ಲಂಡನ್: ಮುಂದಿನ ವಾರದಿಂದ ಜನರಲ್ಲಿ ಕೋವಿಡ್ ಇದ್ದರೂ ಸೆಲ್ಫ್ ಐಸೋಲೇಷನ್‌ನಲ್ಲಿ ಇರುವ ಅಗತ್ಯ ಇಲ್ಲ ಎಂದು ಇಂಗ್ಲೆಂಡ್ ಘೋಷಿಸಿದೆ.
ಕೋವಿಡ್-19 ಸೋಂಕುನಿಂದ ರಕ್ಷಿಸಿಕೊಳ್ಳಲು ಜಾರಿಗೆ ತರಲಾಗಿದ್ದ ಎಲ್ಲಾ ರೀತಿಯ ಮಾರ್ಗಸೂಚಿಗಳನ್ನು ಇಂಗ್ಲೆಂಡ್‌ನಲ್ಲಿ ಕೊನೆಗೊಳಿಸಲಾಗುತ್ತಿದೆ. ಜನರ ಸ್ವಾತಂತ್ರಕ್ಕೆ ತೊಂದರೆಯಾಗದಂತೆ ತಮ್ಮನ್ನು ರಕ್ಷಿಸಿಕೊಳ್ಳಲು ಅವಕಾಶ ನೀಡುತ್ತಿದ್ದೇವೆ ಎಂದು ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ. ಇದನ್ನೂ ಓದಿ: ಬ್ರಿಟನ್ ರಾಣಿ 2ನೇ ಎಲಿಜಬೆತ್‌ಗೆ ಕೊರೊನಾ ಸೋಂಕು – ಚೇತರಿಕೆಗೆ ಹಾರೈಸಿ ಪ್ರಧಾನಿ ಮೋದಿ ಟ್ವೀಟ್
ಸರ್ಕಾರದ ಕೆಲವು ವೈಜ್ಞಾನಿಕ ಸಲಹೆಗಾರರು ಇದು ಅಪಾಯಕಾರಿ ಕ್ರಮ ಹಾಗೂ ಇದರಿಂದ ಸೋಂಕು ಉಲ್ಬಣಗೊಳ್ಳಬಹುದು ಎಂದು ಸೂಚನೆ ನೀಡಿದ್ದಾರೆ. ಜನರ ಜವಾಬ್ದಾರಿಯನ್ನು ಹೆಚ್ಚಿಸಲು ನಾವು ಪ್ರೋತ್ಸಾಹ ನೀಡುತ್ತಿರುವುದರಿಂದ ಇದನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಪ್ರತಿಯೊಬ್ಬರು ತಮ್ಮ ಆತ್ಮವಿಶ್ವಾಸವನ್ನು ಮರಳಿ ಪಡೆಯಬಹುದು ಎಂದಿದ್ದಾರೆ. ಇದನ್ನೂ ಓದಿ: ಲಂಡನ್ ಮಾರುಕಟ್ಟೆಯಲ್ಲಿ ಒಂದು ಹಲಸಿನ ಹಣ್ಣಿಗೆ 16,000 ರೂ!
ಭಾನುವಾರ ಇಂಗ್ಲೆಂಡ್ ರಾಣಿ 2ನೇ ಎಲಿಜಬೆತ್‌ಗೆ ಕೋವಿಡ್ ತಗುಲಿರುವ ಬಗ್ಗೆ ವರದಿಯಾಗಿದೆ. ಇಂತಹ ಸಂದರ್ಭದಲ್ಲೇ ಇಂಗ್ಲೆಂಡ್ ಆಡಳಿತ ಕೋವಿಡ್ ಮಾರ್ಗಸೂಚಿಗಳನ್ನು ತೆಗೆದುಹಾಕುತ್ತಿರುವುದು ಮುಂದೆ ಅಪಾಯವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.