Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ, ಸಂಪುಟದಿಂದ ವಜಾಗೊಳಿಸಿ: ಡಿಕೆಶಿ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ, ಸಂಪುಟದಿಂದ ವಜಾಗೊಳಿಸಿ: ಡಿಕೆಶಿ ಒತ್ತಾಯ

Karnataka

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸುತ್ತಿಲ್ಲ, ಸಂಪುಟದಿಂದ ವಜಾಗೊಳಿಸಿ: ಡಿಕೆಶಿ ಒತ್ತಾಯ

Public TV
Last updated: February 18, 2022 3:04 pm
Public TV
Share
2 Min Read
dk shivakumar
SHARE

ಬೆಂಗಳೂರು: ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒತ್ತಾಯಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ, ದೇಶದ ಗೌರವ ಕಾಪಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಈಗ ಆ ಕೆಲಸ ಮಾಡಬೇಕಲ್ಲವೇ? ಇದು ಕೇವಲ ಈಶ್ವರಪ್ಪನ ವಿಚಾರ ಅಲ್ಲ. ರಾಷ್ಟ್ರಧ್ವಜ ಗೌರವದ ಪ್ರಶ್ನೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

ESHWARAPPA 4

ವಿಧಾನಸೌಧದಲ್ಲಿ ಅಹೋರಾತ್ರಿ ನಡೆಸಿದ ಧರಣಿ ನಮ್ಮ ಹಾಗೂ ಬಿಜೆಪಿ ನಡುವಣ ವೈಯಕ್ತಿಕ ಹೋರಾಟ ಅಲ್ಲ. ಈಶ್ವರಪ್ಪ ಅವರು ನನ್ನ ತಂದೆಯನ್ನು ಎಳೆದು ತಂದಿದ್ದಾರೆ. ಅದು ವೈಯಕ್ತಿಕ ವಿಚಾರವಾದರೂ ನಾನು ಆ ಬಗ್ಗೆ ಮಾತನಾಡುತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಚಾರ. ಇದಕ್ಕಾಗಿ ನಮ್ಮ ಪೂರ್ವಜರು ಮಾಡಿರುವ ತ್ಯಾಗ ಬಲಿದಾನ ಅಪಾರವಾಗಿದೆ. ಇದು ದೇಶದ ಗೌರವ ಹಾಗೂ 135 ಕೋಟಿ ಭಾರತೀಯರ ಸ್ವಾಭಿಮಾನದ ಪ್ರಶ್ನೆ ಎಂದು ಪ್ರತಿಪಾದಿಸಿದರು.

ರಾಷ್ಟ್ರಧ್ವಜ ಹಾರುವಾಗ ನಮ್ಮೆಲ್ಲರ ಮೈ ರೋಮಾಂಚನವಾಗುತ್ತದೆ. ಅಂತಹ ಧ್ವಜ ತೆಗೆದುಹಾಕಿ, ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿದರೆ ನೋಡಿಕೊಂಡು, ಕೇಳಿಕೊಂಡು ಸುಮ್ಮನೆ ಕೂರಲು ಸಾಧ್ಯವೇ? ಈ ದೇಶಕ್ಕೆ ರಾಷ್ಟ್ರಧ್ವಜ, ಸ್ವಾತಂತ್ರ್ಯ ತಂದುಕೊಟ್ಟವರು ಕಾಂಗ್ರೆಸಿಗರು. ಹೀಗಾಗಿ ನಾವು ಈ ವಿಚಾರವಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಮರ್ಥನೆಗೆ ಮುಂದಾದರೆ ಅವರೂ ಕೂಡ ಇದಕ್ಕೆ ಹೊಣೆಯಾಗುತ್ತಾರೆ. ಅಲ್ಲದೆ ತಮ್ಮ ಸ್ಥಾನಕ್ಕೆ ಅಗೌರವ ತರುತ್ತಾರೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

SHIVAMOGGA COLLEGE KEASRI HIJAB 1

ನೆರೆ, ರೈತರಿಗೆ ಸಮಸ್ಯೆ ಆದಾಗ ಕಾಂಗ್ರೆಸ್ ಅಹೋರಾತ್ರಿ ಧರಣಿ ಮಾಡಲಿಲ್ಲ. ಆದರೆ ಬೇರೆ ವಿಚಾರವಾಗಿ ಧರಣಿ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಮಾಡಲಿಲ್ಲ ಎಂದಾದರೆ ಅವರು ಬಂದು ಮಾಡಲಿ. ಇಷ್ಟು ದಿನ ಯಾವ ಸುದ್ದಿಯನ್ನೂ ಎತ್ತದ ಅವರು ಈಗ ಬಂದು ಸರ್ಕಾರದ ವೈಫಲ್ಯಗಳ ಬಗ್ಗೆ ಹೋರಾಟ ಮಾಡಲಿ. ನಾವು ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಮಾಡಿಲ್ಲವೇ? ಅವರದ್ದು ರಾಜಕೀಯ ಪಕ್ಷವಾಗಿದ್ದು, ಅವರ ಸಿದ್ಧಾಂತದ ಆಧಾರದ ಮೇಲೆ ಬಂದು ಹೋರಾಟ ಮಾಡಲಿ. ಬೇಡ ಎಂದವರು ಯಾರು ಎಂದು ಹೇಳಿದರು.

ಸದನದ ಸಮಯ ಹಾಳಾಗುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಸದನಕ್ಕೆ ಬಂದು ದೇವರು ಕೂತಂತೆ ಕೂತು ರೈತರು ಸೇರಿದಂತೆ ಅವರಿಗೆ ಬೇಕಾದ ವಿಚಾರಗಳ ಬಗ್ಗೆ ಮಾತನಾಡಲಿ. ಟ್ರೈಲರ್ ತೋರಿಸುತ್ತೇವೆ ಎಂದು ಹೇಳಿದ್ದಾರೆ. ಅದನ್ನೂ ನೋಡೋಣ ಎಂದು ತಿರುಗೇಟು ನೀಡಿದರು.

TAGGED:d k shivakumark s eshwarappanational flagಕೆ.ಎಸ್.ಈಶ್ವರಪ್ಪಡಿ.ಕೆ.ಶಿವಕುಮಾರ್ರಾಷ್ಟ್ರಧ್ವಜ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
4 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
5 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
18 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
32 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
41 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?