Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಆಡಳಿತ ಸುಧಾರಣಾ ಆಯೋಗ-2ರ 2 ಮತ್ತು 3ನೇ ವರದಿ ಸಲ್ಲಿಕೆ

Public TV
Last updated: February 18, 2022 10:32 pm
Public TV
Share
3 Min Read
karnataka administrative
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ ಎರಡು ಮತ್ತು ಮೂರನೇ ವರದಿಗಳನ್ನು ಆಯೋಗದ ಅಧ್ಯಕ್ಷರಾದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು ಸಲ್ಲಿಸಿದರು.

ವರದಿಯ ಮುಖ್ಯಾಂಶಗಳ ಮಾಹಿತಿ ಪಡೆದ ಮುಖ್ಯಮಂತ್ರಿಗಳು ವರದಿಯಲ್ಲಿ ಮಾಡಿರುವ ಶಿಫಾರಸುಗಳನ್ನು ಪರಿಶೀಲಿಸಿ, ಕೂಡಲೇ ಜಾರಿಗೊಳಿಸಲು ಸಾಧ್ಯವಿರುವ ಅಂಶಗಳನ್ನು ಅನುಷ್ಠಾನಕ್ಕೆ ತರಲು ಕ್ರಮ ವಹಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಹಾಲಿ ಸ್ಪೀಕರ್‌ಗೆ ಮಾಜಿ ಸ್ಪೀಕರ್ ಸವಾಲ್ – ಸಸ್ಪೆಂಡ್ ಮಾಡ್ಬಿಡಿ ಎಂದ ರೇವಣ್ಣ

karnataka administrative1

ಇಂದು ಸಲ್ಲಿಸಿದ ವರದಿಯು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಇಂಧನ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಒಳಾಡಳಿತ ಇಲಾಖೆಗಳಿಗೆ ಸಂಬಂಧಿಸಿದ ಶಿಫಾರಸುಗಳನ್ನು ಒಳಗೊಂಡಿದೆ. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಯೋಗದ ವರದಿಯ ಪ್ರಮುಖ ಶಿಫಾರಸುಗಳು
* ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿ ಇತ್ಯಾದಿಗಳಲ್ಲಿ ಆಗುವ ಅನುಪಯುಕ್ತ ವೆಚ್ಚಗಳ ತಡೆಗೆ ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ ರಚನೆ

* ಸರ್ಕಾರದ ಸಚಿವಾಲಯದಲ್ಲಿ ಯಾವುದೇ ಇಲಾಖೆಯ ಕಡತಗಳು ಮೂರು ಅಥವಾ ನಾಲ್ಕು ಹಂತಗಳಿಗಿಂತ ಹೆಚ್ಚು ಚಲನವಲನವಾಗಬಾರದು

* ಪ್ರಸ್ತುತ ರಾಜ್ಯದಲ್ಲಿ ಕಡತಗಳು 5-10 ಹಂತಗಳಲ್ಲಿ ಚಲಾವಣೆಯಾಗುತ್ತಿವೆ ಇದನ್ನೂ ಓದಿ: ಕಾಂಗ್ರೆಸ್ ರಾಜ್ಯದ ಮಕ್ಕಳಿಗೆ ದ್ರೋಹ ಮಾಡ್ತಿದೆ, ಇದು ರಾಜದ್ರೋಹ: ಬೊಮ್ಮಾಯಿ ಕಿಡಿ

ಮುಖ್ಯಮಂತ್ರಿ @BSBommai ಅವರಿಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ – 2 ರ ಎರಡನೇ ಮತ್ತು ಮೂರನೇ ವರದಿಯನ್ನು ಆಯೋಗದ ಅಧ್ಯಕ್ಷ, ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಅವರು ಸಲ್ಲಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. pic.twitter.com/VyQux6nlPV

— CM of Karnataka (@CMofKarnataka) February 18, 2022

* ಎಲ್ಲ ಇಲಾಖೆಗಳ ಸೂಚಿಸಿದ ಗ್ರೂಪ್-ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್‌ ಮೂಲಕ ಮಾಡಲು ಕಾಯ್ದೆ ಜಾರಿಗೆ ತರಬಹುದು

* ರಾಜ್ಯದಲ್ಲಿರುವ ಎಲ್ಲ ಅಂಚೆ ಕಚೇರಿಗಳಲ್ಲಿ ರಾಜ್ಯ ಸರ್ಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು. ಪ್ರಸ್ತುತ ಅಂಚೆ ಕಚೇರಿಗಳು ಭಾರತ ಸರ್ಕಾರದ ಸೇವೆಗಳನ್ನು ಒದಗಿಸುತ್ತಿವೆ

