SSLC, PUC ಪರೀಕ್ಷೆ ನಿಗದಿಯಂತೆ ನಡೆಯುತ್ತೆ: ಸಚಿವ ಬಿ.ಸಿ.ನಾಗೇಶ್

Public TV
1 Min Read
BC NAGESH 1

ಚಾಮರಾಜನಗರ: ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದ್ದಾರೆ.

SSLC PUC 3

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ದಿನಾಂಕದ ವಿಚಾರದಲ್ಲಿ ಒಂದು ದಿನವೂ ಹೆಚ್ಚು ಕಡಿಮೆ ಆಗುವುದಿಲ್ಲ. ಕೊರೊನಾ ಮೂರನೇ ಅಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ದೇವರ ಆಶೀರ್ವಾದಿಂದ ರಾಜ್ಯದಲ್ಲಿ ಅಂತಹ ಸಂದರ್ಭ ಬರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಸಿದ್ದು, ಸಿಧು ಸಾಕು: ಬಿಜೆಪಿ ವ್ಯಂಗ್ಯ

ಶೇಕಡಾ 99ರಷ್ಟು ಶಾಲೆಗಳು ತೆರೆದಿದ್ದವು. ಮಕ್ಕಳ ಹಾಜರಾತಿಯೂ ಚೆನ್ನಾಗಿದೆ. ಹಾಗಾಗಿ ನಿಗದಿತ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

BC NAGESH 1 2

ಈ ವರ್ಷದ ಮಾರ್ಚ್‌ 28ರಿಂದ ಏಪ್ರಿಲ್‌ 11ರವರೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: ಸರ್ಕಾರಿ ಶಾಲೆಯ ಕಂಪ್ಯೂಟರ್ ಕದ್ದ ಕಳ್ಳರು

Share This Article
Leave a Comment

Leave a Reply

Your email address will not be published. Required fields are marked *