ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ನಗರದ ಟೌನ್ ಹಾಲ್ ಮುಂಭಾಗ, ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಬಗ್ಗೆ ಬಿಬಿಎಂಪಿ ಕಂದಾಯ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತ್ಯೇಕ ಎರಡು ದೂರು ದಾಖಲಾದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರ್ಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೀಗ ನಗರದಲ್ಲಿ ಅಳವಡಿಸುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ಮತ್ತು ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ. ಈ ನಡುವೆ ಬಿ.ಕೆ ಹರಿಪ್ರಸಾದ್‍ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ ಈ ಬಗ್ಗೆ ಕ್ರಮ ವಹಿಸಬೇಕಾಗಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್
ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಬಿಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಫ್ಲೆಕ್ಸ್ ಅಳವಡಿಕೆ ಮಾಡಿದ್ದ ನಲಪಾಡ್ ಅಂಡ್ ಟೀಂ ವಿರುದ್ಧ ಎಫ್‍ಐಆರ್ ದಾಖಲಾಗಿದೆ.