ಗ್ರಾಮ ಮಟ್ಟದ ಉದ್ಯಮಿಗಳಿಂದ (VLE) ಸ್ಥಾಪಿಸಲಾದ ಸಾಮಾನ್ಯ ಸೇವಾ ಕೇಂದ್ರಗಳನ್ನು (CSC) ರಾಜ್ಯವು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವುದರ ಮೂಲಕ ಸರ್ಕಾರಿ ಮತ್ತು ಸರ್ಕಾರೇತರ ಸೇವೆಗಳನ್ನು ಮನೆ ಬಾಗಿಲಿಗೆ ಒದಗಿಸಲು VLE ಗಳನ್ನು ಜನಸೇವಕರಾಗಿ ಬಳಸಿಕೊಳ್ಳಬಹುದು

ಜಿಲ್ಲಾಧಿಕಾರಿಯವರಿಗೆ ಸಾರ್ವಜನಿಕ ಉದ್ದೇಶಕ್ಕಾಗಿ ಸರ್ಕಾರದ ಇಲಾಖೆಗಳಿಗೆ ನಾಲ್ಕು ಹೆಕ್ಟೇರ್‌ವರೆಗೆ ಮತ್ತು ಜಮೀನಿನ ಮೌಲ್ಯವು ರೂ.5 ಕೋಟಿ ಮೀರದ ಸರ್ಕಾರಿ ಜಮೀನನ್ನು ಪರಿವರ್ತನಾ ಶುಲ್ಕದ ವಿನಾಯಿತಿ ನೀಡಿ ಉಚಿತವಾಗಿ ಮಂಜೂರು ಮಾಡುವ ಹೆಚ್ಚಿನ ಅಧಿಕಾರವನ್ನು ಪ್ರತ್ಯಾಯೋಜಿಸಬಹುದು

ಸಾರ್ವಜನಿಕ ಉದ್ಯಮಗಳ ಇಲಾಖೆಯನ್ನು(DPE) ಆರ್ಥಿಕ ಇಲಾಖೆಯಲ್ಲಿ ವಿಲೀನಗೊಳಿಸಬಹುದು

ಭೂಸ್ವಾಧೀನಕ್ಕೆ ಪರಿಹಾರಧನದ ಪಾವತಿಯು ಕಾಲಮಿತಿಯದ್ದಾಗಿರಬೇಕು. ಕಾಲಮಿತಿಯಲ್ಲಿ ಪಾವತಿಸದಿದ್ದರೆ ವಿಳಂಬವಾದ ಅವಧಿಗೆ ಅನವಶ್ಯಕಾಗಿ ಹೆಚ್ಚುವರಿ ಪರಿಹಾರಧನವನ್ನು ಪಾವತಿಸಬೇಕಾಗುತ್ತದೆ

ಪರಿಹಾರ ಧನವನ್ನು ಆಧಾರ್‌ ಬೇಸ್ಡ್‌ ಪಾವತಿ ಮಾಡುವಂತೆ ಪ್ರಕ್ರಿಯೆಗೊಳಿಸಬೇಕು ಇದರಿಂದ ಚೆಕ್‌ ಮೂಲಕ ಪರಿಹಾರ ಧನ ಪಾವತಿಯಲ್ಲಾಗುವ ವಂಚನೆಯನ್ನು ತಡೆಗಟ್ಟಬಹುದು

ಅಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರ ಕಾರ್ಯನಿರ್ವಹಣೆಯನ್ನುಮೌಲ್ಯಮಾಪನ ಮಾಡುವ ನಮೂನೆಯನ್ನು ಪರಿಷ್ಕರಿಸಿದ್ದು ಅದರಂತೆ ಕ್ರಮವಹಿಸಬಹುದು

ಸಾಧನೆ (ಕಾರ್ಯಕ್ಷಮತೆ ನಿರ್ವಹಣೆ ಮತ್ತು ಮೌಲ್ಯಮಾಪನ ಪದ್ಧತಿ) ಇಲಾಖೆಗಳ ಕಾರ್ಯಕ್ಷಮತೆ ನಿರ್ವಹಣೆ ಮತ್ತು ಮೌಲ್ಯಮಾಪನ ಪದ್ಧತಿಯನ್ನು ಜಾರಿಗೊಳಿಸಿ ಇಲಾಖೆಗಳ ಮೌಲ್ಯಮಾಪನ ಮಾಡಬಹುದು

