ಅಮರಾವತಿ: ರಾಜ್ಯ ಸಾರಿಗೆ ನಿಗಮದ ಬಸ್ ಚಾಲಕನಿಗೆ ಥಳಿಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಂದಿನಿ ಬಂಧಿತ ಆರೋಪಿ. ಫೆಬ್ರವರಿ ೯ರಂದು ವಿಜಯವಾಡದಲ್ಲಿ ಘಟನೆ ನಡೆದಿದ್ದು, ಮಹಿಳೆ ಸ್ಕೂಟರ್ ಚಲಾಯಿಸುತ್ತಿದ್ದಾಗ ಏಕಾಏಕಿ ಬಸ್ಸಿನೊಳಗೆ ನುಗ್ಗಿ ಚಾಲಕ ಮುಸಲಯ್ಯ ಅವರಿಗೆ ಥಳಿಸಲು ಪ್ರಾರಂಭಿಸಿದ್ದಾಳೆ. ಸ್ಥಳದಲ್ಲಿ ನೆರೆದಿದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಇಡೀ ಘಟನೆಯನ್ನು ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಗುಪ್ತಚರ ವಿಭಾಗ ನನ್ನ ಫೋನ್ ಕದ್ದಾಲಿಕೆ ಮಾಡಿದೆ: ಅಣ್ಣಾಮಲೈ ಆರೋಪ
ಪೊಲೀಸರ ಪ್ರಕಾರ ನಂದಿನಿ ರಸ್ತೆಯ ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುತ್ತಿದ್ದಳು. ಚಾಲಕ ಬಸ್ಸು ಮುಂದೆ ಚಲಿಸಲು ಸ್ವಲ್ಪ ಸಮಯ ಕಾಯುವಂತೆ ಮಹಿಳೆ ಬಳಿ ಹೇಳಿದ್ದ. ಇದು ತೀವ್ರ ವಾಗ್ವಾದಕ್ಕೆ ಕಾರಣವಾಗಿ, ಮಹಿಳೆ ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಾಳೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ
ಬಸ್ ಚಾಲಕ ನೀಡಿದ ದೂರಿನ ಮೇರೆಗೆ ವಿಜಯವಾಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಬಂಧಿಸಿದ ಐಪಿಸಿ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿ ಮಹಿಳೆಯನ್ನು ಬಂಧಿಸಲಾಗಿದೆ.