Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ್ರೋಹಿ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಬೇಕು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದ್ರೋಹಿ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಬೇಕು: ಸಿದ್ದರಾಮಯ್ಯ

Bengaluru City

ದೇಶದ್ರೋಹಿ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಿಸಬೇಕು: ಸಿದ್ದರಾಮಯ್ಯ

Public TV
Last updated: February 16, 2022 11:16 pm
Public TV
Share
4 Min Read
siddaramaiah
SHARE

– RSS ರಾಷ್ಟ್ರಧ್ವಜವನ್ನು ಎಂದೂ ಒಪ್ಪಿಕೊಂಡಿರಲಿಲ್ಲ

ಬೆಂಗಳೂರು: ಇಂದು ವಿಧಾನ ಸಭಾ ಕಲಾಪದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಬಿಗ್ ಪೈಟ್ ನಡೆದಿದೆ. ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ ಹಾಕಿದ್ದು, ಸರ್ಕಾರಿ ನಿವಾಸದೆದುರು ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಬೆಜೆಪಿ ರಾಜಕೀಯದ ಅಸ್ತ್ರಗಳು. ಸಂವಿಧಾನ ಮತ್ತು ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಸಚಿವ ಈಶ್ವರಪ್ಪನವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ತಮ್ಮ ಬಿಜೆಪಿ ಪಕ್ಷ ಮತ್ತು ಪರಿವಾರದ ಅಭಿಪ್ರಾಯವನ್ನೇ ಅವರು ಹೇಳಿದ್ದಾರೆ. ಅಂತರಂಗದಲ್ಲಿ ಪ್ರಧಾನಿ ಹಿಡಿದು ಆರ್‍ಎಸ್‍ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ವರೆಗೆ ಎಲ್ಲರ ಅಭಿಪ್ರಾಯವೂ ಇದೇ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಅದರ ಪೂರ್ವಾಶ್ರಮದ ಜನಸಂಘ ಮತ್ತು ಆರ್ ಎಸ್ ಎಸ್ ರಾಷ್ಟ್ರಧ್ವಜವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಭಗವಾಧ್ವಜವನ್ನೇ ರಾಷ್ಟ್ರಧ್ವಜ ಮಾಡುವುದು ಅವರ ಮೂಲ ಅಜೆಂಡಾ ಆಗಿದೆ.
7/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದ ಕೃತ್ಯವನ್ನು ಈಶ್ವರಪ್ಪನವರು ಖಂಡಿಸಿ ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಂಡಿದ್ದರೆ ವಿವಾದ ಶಾಂತಿಯುತವಾಗಿ ಬಗೆಹರಿಯುತ್ತಿತ್ತು. ಅವರು ಇವತ್ತಲ್ಲ ನಾಳೆ ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಅತ್ಯಂತ ಉಡಾಫೆಯಿಂದ ಮಾತನಾಡಿ ಪ್ರಚೋದಿಸಿದ್ದಾರೆ. ದೇಶದಲ್ಲಿ ಸರ್ಕಾರವನ್ನು ಟೀಕಿಸಿದ ವ್ಯಕ್ತಿಗಳ ಮೇಲೆಲ್ಲಾ ರಾಷ್ಟ್ರ ದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರದೋಹದ ಹೇಳಿಕೆ ಕೊಟ್ಟಿರುವ ಕೆ.ಎಸ್. ಈಶ್ವರಪ್ಪನವರ ಮೇಲೆ ಸರ್ಕಾರ ಯಾವುದೆ ಕ್ರಮವನ್ನು ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ ಎಂದು ಆಢಳಿತ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ದೇಶದಲ್ಲಿ ಸರ್ಕಾರವನ್ನು ಟೀಕಿಸಿದ ವ್ಯಕ್ತಿಗಳ ಮೇಲೆಲ್ಲಾ ರಾಷ್ಟ್ರ ದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರದೋಹದ ಹೇಳಿಕೆ ಕೊಟ್ಟಿರುವ ಕೆ.ಎಸ್. ಈಶ್ವರಪ್ಪನವರ ಮೇಲೆ @BJP4India ಸರ್ಕಾರ ಯಾವುದೆ ಕ್ರಮವನ್ನು ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ.
5/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ದೇಶಪ್ರೇಮವೇ ತಮ್ಮ ಉಸಿರು ಎಂದು ಹೇಳುತ್ತಿರುವ ಕನಿಷ್ಠ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಬಹುದಿತ್ತು. ಅದು ಸಚಿವರ ವೈಯಕ್ತಿಕ ಹೇಳಿಕೆ ಎಂದಾದರೂ ಹೇಳಬಹುದಿತ್ತು. ಪಕ್ಷದ ಮೌನವು ಈಶ್ವರಪ್ಪನವರ ಹೇಳಿಕೆಗೆ ತಮ್ಮ ಸಮ್ಮತಿ ಇದೆ ಎಂದು ಹೇಳಿದಂತಾಗುವುದಿಲ್ಲವೇ? ಬಿಜೆಪಿ ಅದರ ಪೂರ್ವಾಶ್ರಮದ ಜನಸಂಘ ಮತ್ತು ಆರ್‍ಎಸ್‍ಎಸ್ ರಾಷ್ಟ್ರಧ್ವಜವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಭಗವಾಧ್ವಜವನ್ನೇ ರಾಷ್ಟ್ರಧ್ವಜ ಮಾಡುವುದು ಅವರ ಮೂಲ ಅಜೆಂಡಾ ಆಗಿದೆ. ನಾಗಪುರದ ಆರ್‍ಎಸ್‍ಎಸ್ ಕಚೇರಿ ಮೇಲೆ ಭಾರತ ಗಣರಾಜ್ಯವಾದ 52 ವರ್ಷಗಳವರೆಗೆ ರಾಷ್ಟ್ರಧ್ವಜ ಆರೋಹಣ ಮಾಡಿರಲಿಲ್ಲ. ಕೊನೆಗೆ ಒಲ್ಲದ ಮನಸ್ಸಿನಿಂದ 2002 ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಿದರೂ ಅಂತರಂಗದ ವಿರೋಧ ಇದ್ದೇ ಇದೆ. ಅದು ಈಶ್ವರಪ್ಪನಂತಹವರ ಬಾಯಿಯಿಂದ ಆಗಾಗ ಹೊರಬರುತ್ತದೆ ಎಂದು ವಾಗ್ಧಾಳಿ ಮಾಡಿದ್ದಾರೆ.