ರಾಷ್ಟ್ರಮಟ್ಟದಲ್ಲಿ ರಾಜ್ಯದ ಸೂಚ್ಯಾಂಕವನ್ನು ಸುಧಾರಿಸಲು ಬಹುವಲಯ, ವಲಯ ಸೂಚ್ಯಂಕಗಳ ವಿಶ್ಲೇಷಣೆ, ಸುಧಾರಣೆ, ಮೇಲ್ವಿಚಾರಣೆ ಮಾಡಲು ಸಮಿತಿ ರಚಿಸಲು ಕ್ರಮ ತೆಗೆದುಕೊಳ್ಳಬಹುದು ಮತ್ತು ಇವೇ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲಾ ಮತ್ತು ತಾಲೂಕುಗಳ ಶ್ರೇಣಿಗಳನ್ನು ಪ್ರಕಟಿಸುವುದು

ಅತಿ ಹೆಚ್ಚಿನ ಮೌಲ್ಯದ ಟೆಂಡರ್‌ಗಳನ್ನು ಕರೆಯುವ ಮೊದಲು ಕರಡು ಬಿಡ್‌ ಡ್ಯಾಕ್ಯುಮೆಂಟ್‌ ಇ-ಪ್ರೊಕ್ಯುರ್‌ಮೆಂಟ್‌ ವೆಬ್‌ಸೈಟ್‌ ಮೂಲಕ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಬಹುದು. ಆಕ್ಷೇಪಣೆಗಳಿಗೆ ಇಲಾಖೆಗಳು ತಮ್ಮ ನಿರ್ಧಾರಗಳನ್ನು ದಾಖಲಿಸಬೇಕು ನಂತರವೇ ಬಿಡ್‌ ಡ್ಯಾಕ್ಯುಮೆಂಟ್‌ ಅಂತಿಮಗೊಳಿಸಬೇಕು

ಎಲ್ಲ ಇಲಾಖೆಗಳು ಸಿಬ್ಬಂದಿಯನ್ನು ಹೊರಗುತ್ತಿಗೆಯ ಆಧಾರದ ಮೇಲೆ ನಿಯೋಜಿಸಿಕೊಳ್ಳುತ್ತಿದ್ದು, ನಿಯೋಜಿಸಿಕೊಳ್ಳುವಾಗ ಯಾವುದೇ ರೀತಿಯ ಮೀಸಲಾತಿ ಪದ್ಧತಿಯನ್ನು ಅಳವಡಿಸಿಕೊಳ್ಳದೆ ಇರುವುದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಅನಾನುಕೂಲವಾಗುತ್ತಿರುವುದು ಕಂಡುಬಂದಿರುತ್ತದೆ. ಸರ್ಕಾರವು ಹೊರ ಗುತ್ತಿಗೆ ಮೇಲೆ ಸಿಬ್ಬಂದಿ ನಿಯೋಜಿಸಿಕೊಳ್ಳುವಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಿ ನಿಯೋಜಿಸುವಂತೆ ಸೂಕ್ತ ಆದೇಶವನ್ನು ಹೊರಡಿಸಬಹುದು

ವಿವಿಧ ಕಛೇರಿಗಳಲ್ಲಿ ಕಾರ್ಯಭಾರದ ಆದಾರದ ಮೇಲೆ ಹುದ್ದೆಗಳ ‍ಸ್ಥಳಾಂತರ ಮಾಡಬಹುದು. ಉದಾ: ತಹಶೀಲ್ದಾರ್‌ ಕಚೇರಿಗಳಲ್ಲಿನ ಗ್ರೂಪ್‌-ಸಿ ಸಿಬ್ಬಂದಿ, ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳು ಹಾಗೂ ಪೊಲೀಸ್‌ ಕಾನ್ಸ್‌ಟೇಬಲ್‌ಗಳು ಇತ್ಯಾದಿ

TAGGED:administrative reform commission reportBasavaraj Bommaiಆಡಳಿತ ಸುಧಾರಣಾ ಆಯೋಗ ವರದಿಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
20 minutes ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
38 minutes ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
1 hour ago
auto driver organ donation
Latest

ಎಂಟು ಜನರಿಗೆ ಅಂಗಾಂಗ ದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Public TV
By Public TV
1 hour ago
M.P Renukacharya
Davanagere

ರಾಹುಲ್ ಗಾಂಧಿಯ ಮೆದುಳಿಗೂ ನಾಲಿಗೆಗೂ ಲಿಂಕ್ ಇಲ್ಲ: ರೇಣುಕಾಚಾರ್ಯ ವ್ಯಂಗ್ಯ

Public TV
By Public TV
1 hour ago
Rahul Gandhi
Bengaluru City

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?