ಉಕ್ರೇನ್‍ನಲ್ಲಿ ಬಾಂಬ್ ಆರ್ಭಟ – 30 ಗಂಟೆಗಳ ಕಾಲ ಮೆಟ್ರೋ ಸುರಂಗದಲ್ಲೇ ಕುಳಿತ ಭಾರತೀಯ ವಿದ್ಯಾರ್ಥಿಗಳು

Public TV
2 Min Read
Russia Ukraine crisis 6

ನವದೆಹಲಿ: ರಷ್ಯಾ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮೆಟ್ರೋ ಸುರಂಗದಲ್ಲಿ ಸತತ 30 ಗಂಟೆಗಳಿಂದ ಸಿಲುಕಿಕೊಂಡಿದ್ದಾರೆ. ಈ ನಡುವೆ ಕೆಲವು ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಸಾಗಲು ಸಹಾಯ ಕೇಳುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

UKRAINE METRO

ಸುಮಾರು 16,000 ಭಾರತೀಯರು ಉಕ್ರೇನ್‍ನಲ್ಲಿ ವಾಸಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ. ಕೆಲವು ವಿದ್ಯಾರ್ಥಿಗಳು ತಮ್ಮ ಅಪಾರ್ಟ್‍ಮೆಂಟ್‍ಗಳನ್ನು ಬಿಟ್ಟು ತೊರೆಯುತ್ತಿಲ್ಲ. ಆದರೆ ಇನ್ನು ಹಲವಾರು ಮಂದಿ ಬಾಂಬ್ ದಾಳಿಯಿಂದ ತಪ್ಪಿಸಿಕೊಳ್ಳಲು ಮೆಟ್ರೋ ರೈಲು ನಿಲ್ದಾಣಗಳಲ್ಲಿರುವ ಸುರಂಗಗಳಿಗೆ ತೆರಳಿ ಬೀಡುಬಿಟ್ಟಿದ್ದಾರೆ. ಇದನ್ನೂ ಓದಿ: ಮೆಟ್ರೋ ಸುರಂಗದಲ್ಲಿ ಅವಿತಿದ್ದಾರೆ ಕನ್ನಡಿಗರು!

Russia Ukraine crisis 5

ಈ ನಡುವೆ ಉಕ್ರೇನ್‍ನಲ್ಲಿ ವೈದ್ಯಕೀಯ ವಿದ್ಯಾಭ್ಯಾಸ ಮಾಡುತ್ತಿರುವ ಉತ್ತರ ಪ್ರದೇಶದ ಬಲ್ಲಿಯಾ ಮೂಲದ ಮನೀಶ್ ಜೈಸ್ವಾಲ್ ಎಂಬವರು ಭಾರತೀಯರನ್ನು ಸ್ಥಳಾಂತರಿಸಲು ಶೀಘ್ರವೇ ವ್ಯವಸ್ಥೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವಿನಂತಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

modi

ನಾವು ಅಸಹಾಯಕರಾಗಿದ್ದೇವೆ. ಬೆಳಿಗ್ಗೆಯಿಂದ ನಗರದಲ್ಲಿ ಮೂರು-ನಾಲ್ಕು ಬಾಂಬ್‍ಗಳ ದಾಳಿಯಾಗಿದೆ. ನಮಗೆ ಎಲ್ಲ ವಿಮಾನ ಮಾರ್ಗಗಳು ಮುಚ್ಚಲ್ಪಟ್ಟಿವೆ. ಸಾಧ್ಯವಾದಷ್ಟು ಬೇಗ ಭಾರತೀಯರನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ವಿನಂತಿಸುತ್ತೇನೆ. ಈ ವೀಡಿಯೋವನ್ನು ಮನೀಶ್ ಜೈಸ್ವಾಲ್ ಅವರು ತಮ್ಮ ಅಪಾಟ್‍ಮೆಂಟ್‍ನಿಂದ ಚಿತ್ರೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

Yogi

ಮತ್ತೊಂದು ವೀಡಿಯೋವನ್ನು ನಿಲೇಶ್ ಜೈನ್ ಅವರು ಹಂಚಿಕೊಂಡಿದ್ದು, ಸುಮಾರು 30 ಗಂಟೆಗಳ ಕಾಲ ಮೆಟ್ರೋ ನಿಲ್ದಾಣದಲ್ಲಿ ಸಿಲುಕಿಕೊಂಡಿರುವುದಾಗಿ ತಿಳಿಸಿದ್ದಾರೆ. ಜನರು ಮೆಟ್ರೋ ರೈಲ್ವೆ ನಿಲ್ದಾಣದ ಮಹಡಿ ಮೇಲೆ ಕುಳಿತುಕೊಂಡಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

dolon

ಇಂಟರ್​​ನೆಟ್ ಸಂಪರ್ಕವು ಉತ್ತಮವಾಗಿಲ್ಲ. ನಾವು ಬಾಂಬ್ ಸ್ಫೋಟಿಸುವ ಶಬ್ದವನ್ನು ಕೇಳುತ್ತಿದ್ದೇವೆ. ದಯವಿಟ್ಟು ನಮಗೆ ಸಹಾಯ ಮಾಡಿ. ನಮ್ಮನ್ನು ಇಲ್ಲಿಂದ ತ್ವರಿತವಾಗಿ ಸ್ಥಳಾಂತರಿಸುವಂತೆ ನಾನು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ನಿಲೇಶ್ ಜೈನ್ ಕೋರಿಕೊಂಡಿದ್ದಾರೆ. ಇದನ್ನೂ ಓದಿ: ಪ್ರವಾಸಿಗರಿಗೆ ಸಿಹಿ ಸುದ್ದಿ- ಡಾರ್ಜಿಲಿಂಗ್‍ನ ಟಾಯ್ ರೈಲಿನ ದರ ಇಳಿಕೆ

ಕೂ ಆ್ಯಪ್‍ನಲ್ಲಿ ವೀಡಿಯೋವೊಂದನ್ನು ಪೋಸ್ಟ್ ಮಾಡಿರುವ ಗುಜರಾತ್‍ನ ಭಾರತೀಯ ವಿದ್ಯಾರ್ಥಿಯೊಬ್ಬರು ಎಟಿಎಂಗಳು ಮತ್ತು ಅಂಗಡಿಗಳಲ್ಲಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಎಲ್ಲರೂ ಭಯಭೀತರಾಗಿದ್ದಾರೆ. ಉಕ್ರೇನ್ ತನ್ನ ವಾಯುಪ್ರದೇಶವನ್ನು ಮುಚ್ಚಿದ ನಂತರ ಅವರ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಭಾರತಕ್ಕೆ ವಿಮಾನಗಳ ಮೂಲಕ ಹಿಂದಿರುಗಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ ತಿಳಿಸಿದ್ದಾರೆ. ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

Share This Article
Leave a Comment

Leave a Reply

Your email address will not be published. Required fields are marked *