ಮಂಡ್ಯ: ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಅಗಲಿ 3 ತಿಂಗಳುಗಳು ಕಳೆದಿವೆ. ಮಂಡ್ಯ ಜಿಲ್ಲೆಯ ರೈತನೊಬ್ಬ ಪುನೀತ್‌ಗೆ ಅಂದು ವಿಶೇಷವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಇದೀಗ ಚಿಗುರು ಬಂದಿದೆ.
ಮಂಡ್ಯದ ಮೊತ್ತಳ್ಳಿ ಗ್ರಾಮದ ರೈತ ಕಾಳಪ್ಪ ರಾಜು ಪುನೀತ್ ಅವರ ಅಗಲಿಕೆಯ ಬಳಿಕ ವಿಭಿನ್ನವಾಗಿ ಶ್ರದ್ಧಾಂಜಲಿ ಸಲ್ಲಿಸಿದ್ದರು. ತಮ್ಮ ಭತ್ತದ ಗದ್ದೆಯಲ್ಲಿ ಮತ್ತೆ ಹುಟ್ಟಿ ಬಾ ಪುನೀತ್ ರಾಜ್ ಕುಮಾರ್ ಎಂದು ಭತ್ತದಲ್ಲೇ ಬರೆದು ನಾಟಿ ಮಾಡಿದ್ದರು. ಇದೀಗ ನಾಟಿ ಮಾಡಿರುವ ಭತ್ತ ಚಿಗುರಿದೆ. ಇದನ್ನೂ ಓದಿ: RD Parade 2022: ಕರ್ನಾಟಕದ ಸ್ತಬ್ಧಚಿತ್ರಕ್ಕೆ ಎರಡನೇ ಸ್ಥಾನ
ರೈತ ಸಲ್ಲಿಸಿದ ಶ್ರದ್ಧಾಂಜಲಿಯನ್ನು ಜನರು ಕುತೂಹಲದಿಂದ ವೀಕ್ಷಣೆ ಮಾಡುತ್ತಿದ್ದಾರೆ. ರೈತ ತಮ್ಮ ಗದ್ದೆಯಲ್ಲಿ ಬಿಡಿಸಿರುವ ಶ್ರದ್ಧಾಂಜಲಿ ಚಿತ್ತಾರದ ಫೋಟೋ ಹಾಗೂ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್: ಪ್ರಮೋದ್ ಮುತಾಲಿಕ್