ಬೆಂಗಳೂರು: ಗೆಳತಿಯನ್ನು ಟ್ರಾವೆಲ್ ಬ್ಯಾಗ್ನಲ್ಲಿ ತುಂಬಿಕೊಂಡು ಹಾಸ್ಟೆಲ್ಗೆ ಕರೆತಂದು ಸಿಕ್ಕಿಬಿದ್ದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ತನ್ನ ಗೆಳತಿಯನ್ನು ಹಾಸ್ಟೆಲ್ಗೆ ದೊಡ್ಡ ಟ್ರಾವೆಲ್ ಬ್ಯಾಗ್ನಲ್ಲಿ ತುಂಬಿಕೊಂಡು ಹೋಗಿದ್ದಾನೆ. ಗೇಟ್ನಲ್ಲಿ ಸೆಕ್ಯೂರಿಟಿ ಗಾರ್ಡ್ಗಳು ಚೆಕ್ ಮಾಡಿದ್ದಾರೆ. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಓಡಲು ಯುವಕ ಪ್ರಯತ್ನಿಸಿದ್ದಾನೆ. ಇದರಿಂದ ಸಂಶಯಗೊಂಡು ಸೂಟ್ ಕೇಸ್ ತೆಗೆದು ನೋಡಿದಾಗ ಯುವತಿ ಹೊರಗೆ ಬಂದಿದ್ದಾಳೆ. ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್ನಲ್ಲೇ ತಡೆದ ಪ್ರಿನ್ಸಿಪಾಲ್
ಈ ದೃಶ್ಯ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಮಣಿಪಾಲ ವಿವಿಯ ಎಂಐಟಿ ಕ್ಯಾಂಪಸ್ನ ವೀಡಿಯೋ ಎಂದು ಸುದ್ದಿ ಹರಿದಾಡುತ್ತಿತ್ತು. ಆದರೆ ಇದು ಎರಡು ವರ್ಷಗಳ ಹಿಂದಿನ ಹಳೆಯ ವೀಡಿಯೋ ಆಗಿದ್ದು ಮಣಿಪಾಲದ ವೀಡಿಯೋ ಅಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್
2019ರಲ್ಲಿ ಈ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಡೆಹ್ರಾಡೂನ್ನದ್ದು ಎಂದು ಹೇಳಲಾಗುತ್ತಿದೆ. ಪ್ರೇಮಿಗಳ ದಿನ ಹತ್ತಿರ ಬರುತ್ತಿದ್ದಂತೆ ಟ್ರೋಲ್ ಪೇಜ್ಗಳಲ್ಲಿ ಈ ವೀಡಿಯೋವನ್ನು ಮತ್ತೆ ಇದೀಗ ಹರಿ ಬಿಡಲಾಗಿದೆ.