ಮಂಡ್ಯ: ಯುದ್ಧ ಪೀಡಿತ ಉಕ್ರೇನ್ ದೇಶದಲ್ಲಿರುವ ಮಂಡ್ಯ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಸುರಕ್ಷಿತವಾಗಿ ಕರೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರ ನಿಯೋಜಿಸಿರುವ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು.
ಕೇವಲ ಮಂಡ್ಯ ಅಲ್ಲದೆ ರಾಜ್ಯದ 29 ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕೂಡ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿರುವ ತುಮಕೂರಿನ ಅಕ್ಕ, ತಮ್ಮ
ಈಗಾಗಲೇ ಉಕ್ರೇನ್‍ನಲ್ಲಿ ಭಾರತೀಯರನ್ನು ಪಾರುಮಾಡುವ ಸಾಹಸಗಳು ನಡೆಯುತ್ತಿವೆ. ರಷ್ಯಾ- ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ. ಕೆಲ ಭಾರತೀಯರನ್ನು ಏರ್‌ಲಿಫ್ಟ್ ಮೂಲಕ ವಾಪಸ್ ಕರೆಸಿಕೊಂಡಿದ್ದಾರೆ. ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ಇಲ್ಲಿಯವರೆಗೆ ತಮ್ಮ ಜೀವ ಉಳಿಸಿಕೊಳ್ಳಲು ಮೆಟ್ರೋ ಸುರಂಗಗಳಲ್ಲಿ ಅಡಗಿ ಕುಳಿತಿದ್ದಾರೆ. ಇದನ್ನೂ ಓದಿ: ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್ ಸೇನೆ