ರಾಷ್ಟ್ರ ದ್ರೋಹಿ: ನಾನಲ್ಲ ರಾಷ್ಟ್ರದ್ರೋಹಿ ನೀನು – ವಿಧಾನಸಭೆಯಲ್ಲಿ ಡಿಕೆಶಿ vs ಈಶ್ವರಪ್ಪ

Public TV
2 Min Read
DK SHIVAKUMAR AND ESHWARAPPPA

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನಡುವೆ ಮಾತಿನ ಯುದ್ಧ ನಡೆದಿದೆ. ಈಶ್ವರಪ್ಪ ರಾಷ್ಟ್ರದ್ರೋಹಿ ಎಂದು ಡಿಕೆಶಿ ಕೂಗುತ್ತಿದ್ದಂತೆ ಈಶ್ವರಪ್ಪ ನಾನಲ್ಲ ರಾಷ್ಟ್ರದ್ರೋಹಿ ನೀನು ಎಂದು ವಾಗ್ದಾಳಿ ನಡೆಸಿದ್ದಾರೆ.

SMG FLAG

ವಿಧಾನಸಭೆಯಲ್ಲಿ ಇಂದು ಈಶ್ವರಪ್ಪ ಮತ್ತು ಡಿಕೆ ಶಿವಕುಮಾರ್ ಇಬ್ಬರು ನಾಯಕರು ಮಾತಿನ ಜಗಳಕ್ಕೆ ಇಳಿದ ಪ್ರಸಂಗ ನಡೆಯಿತು. ಕೆಲದಿನಗಳ ಹಿಂದೆ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ನೀಡಿದ ಹೇಳಿಕೆ ಇಂದು ವಿಧಾನಸಭೆಯಲ್ಲಿ ಕೊಲಾಹಲ ಸೃಷ್ಟಿಸಿತು. ಈಶ್ವರಪ್ಪ ಮಾತಿನ ಬಗ್ಗೆ ಸಿದ್ದರಾಮಯ್ಯ ಧ್ವನಿ ಎತ್ತುತ್ತಿದ್ದಂತೆ, ಡಿ.ಕೆ ಶಿವಕುಮಾರ್, ಈಶ್ವರಪ್ಪ ವಿರುದ್ಧ ವಾಕ್ಸಮರ ನಡೆಸಿದರು.  ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

SESSTION

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಶ್ವರಪ್ಪ ಹೇಳಿಕೆಯ ಬಗ್ಗೆ ಅವರ ಅಭಿಪ್ರಾಯ ಕೇಳುತ್ತೇನೆ ಎಂದಾಗ, ದೇಶದ್ರೋಹ ಮಾಡಿವರೊಂದಿಗೆ ಏನು ಉತ್ತರ ಕೇಳುತ್ತೀರಿ ಎಂದು ಡಿಕೆಶಿ ಪ್ರಶ್ನಿಸಿದರು. ಶಿವಕುಮಾರ್ ಮಾತಿಗೆ ತೀವ್ರ ಸಿಟ್ಟಿಗೆದ್ದ ಈಶ್ವರಪ್ಪ ರಾಷ್ಟ್ರ ದ್ರೋಹಿ ಅವನು, ಜೈಲಿಗೆ ಹೋಗಿ ಬಂದವನು ನನಗೇನು ಹೇಳೋದು, ಬೇಲ್‍ನಲ್ಲಿ ಇದ್ದೀಯಾ, ನೀನು ರಾಷ್ಟ್ರ ದ್ರೋಹಿ ನೀನು ನನಗೆ ಹೇಳಬೇಡ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು. ಸದನದಲ್ಲಿ ಕೆಲಕಾಲ ಏಕವಚನದಲ್ಲಿ ಇಬ್ಬರೂ ಕೈ, ಕೈ ತೋರಿಸಿಕೊಂಡು ಕೂಗಾಡಿದರು. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್

VISHWASHWARA HEGDE KAGERI

ಡಿಕೆಶಿ ಮತ್ತು ಈಶ್ವರಪ್ಪ ಕೂಗಾಡುತ್ತಿದ್ದಂತೆ ಮಧ್ಯಪ್ರವೇಶಿಸಿದ ಸ್ಪೀಕರ್, ನೀವೆಲ್ಲ ಹಿರಿಯ ಸದಸ್ಯರು, ಏಕೆ ಹೀಗೆ ಆಡ್ತೀರಿ?. ನನಗೆ ಮನವರಿಕೆ ಆಗಬೇಕಲ್ಲವಾ? ನಿಮ್ಮನ್ನು ನೋಡಿದರೆ ಏನ್ ಮನವರಿಕೆ ಆಗುತ್ತೆ? ರೀ ಶಿವಕುಮಾರ್ ನೀವು ಹೇಗೆ ನಡೆದುಕೊಳ್ತಿದ್ದೀರಿ? ನೀವು ಒಂದು ಪಕ್ಷದ ಅಧ್ಯಕ್ಷರು ಎಂದು ಗರಂ ಆದರು.

ಬಳಿಕ ಸದನದ ಬಾವಿಗಿಳಿದು ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾರ್ಷಲ್‍ಗಳು ಸಭಾಂಗಣದ ಒಳಗೆ ಹೋಗಿ ನಿಂತರು. ಒಂದು ಹಂತದಲ್ಲಿ ಡಿಕೆಶಿ ಮತ್ತು ಈಶ್ವರಪ್ಪ ಕೈ, ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಈಶ್ವರಪ್ಪ ಮೇಲೆ ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಕೂಗಾಡಿದರು. ಈವೇಳೆ ಈಶ್ವರಪ್ಪ ಬೆಂಬಲಕ್ಕೆ ರೇಣುಕಾಚಾರ್ಯ ನಿಂತರು. ಆ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಬ್ಬರನ್ನು ಕೂಡ ಮನವೊಲಿಸಲು ಪ್ರಯತ್ನ ಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *