ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಈಶ್ವರಪ್ಪ

Public TV
1 Min Read
eshwarappa 1

ಶಿವಮೊಗ್ಗದ: ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

shivamogga 3

ಶಿವಮೊಗ್ಗದಲ್ಲಿ ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಯುವಕನ ಬರ್ಬರ ಹತ್ಯೆ – ಶಿವಮೊಗ್ಗದಲ್ಲಿ 144 ಸೆಕ್ಷನ್ ಜಾರಿ

ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

DKSHI

ಮೃತ ವ್ಯಕ್ತಿ ತುಂಬಾ ಪ್ರಾಮಾಣಿಕ ಕಾರ್ಯಕರ್ತನಾಗಿದ್ದನು. ಆತನ ಕೊಲೆ ತುಂಬಾ ನೋವು ತಂದಿದೆ. ಶಿವಮೊಗ್ಗದಲ್ಲಿ ಈ ಗೂಂಡಾಗಿರಿ ಬೆಳೆಯಲು ಬಿಡುವುದಿಲ್ಲ. ದಮನ ಮಾಡುತ್ತೇವೆ. ಇದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಚರ್ಚಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *