ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಬೊಮ್ಮಾಯಿ

Public TV
1 Min Read
basvaraj bommai

ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

UKRANE AND RUSIA

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಅವರು, ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ 100 ವಿದ್ಯಾರ್ಥಿಗಳು ಎರಡು ಬಸ್‍ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ 10 ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಬಜೆಟ್‍ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ – ಪೂರ್ವಭಾವಿ ಸಭೆಯಲ್ಲಿ ಸಿಎಂ ಸ್ಪಷ್ಟನೆ

ಉಕ್ರೇನ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದರು. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

ಉಕ್ರೇನ್‍ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳು ಬ್ಯಾಚ್‍ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ


Basavaraj Bommai, Kannadigas, Russia, Ukraine, Bengaluru

Share This Article
Leave a Comment

Leave a Reply

Your email address will not be published. Required fields are marked *