ಸಚಿವ ಈಶ್ವರಪ್ಪನವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ತಮ್ಮ @BJP4India ಪಕ್ಷ ಮತ್ತು ಪರಿವಾರದ ಅಭಿಪ್ರಾಯವನ್ನೇ ಅವರು ಹೇಳಿದ್ದಾರೆ. ಅಂತರಂಗದಲ್ಲಿ ಪ್ರಧಾನಿ @narendramodi ಅವರಿಂದ ಹಿಡಿದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ವರೆಗೆ ಎಲ್ಲರ ಅಭಿಪ್ರಾಯವೂ ಇದೇ ಆಗಿದೆ.
3/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ದೇಶಾದ್ಯಂತ ಆರ್‍ಎಸ್‍ಎಸ್ ನಡೆಸುವ ಬೈಠಕ್‍ಗಳಲ್ಲಿ ಅವರು ಭಗವಾದ್ವಜವನ್ನಷ್ಟೇ ಹಾರಿಸುತ್ತಿದ್ದಾರೆಯೇ ವಿನಹ ರಾಷ್ಟ್ರಧ್ವಜವನ್ನು ಹಾರಿಸುತ್ತಿರಲಿಲ್ಲ. ಈಗಲೂ ಆರ್‍ಎಸ್‍ಎಸ್ ಬೈಠಕ್‍ಗಳಲ್ಲಿ ನನಗೆ ತಿಳಿದ ಹಾಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿಲ್ಲ. ಸಂವಿಧಾನದ ಪರಿಚ್ಛೇದ-51 ಎರಲ್ಲಿ ಮೂಲಭೂತ ಕರ್ತವ್ಯಗಳನ್ನು ವಿವರಿಸಲಾಗಿದೆ. ಅದರಲ್ಲಿ ಮೊದಲನೆ ಕರ್ತವ್ಯವೇ ಸಂವಿಧಾನಕ್ಕೆ ಬದ್ಧವಾಗಿರುವುದು ಹಾಗೂ ಅದರ ಆದರ್ಶಗಳನ್ನು ಮತ್ತು ಸಂಸ್ಥೆಗಳನ್ನು, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರ ಗೀತೆಯನ್ನು ಗೌರವಿಸುವುದಾಗಿದೆ ಎಂದು ಹೇಳಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಚಿವ ಈಶ್ವರಪ್ಪನವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ತಮ್ಮ @BJP4India ಪಕ್ಷ ಮತ್ತು ಪರಿವಾರದ ಅಭಿಪ್ರಾಯವನ್ನೇ ಅವರು ಹೇಳಿದ್ದಾರೆ. ಅಂತರಂಗದಲ್ಲಿ ಪ್ರಧಾನಿ @narendramodi ಅವರಿಂದ ಹಿಡಿದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ವರೆಗೆ ಎಲ್ಲರ ಅಭಿಪ್ರಾಯವೂ ಇದೇ ಆಗಿದೆ.
3/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಮತ್ತು ಸಂವಿಧಾನ ರಾಷ್ಟ್ರದ ಪ್ರಮುಖ ಸಂಕೇತಗಳು, ರಾಜರ ಕಾಲದಲ್ಲಿ ಬೆಳ್ಗೊಡೆ ಮತ್ತು ಸಿಂಹಾಸನಗಳು ರಾಜ ಪ್ರಭುತ್ವಗಳ ಲಾಂಛನಗಳಾದರೆ ಹೊಸ ರಾಷ್ಟ್ರದಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ಸಂವಿಧಾನ 3 ಲಾಂಛನಗಳು. ಇವುಗಳಿಗೆ ಅವಮಾನ ಎಸಗುವ ಯಾವುದೇ ವ್ಯಕ್ತಿಯ ಕೃತ್ಯ ರಾಷ್ಟ್ರದ್ರೋಹವಾಗಿದೆ. ಕಾಲಕಾಲಕ್ಕೆ ರಾಜಕೀಯದ ಲಾಭ ಪಡೆಯಲು ಇಲ್ಲವೇ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು, ಜನರ ಗಮನ ಬೇರೆ ಕಡೆ ಸೆಳೆಯಲು ರಾಷ್ಟ್ರಧ್ವಜದಂತಹ ವಿವಾದವನ್ನು ಹುಟ್ಟು ಹಾಕುತ್ತದೆ ಎಂದಿದ್ದಾರೆ. ಇದನ್ನೂ ಓದಿ:  ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ

