ಕೊಲ್ಕತ್ತಾ: ನವಾಬ್ ಮಲಿಕ್ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕುವ ಮೂಲಕ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶರದ್ ಪವಾರ್‌ಗೆ ಸಲಹೆ ನೀಡಿದರು.
ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ನವಾಬ್ ಮಲಿಕ್ ಅವರ ಅಕ್ರಮ ಹಣ ವಿನಿಮಯದ ಕುರಿತು ಸಂವಾದ ನಡೆಸಿದ್ದಾರೆ. ಫೋನ್ ಕರೆ ಮೂಲಕ ಮಾತನಾಡಿದ ಅವರು, ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಬೆಂಬಲ ಮತ್ತು ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.
ಶರದ್ ಪವರ್ ಮಾತನಾಡಿ, ನಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಸಿಬಿಐನಿಂದ ಬಂಧನಕ್ಕೊಳಗಾಗಿದ್ದ ಸಚಿವರನ್ನು ಅಮಾನತುಗೊಳಿಸಿದ್ದೀರಾ ಎಂದು ಮಮತಾ ಬ್ಯಾನರ್ಜಿ ಅವರ ಬಳಿ ಸಲಹೆಯನ್ನು ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಹಿಂದೂಗಳಿಗೆ ಮುಸ್ಲಿಂ ಸಹೋದರರ ಸಾಂತ್ವನ
ಕಳೆದ ವರ್ಷ ನಡೆದ ರಾಜ್ಯ ಚುನಾವಣೆಗಳಿಗೆ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಕೂಡ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಿದ್ದರು. ಸಚಿವರು ಸೇರಿದಂತೆ ಹಲವಾರು ಪಕ್ಷದ ನಾಯಕರು ಕೇಂದ್ರ ತನಿಖಾ ಸಂಸ್ಥೆಗಳ ಕಣ್ಣಿಗೆ ಗುರಿಯಾಗಿದ್ದರು. ಆ ಸಮಯದಲ್ಲಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆಯ ಒತ್ತಾಯವನ್ನು ತಿರಸ್ಕರಿಸಿದ್ದರು. ಇದನ್ನೂ ಓದಿ: ಶಿವಮೊಗ್ಗ ಕೊಲೆ ಪ್ರಕರಣ – 6 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಜಾರಿ ನಿರ್ದೇಶನಾಲಯ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ಇಬ್ಬರೂ ನಾಯಕರು ವಿರೋಧ ಪಕ್ಷದ ಏಕತೆಯನ್ನು ಪುನರುಚ್ಚರಿಸಿದರು. ಈ ಮಾತುಕತೆಯ ನಂತರ ನವಾಬ್ ಮಲಿಕ್‍ರ ರಾಜೀನಾಮೆ ಕೇಳುವುದಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ತನ್ನ ನಿರ್ಧಾರ ಘೋಷಿಸಿತು.