Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಸರಿಗೆ ಸಿಎಂ ಆಗಿ ಎಫ್‌ಡಿಸಿ ಕೆಲಸ ಮಾಡಿದ್ದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಹೆಸರಿಗೆ ಸಿಎಂ ಆಗಿ ಎಫ್‌ಡಿಸಿ ಕೆಲಸ ಮಾಡಿದ್ದೆ: ಹೆಚ್‌ಡಿಕೆ

Karnataka

ಹೆಸರಿಗೆ ಸಿಎಂ ಆಗಿ ಎಫ್‌ಡಿಸಿ ಕೆಲಸ ಮಾಡಿದ್ದೆ: ಹೆಚ್‌ಡಿಕೆ

Public TV
Last updated: February 18, 2022 6:41 pm
Public TV
Share
3 Min Read
KUMARASWAMY
SHARE

ಬೆಂಗಳೂರು: ಕಳೆದ 10 ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದನವು ಸರಿಯಾಗಿ ನಡೆಯಲೇ ಇಲ್ಲ. ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದೀರಿ. ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ ನಾನು ಆಗ ಸಿಎಂ ಅಲ್ಲ. ಎಫ್‌ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಬೇಸರದಿಂದ ನುಡಿದರು. ಇದನ್ನೂ ಓದಿ: ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

SHIVAMOGGA COLLEGE KEASRI HIJAB 1

ರಾಷ್ಟ್ರಧ್ವಜ ವಿವಾದ ಕುರಿತು ಮಾತನಾಡಿದ ಅವರು, ಈ ವಿಷಯದಲ್ಲಿ ನಾನು ಸಚಿವ ಕೆ.ಎಸ್.ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ. ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ಧ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಧ್ವಜದ ಬಗ್ಗೆ ಅಷ್ಟೊಂದು ಹೇಳುವ ಕಾಂಗ್ರೆಸ್ ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್‌ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಈಶ್ವರಪ್ಪ ಹೇಳಿಕೆಗೆ ಯೂತ್ ಕಾಂಗ್ರೆಸ್ ಗರಂ – ಪ್ರತಿಕೃತಿ ದಹಿಸಿ ಆಕ್ರೋಶ

Eshwarappa

ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ‘ರಾಜಕೀಯ ಕೋವಿಡ್ ದುರಂತ’ ಇದು. ಈ ವಿನಾಶಕಾರಿ ಕೋವಿಡ್ ಅನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ತಿವಿದರು.

ನಾವು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸದನಕ್ಕೆ ಬಂದಿದ್ದೆವು. ಆದರೆ ಇವರು ಹಿಜಬ್ ಮತ್ತು ಕೇಸರಿ ಶಾಲು ಎಂದು ಕಲಾಪವನ್ನು ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ಚಾಟಿ ಬೀಸಿದರು.

Congress

ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಬ್ ಗೊಂದಲ ಮತ್ತಿತರ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತೆ ಆಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಬ್ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಬ್ ತೆಗೆದು, ಮನೆಗೆ ಹೋಗುವಾಗ ಮತ್ತೆ ಧರಿಸಿ ಹೋಗುತ್ತಿದ್ದರು. ಆರಂಭದಲ್ಲೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಭಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

ಈಶ್ವರಪ್ಪ ಅವರ ಪ್ರತಿಕ್ರಿಯೆ ಇವತ್ತಿನ ಈ ರೀತಿಯ ಕಲಾಪಗಳಿಗೆ ಕಾರಣವಾಗಿದೆ. ಅದಕ್ಕಿಂತಲೂ ಹೆಚ್ಚಿನ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಕಾರವಾರದ ಸಂಸದರೊಬ್ಬರು ಹಿಂದೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂಬಂತೆ ಮಾತನಾಡಿದ್ದರು. ಬಿಜೆಪಿಯವರ ಅಜೆಂಡಾಗಳೇ ಈ ರೀತಿ ಇವೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಬದುಕಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ‌ ಅವರು. ಇಂತಹ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆಗಳು ನಡೆಯುತ್ತಿವೆ ಎಂದರು.

legislative council

ಕೇಸರಿ ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ. ಅದರ ಬಗ್ಗೆ ನಮಗೂ ಪೂಜ್ಯ ಭಾವನೆ ಇದೆ. ಧಾರ್ಮಿಕ ಕ್ಷೇತ್ರದಲ್ಲಿ ಕಠಿಣ ಜೀವನಶೈಲಿ ರೂಢಿಸಿಕೊಂಡವರು ಕೇಸರಿ ಧರಿಸುತ್ತಾ ಇದ್ದರು. ಈಗ ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ. ಬಿಜೆಪಿ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟುವ ಚಳುವಳಿ ಶುರು ಮಾಡಿದಾಗ ಈ ಪದ ಬಳಕೆಯನ್ನು ಬಿಜೆಪಿಯವರು ಶುರು ಮಾಡಿದ್ದರು. ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಬದಲಾವಣೆ ತರಲು ಅವರು ಹೊರಟಿದ್ದಾರೆ ಎಂದು ಹೇಳಿದರು.

TAGGED:bjpcongressh d kumaraswamyHijabಕಾಂಗ್ರೆಸ್ಬಿಜೆಪಿಹಿಜಬ್ಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
3 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
23 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
51 minutes ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?