ಬಿಜೆಪಿ ಮತ್ತು ಆರ್ ಎಸ್ ಎಸ್ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ @BJP4India ಕ್ಕೆ ರಾಜಕೀಯದ ಅಸ್ತ್ರಗಳು. ಸಂವಿಧಾನ ಮತ್ತು ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದಾರೆ. 2/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ಸಂವಿಧಾನವನ್ನು ವಿರೋಧಿಸುವವರು, ರಾಷ್ಟ್ರಧ್ವಜವನ್ನು ಒಪ್ಪದವರು ಎಂದೂ ದೇಶಪ್ರೇಮಿಯಾಗಲು ಸಾಧ್ಯವಿಲ್ಲ. ಮೂಲಭೂತವಾಗಿ ಬಬಿಜೆಪಿ ನಾಯಕರು ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಒಪ್ಪುವುದಿಲ್ಲ. ಇವರೇನಿದ್ದರೂ ನಕಲಿ ದೇಶಪ್ರೇಮಿಗಳು, ಇವರದ್ದೇನಿದ್ದರೂ ನಕಲಿ ದೇಶಪ್ರೇಮ. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗುರುವಾರ 11 ಗಂಟೆಯೊಳಗೆ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ಸಾಲು ಸಾಲು ಟ್ವೀಟ್ ಮಾಡಿ ಬಿಜೆಪಿ ಸರ್ಕಾರದ ವಿರುದ್ಧವಾಗಿ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ತಮಿಳುನಾಡು ಸಿಎಂ ಮನೆಗೆ ಶಿವರಾಜ್‍ಕುಮಾರ್ ದಂಪತಿ ಭೇಟಿ

TAGGED:bengaluruk s eshwarappasiddaramaiahಆರ್‍ಎಸ್‍ಎಸ್ಕಾಂಗ್ರೆಸ್ಕೆಎಸ್ ಈಶ್ವರಪ್ಪಬಿಜೆಪಿರಾಷ್ಟ್ರಧ್ವಜಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
35 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
1 hour ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
1 hour ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
2 hours ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
2 hours ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?