ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

Public TV
1 Min Read
triple ride

ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಕೇಂದ್ರಬಿಂದುವಾಗಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ತಮ್ಮ ಪ್ರಣಾಳಿಕೆಗಳಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸಿವೆ. ಈ ನಡುವೆ ಸಮಾಜವಾದಿ ಪಕ್ಷದೊಂದಿಗೆ (ಎಸ್‌ಪಿ) ಮೈತ್ರಿ ಸಾಧಿಸಿರುವ ಸುಹೆಲ್‌ದೇವ್‌ ಭಾರತೀಯ ಸಮಾಜ ಪಕ್ಷ (ಎಸ್‌ಬಿಎಸ್‌ಪಿ) ಅಚ್ಚರಿ ಮೂಡಿಸುವಂತಹ ಭರವಸೆಯೊಂದನ್ನು ನೀಡಿದೆ.

ನಮ್ಮ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಬೈಕ್‌ಗಳಲ್ಲಿ ಟ್ರಿಪಲ್‌ ರೈಡ್‌ಗೆ ಅನುಮತಿ ನೀಡಲಾಗುವುದು ಎಂದು ಎಸ್‌ಬಿಎಸ್‌ಪಿ ಅಧ್ಯಕ್ಷ ಹಾಗೂ ಯುಪಿ ಮಾಜಿ ಸಚಿವ ಓಂ ಪ್ರಕಾಶ್‌ ರಾಜ್‌ಭರ್‌ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಟಿಷರು ಬಿಜೆಪಿ ರೂಪದಲ್ಲಿ ಮತ್ತೆ ಭಾರತಕ್ಕೆ ಬಂದಿದ್ದಾರೆ: ಲಾಲೂ ಪ್ರಸಾದ್ ಯಾದವ್

sbsp

ಬೈಕ್‌ಗಳಲ್ಲಿ ಟ್ರಪಲ್‌ ರೈಡ್‌ಗೆ ಅನುಮತಿ ನೀಡುತ್ತೇವೆ. ಅಂತಹವರಿಗೆ ಯಾವುದೇ ದಂಡ ವಿಧಿಸುವುದಿಲ್ಲ ಎಂದು ರಾಜ್‌ಭರ್‌ ತಿಳಿಸಿದ್ದಾರೆ.

ಸೀಮಿತ ಆಸನ ಸಾಮರ್ಥ್ಯವಿರುವ ರೈಲುಗಳ ಕೋಚ್‌ಗಳಲ್ಲಿ ನೂರಾರು ಜನರು ಪ್ರಯಾಣಿಸುತ್ತಾರೆ. ಅವರಿಗೆ ಸರ್ಕಾರವಾಗಲಿ ಅಥವಾ ರೈಲ್ವೆ ವಿಭಾಗದವರಾಗಲಿ ದಂಡ ಹಾಕುತ್ತಾರೆಯೇ ಎಂದು ರಾಜ್‌ಭರ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಹಿಜಬ್‌ ವಿವಾದ ಇಲ್ಲ, ನಿಷೇಧ ಪ್ರಸ್ತಾಪವೂ ಇಲ್ಲ: ಗೃಹ ಸಚಿವ

akhilesh yadav

ಫೆ.10ರಿಂದ ವಿವಿಧ ಹಂತಗಳಲ್ಲಿ ಉತ್ತರ ಪ್ರದೇಶ ಚುನಾವಣೆ ನಡೆಯಲಿದೆ. ಮಾರ್ಚ್‌ 10ಕ್ಕೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

Share This Article
Leave a Comment

Leave a Reply

Your email address will not be published. Required fields are marked *