ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ – ಇಂದು ಪಿಎಂ ಉದ್ಘಾಟನೆ

Public TV
2 Min Read
ramanujacharya

ಹೈದರಾಬಾದ್: ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆಗಳಲ್ಲಿ ಒಂದಾದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಹೈದರಾಬಾದ್‍ನಲ್ಲಿ ಅನಾವರಣಗೊಳಿಸಲಿದ್ದಾರೆ.

216 ಅಡಿ ಎತ್ತರದ ಸಮಾನತೆಯನ್ನು ಸಾರುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ಮೋದಿ ಶನಿವಾರ ಸಂಜೆ 5 ಗಂಟೆಗೆ ಅನಾವರಣಗೊಳಿಸಲಿದ್ದಾರೆ. ಈ ಬಗ್ಗೆ ಪ್ರಧಾನಿ ಸ್ವತಃ ಟ್ವೀಟ್ ಮಾಡಿದ್ದಾರೆ.

NARENDRA MODI 8

ಟ್ವೀಟ್‍ನಲ್ಲಿ ಏನಿದೆ?: ಸಂಜೆ 5 ಗಂಟೆಗೆ ನಾನು ಸಮಾನತೆಯ ಪ್ರತಿಮೆ ಉದ್ಘಾಟಿಸುವ ಕಾರ್ಯಕ್ರಮದಲ್ಲಿ ಸೇರುತ್ತೇನೆ. ಇದು ಶ್ರೀ ರಾಮಾನುಜಾಚಾರ್ಯರಿಗೆ ಸೂಕ್ತವಾದ ಗೌರವವಾಗಿದೆ. ಅವರ ಪವಿತ್ರ ಆಲೋಚನೆಗಳು ಹಾಗೂ ಬೋಧನೆಗಳು ನಮಗೆ ಸ್ಫೂರ್ತಿ ನೀಡುತ್ತವೆ ಎಂದು ತಿಳಿಸಿದ್ದಾರೆ.

ಈ ಪ್ರತಿಮೆಯು ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರನ್ನು ಸ್ಮರಿಸುತ್ತದೆ. ಅವರು ನಂಬಿಕೆ, ಜಾತಿ ಮತ್ತು ಪಂಥ ಸೇರಿದಂತೆ ಜೀವನದ ಎಲ್ಲಾ ಅಂಶಗಳಲ್ಲಿ ಸಮಾನತೆಯ ಕಲ್ಪನೆಯನ್ನು ಸಾರುತ್ತದೆ. ಇದನ್ನೂ ಓದಿ:  ಅಧಿಕೃತ ಕಾರ್ಯಕ್ರಮಗಳಲ್ಲಿ ನ್ಯಾಯಾಲಯಗಳಲ್ಲಿ ಡಾ. ಅಂಬೇಡ್ಕರ್ ಭಾವಚಿತ್ರ ಅಳವಡಿಕೆಗೆ ಹೈಕೋರ್ಟ್ ಆದೇಶ

11ನೇ ಶತಮಾನದ ಸಂತ ಶ್ರೀರಾಮಾನುಜಾಚಾರ್ಯರ ಎಲ್ಲಾ ವಿಧದ ಸಮಾನತೆಯನ್ನು ಪ್ರೋತ್ಸಾಹಿಸಿದ್ದರು. ಸಮಾನತೆಯನ್ನು ಬೋಧನೆ ಮಾಡಿದ್ದರು. ಹೈದರಾಬಾದ್‍ನ ಮುಂಚಿತ್ತಾಲ್‍ನಲ್ಲಿ ಇದೀಗ ಪಂಚಲೋಹದ ರಾಮಾನುಜಾಚಾರ್ಯರ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಚಿನ್ನ, ಬೆಳ್ಳಿ, ಕಂಚು, ತಾಮ್ರ ಹಾಗೂ ಜಿಂಕ್‍ನಿಂದ ಈ ಪ್ರತಿಮೆ ನಿರ್ಮಿಸಲಾಗಿದೆ. ಈ ಮೂರ್ತಿಯು ಕುಳಿತ ಭಂಗಿಯಲ್ಲಿ ಇರುವ ವಿಶ್ವದ ಅತಿ ಎತ್ತರದ ಪ್ರತಿಮೆಗಳಲ್ಲಿ ಒಂದಾಗಿರಲಿದೆ.

ramanujacharya 1

ಶ್ರೀರಾಮಾನುಜಾಚಾರ್ಯ ಸಹಸ್ರಾಬ್ದಿ ಸಮಾರೋಪ ಕಾರ್ಯಕ್ರಮವು ಒಟ್ಟು 12 ದಿನಗಳ ಕಾಲ ನಡೆಯಲಿದೆ. ಇದರ ಅಂಗವಾಗಿ ಇಂದು ಸಮಾನತೆಯ ಪ್ರತಿಮೆ ಅನಾವರಣಗೊಳ್ಳಲಿದೆ. ಈ ವೇಳೆ, ಪ್ರಧಾನಿ ಮೋದಿ ಹೈದರಾಬಾದ್‍ನಲ್ಲಿ ಇತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಸಾವು

Share This Article
Leave a Comment

Leave a Reply

Your email address will not be published. Required fields are marked *