊಂದಿದ್ದವರು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂಬೇಡ್ಕರರು ಭಾರತ ಸಂವಿಧಾನ ಶಿಲ್ಪಿ ಮತ್ತು ಮೊದಲ ಕಾನೂನು ಮಂತ್ರಿ ಎಂಬುದು ನಮಗೆಲ್ಲ ತಿಳಿದಿದೆ. ಬಡವರಾಗಲಿ ಅಥವಾ ಶ್ರೀಮಂತರಾಗಿರಲಿ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಅಂಬೇಡ್ಕರ್‌ ಅವರ ಕನಸನ್ನು ನನಸು ಮಾಡಲಾಗುವುದು ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ. ಇದನ್ನೂ ಓದಿ: UP Election: ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಆರ್‌ಪಿಎನ್ ಸಿಂಗ್ – ಬಿಜೆಪಿ ಸೇರ್ಪಡೆ ಸಾಧ್ಯತೆ

bhagat singh

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಮುಖ್ಯಮಂತ್ರಿಗಳ ಭಾವಚಿತ್ರಗಳನ್ನು ನೋಡಿರುತ್ತೇವೆ. ಆದರೆ ಇನ್ಮುಂದೆ ಈ ಪರಿಪಾಠ ಇರುವುದಿಲ್ಲ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *