ಸಾವಿನಲ್ಲೂ ಸಾರ್ಥಕತೆ ಮೆರೆದ ರಚನಾ ಕುಟುಂಬ

Public TV
1 Min Read
FotoJet 16

ತೀವ್ರ ಹೃದಯಾಘಾತದಿಂದ ನಿಧನರಾದ ಆರ್.ಜೆ ರಚನಾ (39) ಅವರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಈ ಮೂಲಕ ಸಾವಿನಲ್ಲೂ ರಚನಾ ಕುಟುಂಬ ಸಾರ್ಥಕತೆ ಮೆರೆದಿದೆ. ಬೆಳಗ್ಗೆ ರಚನಾ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಇದನ್ನೂ ಓದಿ : ಕಂಚಿನ ಕಂಠದ ಆರ್.ಜೆ ರಚನಾ ಹೃದಯಾಘಾತದಿಂದ ನಿಧನ

FotoJet 2 3

ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಇದನ್ನೂ ಓದಿ : ವೇದಿಕಾಗೆ ಸಿಕ್ತು ಬಂಪರ್ ಆಫರ್

FotoJet 3 3

ಕಳೆದ ಕೆಲ ವರ್ಷಗಳಿಂದ ರಚನಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅಲ್ಲದೇ ಹೆಚ್ಚು ಜನರ ಜತೆ ಬೆರೆಯುತ್ತಿರಲಿಲ್ಲ ಎನ್ನುತ್ತಾರೆ ಅವರ ಸ್ನೇಹಿತರು. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾ ಕರೆಸ್ಟ್‍ನಿಂದಾಗಿ ನಿಧನರಾಗಿದ್ದಾರೆ. ಇದನ್ನೂ ಓದಿ : ಮೊಗ್ಗಿನ ಮನಸು ಚಿತ್ರಕ್ಕೂ ಲವ್ 360 ಸಿನಿಮಾಗೂ ಇರೋ ಸಂಬಂಧ ಏನು?

FotoJet 1 3

ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *